ತುಮಕೂರಿಗೆ ಇಂದಿನಿಂದ ಹೇಮೆ ನೀರು
ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಸೂಚನೆ: ಹಾಸನ ಜಿಲ್ಲೆ ಶಾಸಕರ ವಿರೋಧ
Team Udayavani, May 1, 2020, 2:14 PM IST
ಸಾಂದರ್ಭಿಕ ಚಿತ್ರ
ಹಾಸನ: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಮಾತ್ರ ಶುಕ್ರವಾರ ದಿಂದ ನಾಲೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಹೇಮಾವತಿ ಎಡದಂಡೆ ನಾಲೆಯಲ್ಲಿ ಹಾಸನ, ಮಂಡ್ಯ ಮತ್ತು ತುಮಕೂರು ಜಿಲ್ಲೆಗೆ ನೀರು ಹರಿಯಬೇಕು. ಆದರೆ ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೀರು ಹರಿಸದೆ ತುಮಕೂರು ಜಿಲ್ಲೆಗೆ ಮಾತ್ರ ಎಡದಂಡೆ ನಾಲೆಗೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮತ್ತು ಹಾಸನ ತಾಲೂಕು ಗೊರೂರಿನಲ್ಲಿರುವ ಹೇಮಾವತಿ ಯೋಜನೆಯ ಎಂಜಿನಿಯರ್‌ಗಳಿಗೆ ಗುರುವಾರ ಸೂಚನೆ ನೀಡಲಾಗಿದ್ದು, ಶುಕ್ರವಾರದಿಂದ 15 ದಿನಗಳವರೆಗೆ ಪ್ರತಿದಿನ 2ಸಾವಿರ ಕ್ಯೂಸೆಕ್ ನಂತೆ 2 ಟಿಎಂಸಿ ನೀರು ಹರಿಯಲಿದೆ.
ಸಚಿವರ ಲಾಬಿ: ತುಮಕೂರು ಜಿಲ್ಲೆಯಲ್ಲಿ ಕುಡಿವ ನೀರಿಗೆ ತೊಂದರೆ ಇದೆ. ಹಾಗಾಗಿ ತುರ್ತಾಗಿ ನೀರು ಹರಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಹಾಸನ ಜಿಲ್ಲಾ ಹೆಚ್ಚುವರಿ ಉಸ್ತುವಾರಿ ಸಚಿವರೂ ಆಗಿರುವ ಜೆ.ಸಿ.ಮಾಧುಸ್ವಾಮಿ ಒತ್ತಡ ಹೇರಿ ನೀರು ಬಿಡಿಸಿಕೊಳ್ಳುವ ಮೂಲಕ ತವರು ಜಿಲ್ಲೆ ತುಮಕೂರಿನ ಪರ ಲಾಬಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೇಮಾವತಿ ಜಲಾಶಯದಿಂದ ನಾಲೆಗಳಲ್ಲಿ ನೀರು ಹರಿಸಿ ಅಚ್ಚುಕಟ್ಟು ಪ್ರದೇಶದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಬೇಸಿಗೆಯಲ್ಲಿ ಕುಡಿಯುವ ನೀರಿನ ಬವಣೆ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಜೆಡಿಎಸ್ ಶಾಸಕರಾದ ಎ.ಟಿ. ರಾಮಸ್ವಾಮಿ. ಎಚ್.ಡಿ.ರೇವಣ್ಣ, ಸಿ.ಎನ್. ಬಾಲಕೃಷ್ಣ ಅವರು ಒತ್ತಾಯಿಸಿದ್ದರು. ಆದರೆ ಈಗ ಹಾಸನ ಜಿಲ್ಲೆಗೆ ನೀರು ಬಿಡದೆ ಹಾಸನ ಜಿಲ್ಲೆಯ ಮೂಲಕವೇ ತುಮಕೂರು ಜಿಲ್ಲೆಗೆ ಮಾತ್ರ ನೀರು ಕೊಂಡೊಯ್ಯಲಾಗುತ್ತಿದೆ. ಈ ಬೆಳವಣಿಗೆಯು ರಾಜಕೀಯ ಸಂಘರ್ಷಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಹೇಮಾವತಿ
ಜಲಾಶಯವು ಹಾಸನ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಯ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಆದರೆ ಮೂರು ಜಿಲ್ಲೆಗೆ ನೀರು ಕೊಡದೆ ತುಮಕೂರು ಜಿಲ್ಲೆಗೆ ಮಾತ್ರ ನೀರು ಹರಿಸಲು ಮುಂದಾಗಿ ರುವುದು ಅನು ಮಾನಕ್ಕೆ ಕಾರಣವಾಗಿದೆ.
ಕುಡಿಯುವ ನೀರಿಗಾಗಿ ಬಿಡುಗಡೆ:
ಹೇಮಾವತಿ ಜಲಾಶಯದಿಂದ ತುಮಕೂರಿಗೆ 15 ದಿನಗಳ ವರೆಗೆ 2000 ಕ್ಯೂಸೆಕ್ ನೀರನ್ನು ಶುಕ್ರವಾರದಿಂದ ಬಿಡಲಾಗುತ್ತಿದೆ. ಈ ಸಂಬಂಧ ಸೂಚನೆ ಬಂದಿದೆ. ಅಚ್ಚುಕಟ್ಟು ವ್ಯಾಪ್ತಿಯ ಇನ್ನುಳಿದ ಜಿಲ್ಲೆಗಳಿಗೂ ಅಗತ್ಯವಿದ್ದರೆ ನೀರು ಬಿಡುಗಡೆಗೆ ಅಗತ್ಯದಷ್ಟು ನೀರು ಜಲಾಶಯ ದಲ್ಲಿದೆ. ಎಂದು ಹೇಮಾವತಿ ಯೋಜನೆ ಕಾರ್ಯಪಾಲಕ ಎಂಜಿನಿಯರ್ ವೆಂಕಟರ ಮಣಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ಐಸಿಸಿ ಸಭೆ ಕರೆದು ತೀರ್ಮಾನಿಸಲಿ: ಶುಕ್ರವಾರದಿಂದ ನೀರು ಬಿಡುತ್ತಿರುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಬೇರೆ ಯಾರೇ ಆಗಲಿ ಏಕ ಪಕ್ಷೀಯ ತೀರ್ಮಾನ ತೆಗೆದುಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ಅಚ್ಚುಕ್ಟ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಕೆರೆಗಳಿಗೂ ನೀರು ಹರಿಸಬೇಕು. ಹೇಮಾವತಿ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಶಾಸಕರನ್ನೊಳಗೊಂಡ ನೀರಾವರಿ ಸಲಹಾ ಸಮಿತಿ ಸಭೆ ( ಐಸಿಸಿ ಸಭೆ) ಕರೆದು ಚರ್ಚಿ ನೀರು ಬಿಡುವ
ತೀರ್ಮಾನ ಕೈಗೊಳ್ಳಬೇಕು. ಈ ಸಂಬಂಧ ಹಾಸನ ಜಿಲ್ಲೆಯ ಅಚ್ಚುಕಟ್ಟು ವ್ಯಾಪ್ತಿಯ ಜೆಡಿಎಸ್ ಶಾಸಕರು ಶುಕ್ರವಾರ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಜೆಡಿಎಸ್ ಮುಖಂಡ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.