ಕೆಎಂಎಫ್ ವಿಲೀನ ಪ್ರಸ್ತಾಪಕ್ಕೆ ಎಚ್‌.ಡಿ.ರೇವಣ್ಣ ಆಕ್ರೋಶ

Team Udayavani, Jan 2, 2023, 6:25 AM IST

ಕೆಎಂಎಫ್ ವಿಲೀನ ಪ್ರಸ್ತಾಪಕ್ಕೆ ಎಚ್‌.ಡಿ.ರೇವಣ್ಣ ಆಕ್ರೋಶ

ಹಾಸನ: ನಂದಿನಿ ( ಕೆಎಂಎಫ್) ಯನ್ನು ಗುಜರಾತ್‌ನ ಆಮೂಲ್‌ನೊಂದಿಗೆ ವಿಲೀನಗೊಳಿಸುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅವರ ಪ್ರಸ್ತಾಪಕ್ಕೆ ಕೆಎಂಎಫ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂದಿನಿ ಕನ್ನಡಿಗರ ಆಸ್ಮಿತೆ. ನಂದಿನಿ ಕನ್ನಡಮ್ಮನ ಮಗಳಿದ್ದಂತೆ. ಕನ್ನಡ ನಾಡಿನ ರೈತರ ಜೀವನದಲ್ಲಿ ಬೆರೆತು ಹೋಗಿರುವ ನಂದಿನಿ ಸಂಸ್ಥೆಯನ್ನು ಆಮೂಲ್‌ನೊಂದಿಗೆ ವಿಲೀನಗೊಳಿಸುವ ಅನಿವಾರ್ಯತೆಯೂ ಎದುರಾಗಿಲ್ಲ. ಗುಜರಾತ್‌ನ ಆಮೂಲ್‌ ಅನ್ನು ಮೀರಿ ಬೆಳೆಯುವ ಶಕ್ತಿ ಕೆಎಂಎಫ್ ಗೆ ಇದೆ.

ಅಂತಹ ಅಡಿಪಾಯವನ್ನು ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಹಾಕಿದ್ದಾರೆ. ದೇಶದಲ್ಲಿ ಆಮೂಲ್‌ ನಂತರ 2ನೇ ಸ್ಥಾನದಲ್ಲಿರುವ ಸಹಕಾರಿ ಕ್ಷೇತ್ರದ ಹೈನು ಉದ್ಯಮ ನಂದಿನಿ ಎಂದೇ ಖ್ಯಾತವಾಗಿರುವ ಕೆಎಂಎಫ್ ಅನ್ನು ವಿಲೀನಗೊಳಿಸುವುದಕ್ಕೆ ಕನ್ನಡಿಗರು ಎಂದಿಗೂ ಅವಕಾಶ ಕೊಡಲಾರರು. ಕೆಎಂಎಫ್ಗೆ ಧಕ್ಕೆಯಾಗುವ ಸನ್ನಿವೇಶ ಎದುರಾದರೆ ಪಕ್ಷಾತೀತವಾದ ಹೋರಾಟಕ್ಕೆ ನಾನೇ ಮುಂಚೂಣಿಯಲ್ಲಿ ನಿಲ್ಲುತ್ತೇನೆ ಎಂದು ಭಾನುವಾರ ತಿರುಪತಿಯಲ್ಲಿದ್ದ ರೇವಣ್ಣ ಅವರು ಉದಯವಾಣಿಗೆ ಪ್ರತಿಕ್ರಿಯಿಸಿದರು.

ನಿತ್ಯ 80 ಲಕ್ಷ ಲೀಟರ್‌ ಹಾಲು ಸಂಗ್ರಹ: ಬೆಂಗಳೂರಿನಲ್ಲಿ ಮೇಗಾ ಡೇರಿ ಸ್ಥಾಪಿಸುವ ಮೂಲಕ ಎಚ್‌.ಡಿ.ದೇವೇಗೌಡರು ಆಂದು ಹಾಕಿದ ಭದ್ರ ಅಡಿಪಾಯದ ಆಧಾರದಲ್ಲಿ ಈಗ ರಾಜ್ಯದ ಕೆಲವು ಹಾಲು ಒಕ್ಕೂಟಗಳು ಮೆಗಾಡೇರಿಯನ್ನು ಸ್ಥಾಪಿಸಿವೆ.

ದೇಶದ ಸಹಕಾರಿ ಕ್ಷೇತ್ರದ ಕಣ್ಣು ಕುಕ್ಕುವಂತಹ ಅಭಿವೃದ್ಧಿ ಕರ್ನಾಟದ ಹೈನು ಉದ್ಯಮದಲ್ಲಾಗುತ್ತಿದೆ. ರಾಜ್ಯದಲ್ಲಿ ಈಗ ಪ್ರತಿನಿತ್ಯ 80 ಲಕ್ಷ ಲೀಟರ್‌ ಹಾಲಿನ ಸಂಗ್ರಹ, ಸಂಸ್ಕರಣೆಯನ್ನು 14 ಹಾಲು ಒಕ್ಕೂಟಗಳು ಕೆಎಂಎಫ್ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸುತ್ತಿವೆ. ನಿರ್ವಹಣೆಯ ಲೋಪದಿಂದ ಕೆಲವು ಒಕ್ಕೂಟಗಳು ನಷ್ಟದಲ್ಲಿರಬಹುದು.

ಆದರೆ, ಹಾಸನ ಹಾಲು ಒಕ್ಕೂಟವು ಪ್ರತಿದಿನ 12 ಲಕ್ಷ ಲೀಟರ್‌ ಹಾಲು ಸಂಗ್ರಹಿಸಿ, ಸಂಸ್ಕರಿಸಿ ಪ್ರತಿ ವರ್ಷವೂ ಲಾಭದಲ್ಲಿಯೇ ಮುನ್ನಡೆಯುತ್ತಾ ರಾಜ್ಯದಲ್ಲಿ ಬೆಂಗಳೂರು ಒಕ್ಕೂಟದ ನಂತರ 2ನೇ ಸ್ಥಾನದಲ್ಲಿದೆ. ಇಂತಹ ಅಗ್ರಗಣ್ಯ ಸಹಕಾರಿ ಸಂಸ್ಥೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕಾದ ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಅವರು ಆಮೂಲ್‌ನೊಂದಿಗೆ ವಿಲೀನಗೊಳಿಸುವ ಕನಸು ಕಾಣುವುದನ್ನು ಬಿಡಬೇಕು ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.