ಹೇಮಾವತಿ ಬಲದಂಡೆ ನಾಲೆಗೆ ಅನುದಾನ ಬಿಡುಗಡೆ
Team Udayavani, Feb 12, 2020, 3:00 AM IST
ಹೊಳೆನರಸೀಪುರ: ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಹೇಮಾವತಿ ಬಲದಂಡೆ ನಾಲೆ ಕಾಮಗಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 422 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಹಳ್ಳಿಮೈಸೂರು ಹೋಬಳಿ ಬಿಜೆಪಿ ಮುಖಂಡ ಡಿ.ಆರ್. ಶಿವಣ್ಣ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಾಲೆ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧುಸ್ವಾಮಿ ಅವರ ಗಮನಕ್ಕೆ ತಾರದೇ ನೀರಾವರಿ ಅಧಿಕಾರಿಗಳು ಕಾಮಗಾರಿ ಆರಂಭಿಸಿ ಗುಣಮಟ್ಟವಿಲ್ಲದಂತೆ ಕಾಮಗಾರಿ ಭರದಿಂದ ಸಾಗಿದೆ. ಈ ಬಗ್ಗೆ ಅಧಿಕಾರಿಗಳು ಗುಣಮಟ್ಟ ಕಾಪಾಡಲು ಮುಂದಾಗಬೇಕೆಂದು ಆಗ್ರಹಿಸಿದರು.
ಹೇಮಾವತಿ ನೀರಾವರಿ ಇಲಾಖೆ ಎನ್‌ಎಚ್‌ಪಿ ಬಲದಂಡನಾಲೆ ಎಚ್‌ಆರ್‌ಬಿಸಿ ಹೇಮಾವತಿ ಬಲದಂಡೆ ನಾಲೆ ಕಾಮಗಾರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಯೋಜನೆ ರೂಪಿಸಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಮಗಾರಿಗೆ ಟೆಂಡರ್ ಆಗಿದ್ದು ಅದು 422 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.
ತರಾತುರಿಯಲ್ಲಿ ಕಾಮಗಾರಿಗೆ ಚಾಲನೆ: ಗೊರೂರಿನಿಂದ ದೊಡ್ಡಕಾಡನೂರು 92.104 ಮೀ. ಇದ್ದು, 57 ಉದ್ದದ ಈ ನಾಲೆ ಈ ಭಾಗದ ಶಾಸಕ ಎ.ಟಿ.ರಾಮಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನೀರಾವರಿ ಸಚಿವರ ಗಮನಕ್ಕೆ ತರದೇ ಅಧಿಕಾರಿಗಳು ತಾರತುರಿಯಲ್ಲಿ ಕಾಮಗಾರಿಗೆ ಚಾಲನೆ ಮಾಡಿದ್ದಾರೆ ಎಂದು ದೂರಿದರು.
ಜೆಡಿಎಸ್ ಪುಕ್ಕಟೆ ಪ್ರಚಾರ: ಜೆಡಿಎಸ್ ಮುಖಂಡರು ಈ ಕಾಮಗಾರಿಯನ್ನು ನಾವೇ ಮಾಡಿದ್ದೀವಿ ಎಂದು ಹಳ್ಳಿಗಳಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು. 2008ರಲ್ಲಿ ಹರದನ ಹಳ್ಳಿಯಲ್ಲಿ ಮೊರಾರ್ಜಿ ಶಾಲೆ ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ. ಹೊಳೆನರಸೀಪುರದ ಬಸ್ ಸ್ಟಾಂಡನ್ನೂ ಬಿಜೆಪಿ ಅಧಿಕಾರಾವಧಿಯಲ್ಲಿ ಮಂಜೂರಾಗಿತ್ತು. ಇನ್ನೂ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದ್ದರೂ ಮಾಜಿ ಸಚಿವ ರೇವಣ್ಣ ಅವರು ವಿನಾ ಕಾರಣ ಬಿಜೆಪಿ ವಿರುದ್ಧ ದೂರುತ್ತಿದ್ದಾರೆಂದು ಆಪಾದಿಸಿದರು.
ಜೆಡಿಎಸ್ ಮುಖಂಡರು ಸಣ್ಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಸುತ್ತಾ ಇದು ನಮ್ಮ ಕೊಡುಗೆ ಎಂದು ಪ್ರಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೇಮಾವತಿ ನಾಲೆ ಯೋಜನೆಗೆ 422 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಈ ಬಗ್ಗೆ ಚಕಾರವೆತ್ತಿಲ್ಲ ಎಂದು ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ದೊಡ್ಡಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಡಿ.ಶಾಂತರಾಜು ಹಾಗೂ ಮುಖಂಡ ಸಿದ್ದರಾಮೇಗೌಡ ಹಾಜರಿದ್ದರು.
ಸಾಲಿಗ್ರಾಮ ಕ್ಷೇತ್ರಕ್ಕೆ ಸೇರಿಸುವ ಹುನ್ನಾರ: ಮಾಜಿ ಸಚಿವ ರೇವಣ್ಣ ಅವರು ಹಳ್ಳಿಮೈಸೂರು ಹೋಬಳಿಯನ್ನು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಪಕ್ಕದ ಸಾಲಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆ ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡ ಶಾಂತರಾಜು ಆರೋಪಿಸಿದರು.
ಕಳೆದ 2008 ರಲ್ಲಿ ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದಲ್ಲಿದ್ದ ಹಳ್ಳಿ ಮೈಸೂರು ಹೋಬಳಿಯನ್ನು ಅರಕಲಗೂಡು ತಾಲೂಕಿಗೆ ಸೇರ್ಪಡೆ ಮಾಡಲಾಗಿತ್ತು. ಆದರೆ ರೇವಣ್ಣ ಅವರು ಮತ್ತೂಮ್ಮೆ ಸಾಲಿಗ್ರಾಮಕ್ಕೆ ಸೇರಿಸಲು ಯತ್ನಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.
ಹೇಮಾವತಿ ಬಲದಂಡೆ ನಾಲೆ ಕಾಮಗಾರಿಗೆ 40 ವರ್ಷಗಳ ಹಿಂದೆ ಅಂದಿನ ಶಾಸಕರಾಗಿದ್ದ ಎ.ದೊಡ್ಡೇಗೌಡರು ಹೋರಾಟ ನಡೆಸಿದ್ದರು. ಈ ನಾಲೆ ಕಾಮಗಾರಿಗೆ ಜೆಡಿಎಸ್ ಕೊಡುಗೆ ಏನೂ ಇಲ್ಲ.
-ಶಾಂತರಾಜು, ಬಿಜೆಪಿ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.