ಜಿಲ್ಲೆಯಲ್ಲಿ ಆರೋಗ್ಯಕಾರ್ಡ್ ವಿತರಣೆ ಆರಂಭ
Team Udayavani, Mar 3, 2019, 7:47 AM IST
ಹಾಸನ: ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ( ಹಿಮ್ಸ್) ಬೋಧಕ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಕೊಂಡು ಆರೋಗ್ಯ ಕಾರ್ಡ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಿಳಿಸಿದರು.
ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಯಶಸ್ವಿನಿ, ಮುಖ್ಯಮಂತ್ರಿ ಹರೀಶ್ ಸಾಂತ್ವನ, ವಾಜಪೇಯಿ ಆರೋಗ್ಯಶ್ರೀ ಮತ್ತಿತರ ಆರೋಗ್ಯ ಕಾರ್ಯಕ್ರಮಗಳನ್ನು ವಿಲೀನಗೊಳಿಸಿ ರಾಜ್ಯ ಸರ್ಕಾರ ಕಳೆದ ವರ್ಷದ ಜೂನ್ 1 ರಿಂದ ಆರೋಗ್ಯ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಿತು. ಕೇಂದ್ರ ಸರ್ಕಾರವು ಇದೇ ಮಾದರಿಯಲ್ಲಿ ಆಯುಷ್ಮಾನ್ ಭಾರತ ಎಂಬ ಆರೋಗ್ಯ ಯೋಜನೆಯನ್ನು ಕಳೆದ ವರ್ಷ ಸೆ.23 ರಂದು ಜಾರಿಗೆ ತಂದಿತು.
ಒಂದೇ ಉದ್ದೇಶ ಹೊಂದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಸೇರಿಸಿ ಆಯುಷ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ಕಳೆದ ವರ್ಷ ಡಿಸೆಂಬರ್ 20 ರಂದು ಘೋಷಣೆ ಮಾಡಲಾಗಿದೆ ಎಂದರು. ಈ ಯೋಜನೆಯಲ್ಲಿ ನೋಂದಾಯಿಸಿಕೊಂಡವರು ದೇಶದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ವಿವರ ನೀಡಿದರು.
ಹಿಮ್ಸ್‌ನಲ್ಲಿ ಕಾರ್ಡ್ ವಿರಣೆ: ಹಾಸನ ನಗರದಲ್ಲಿ ಆಯುಷ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ ಆರೋಗ್ಯ ಕಾರ್ಡ್‌ನ್ನು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಫೆ.20 ರಿಂದ ವಿತರಿಸಲಾಗುತ್ತಿದೆ. ಕಾರ್ಡ್ ಪಡೆಯಬೇಕಾದರೆ ಫಲಾನುಭವಿಗಳು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಪ್ರತಿಯೊಂದಿಗೆ 10 ರೂ. ಪಾವತಿಸಿ ಆರೋಗ್ಯ ಕಾರ್ಡ್ ಪಡೆಯಬಹುದು.
ಆಸ್ಪತ್ರೆಯ ಮೊದಲ ಮಹಡಿಯ ಕೊಠಡಿ ಸಂಖ್ಯೆ 147 ರಲ್ಲಿ ಹೊರ ರೋಗಿಗಳು, ಕೊಠಡಿ ಸಂಖ್ಯೆ 173 ರಲ್ಲಿ ಒಳ ರೋಗಿಗಳು ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್ ಪಡೆಯಬಹುದು. ಹಾಸನ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು, ಹಿರಿಸಾವೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಲವು ಸಮುದಾಯ ಆಸ್ಪತ್ರೆಗಳು ಸೇರಿ ಜಿಲ್ಲೆಯ 15 ಸರ್ಕಾರಿ ಆಸ್ಪತ್ರೆಗಳಲ್ಲಿ ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ ರಾಜ್ಯದ ಯಾವುದೇ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿಯಾದರೂ ಹೆಸರು ನೋಂದಾಯಿಸಿಕೊಂಡು ಆರೋಗ್ಯ ಕಾರ್ಡ್ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಶಿಫಾರಸು ಪಡೆಯಲೇಬೇಕು: ಆರೋಗ್ಯ ಕಾರ್ಡ್ ಹೊಂದಿರುವ ಫಲಾನುಭವಿಗಳು ಸರ್ಕಾರ ನಿಗದಿಪಡಿಸಿರುವ ಉಚಿತ ಹಾಗೂ ರಿಯಾಯ್ತಿ ದರದ ಚಿಕಿತ್ಸೆ ಪಡೆಯಬೇಕಾದರೆ ಮೊದಲು ಸರ್ಕಾರಿ ಆಸ್ಪತ್ರೆಯ ವೈದ್ಯರ ಬಳಿ ಬಂದು ಸಲಹೆ ಪಡೆಯಬೇಕು.
