ಲೂಟಿಕೋರ ಸರ್ಕಾರದಿಂದ ಅಭಿವೃದ್ಧಿ ಸ್ಥಗಿತ
Team Udayavani, Aug 8, 2020, 12:41 PM IST
ಹಾಸನ: ಲೂಟಿಕೋರ ಸರ್ಕಾರದಿಂದ ಜಿಲ್ಲೆಯಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್. ಡಿ. ರೇವಣ್ಣ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರಕ್ಕೆ ರೈತರು, ಕಾರ್ಮಿಕರ ಬಗ್ಗೆ ಕಾಳಜಿಯೇ ಇಲ್ಲ. ಎಲ್ಲ ಯೋಜನೆಗಳಲ್ಲೂ ಕಮೀಷನ್ ಪಡೆಯುವ ದಂಧೆ ನಡೆಸುತ್ತಿದೆ. ಗುತ್ತಿಗೆದಾರರು ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿಕೊಳ್ಳಲು ( ಎಲ್‌ಒಸಿ) ಮುಂಗಡವಾಗಿ ಆರೂವರೆ ಪರ್ಸೆಂಟ್ ಕಮೀಷನ್ ಕೊಡುತ್ತಿದ್ದಾರೆ. ಕಮೀಷನ್ ಕೊಡದ ಗುತ್ತಿಗೆದಾರರ ಬಿಲ್ ಗಳು ವರ್ಷ ಗಳಾ ದರೂ ಪಾವತಿ ಯಾಗು ವುದಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿ ಯಾವೊಂದು ಕೆಲಸವೂ ನಡೆದಿಲ್ಲ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ದ್ವೇಷದ ರಾಜಕಾರಣವನ್ನು ಸರ್ಕಾರ ಮಾಡುತ್ತಿದೆ. ಇಂಥ ದ್ವೇಷದ ರಾಜಕಾರಣಕ್ಕೆ ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತದೆ ಎಂದ ಅವರು, ನೀರಾವರಿ ಇಲಾಖೆಯಲ್ಲಿ ಹಣ ಕೊಟ್ಟ ಕಡತಗಳಿಗೆ ಸಹಿ ಹಾಕುವ ಪದ್ಧತಿ ಈ ಸರ್ಕಾರದಲ್ಲಿದೆ. ಹಣ ಕೊಡದ ಕಡತಗಳು ಮೂಲೆ ಸೇರುತ್ತಿವೆ. ವಿಧಾನಸಭಾ ಅಧಿವೇಶನ ಕರೆಯಲಿ ಅಂಕಿ ಅಂಶಗಳ ಸಹಿತ ಸರ್ಕಾರದ ಲೋಪ, ಹಾಸನ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿ ರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದು ಕೊಳ್ಳುವೆ ಎಂದು ರೇವಣ್ಣ ಹೇಳಿದರು.
ಯಗಚಿ , ವಾಟೆಹೊಳೆ ಜಲಾಶಯಗಳು ಭರ್ತಿ ಯಾಗಿ ಒಂದು ವಾರ ಕಳೆದಿದೆ. ಹೇಮಾ ವತಿ ಜಲಾಶಯವೂ ಇನ್ನೆರಡು ದಿನದಲ್ಲಿ ಭರ್ತಿ ಯಾಗಲಿದೆ. ಆದರೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಇನ್ನೂ ನೀರು ಬಿಡುವ ತೀರ್ಮಾನ ಮಾಡಿಲ್ಲ. ಹೀಗಾದರೆ ರೈತರು ಬೆಳೆಗೆ ಸಿದ್ಧತೆ ಮಾಡಿಕೊಳ್ಳುವುದು ಯಾವಾಗ ಎಂದ ಅವರು, ತಕ್ಷಣದಿಂದಲೇ ನಾಲೆಗಳಲ್ಲಿ ಬೆಳೆಗಳಿಗೆ ನೀರು ಹರಿಸಬೇಕು. ನೀರಾವರಿ ಸಲಹಾ ಸಮಿತಿ ಸಭೆಯವರೆಗೂ ಕಾಯಕೂಡದು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.