ಸಂಬಂಧಿಸಿದ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಸೌಲಭ್ಯವಿದ್ದರೆ ಸರ್ಕಾರ ಗುರ್ತಿಸಿರುವ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗಲು ಅವಕಾಶವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲ ಎಂದು ಸಂಬಂಧಿಸಿದ ಸರ್ಕಾರಿ ಆಸ್ಪತ್ರೆಯ ವೈದ್ಯರು ಶಿಫಾರಸು ಮಾಡಿದರೆ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ಕಾರ್ಡಿನ ನಿಬಂಧನೆಗಳಿಗೆ ಒಳಪಟ್ಟು ಉಚಿತ ಅಥವಾ ರಿಯಾಯ್ತಿ ದರದ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಹಾಸನದಲ್ಲಿ ಮಂಗಳಾ ಆಸ್ಪತ್ರೆ, ಜನಪ್ರಿಯ ಆಸ್ಪತ್ರೆ, ಮಂಜುನಾಥ ಆಸ್ಪತ್ರೆ, ಎಸ್‌ಎಸ್‌ಎಂ ಆಸ್ಪತ್ರೆ ಆರೋಗ್ಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿವೆ. ಈ ಆಸ್ಪತ್ರೆಗಳಿಗೆ ರೋಗಿಗಳು ನೇರವಾಗಿ ಹೋಗಿ ಚಿಕಿತ್ಸೆ ಪಡೆದರೆ ಅಥವಾ ದಾಖಲಾದರೆ ಆರೋಗ್ಯ ಕಾರ್ಡ್‌ನಲ್ಲಿ ನಿಗದಿಪಡಿಸಿರುವ ಮೊತ್ತದ ಉಚಿತ ಆಥವಾ ರಿಯಾಯ್ತಿ ಚಿಕಿತ್ಸೆ ಸಿಗುವುದಿಲ್ಲ.
ಮೊದಲು ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹೋಗಿ ಅಲ್ಲಿನ ವೈದ್ಯರು ರೋಗ ಪರೀಕ್ಷೆ ಮಾಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯವಿಲ್ಲವೆಂದು ಶಿಫಾರಸು ಪತ್ರ ಕೊಟ್ಟರೆ ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯಬಹುದಾಗಿದೆ ಎಂದು ವಿವರ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೆ.ಶಂಕರ್, ಹಾಸನ ವೈದ್ಯಕೀಯ ಕಾಲೇಜು ಆಡಳಿತಾಧಿಕಾರಿ ಕಲ್ಪಶ್ರೀ, ಸನಿವಾಸ ವೈದ್ಯ ಡಾ.ಕೃಷ್ಣಮೂರ್ತಿ, ಡಾ.ವೇಣುಗೋಪಾಲ್, ಡಾ.ಪ್ರವೀಣ್ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಕಾರ್ಡ್ ಸೌಲಭ್ಯಗಳು: ಆಯುಷ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಿಕೊಳ್ಳುವ ಬಿಪಿಎಲ್ ಕಾರ್ಡ್ ಹೊಂದಿರುವ ಒಂದು ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವರೆಗೆ, ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 1.50 ಲಕ್ಷ ರೂ. ವರೆಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. 1,650 ರೋಗಗಳಿಗೆ ಆರೋಗ್ಯ ಕಾರ್ಡ್ ಹೊಂದಿರುವವರು ದೇಶದ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಹೇಳಿದರು.
ಕಾರ್ಡ್ ವಿತರಣೆ ನಿರಂತರ: ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿರಂತರವಾಗಿ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ. ಹಾಗಾಗಿ ಸಾರ್ವಜನಿಕರು ನೂಕು ನುಗ್ಗಲಿನಲ್ಲಿ ಕಾರ್ಡ್ ಪಡೆಯುವ ಅಗತ್ಯವಿಲ್ಲ. ಪ್ರತಿದಿನ 200 ರಿಂದ 300 ಕಾರ್ಡ್ ವಿತರರಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
ತಾಲೂಕು ಆಸ್ಪತ್ರೆಗಳಲ್ಲೂ ಪಡೆಯಬಹುದಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ವಿತರಣೆಗೆ ಡಾ.ಪ್ರವೀಣ್ ಅವರು ನೋಡಲ್ ಅಧಿಕಾರಿಯಾಗಿದ್ದು, ನಾಲ್ವರು ಗುಮಾಸ್ತರು, 10 ಡಾಟಾ ಎಂಟ್ರಿ ಆಪರೇಟರ್‌ಗಳು, 10 ಮಂದಿ ಆರೋಗ್ಯ ಮಿತ್ರ ಕಾರ್ಯಕರ್ತರು, 15 ಕಂಪ್ಯೂಟರ್, ಪ್ರಿಂಟರ್, ಸ್ಕಾನರ್‌ಗಳನ್ನು ಒದಗಿಸಲಾಗಿದೆ ಎಂದು ಡಾ.ಬಿ.ಸಿ.ರವಿಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.