ಮಳೆಗಾಲ ಸಮೀಪಿಸಿದರೂ ಮುಗಿಯದ ಹೆದ್ದಾರಿ ದುರಸ್ತಿ

ಶಿರಾಡಿ ಘಾಟಿಯ ದೋಣಿಗಾಲ್‌ನಿಂದ ಅಡ್ಡ ಹೊಳೆಯವರೆಗೆ ಸುಮಾರು 25ಕ್ಕೂ ಹೆಚ್ಚು ಸ್ಥ ಳಗಳಲ್ಲಿ ಭೂಕುಸಿತ

Team Udayavani, Jun 17, 2019, 10:58 AM IST

hasan-tdy-1..

ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ದುರಸ್ತಿಗೊಳ್ಳುತ್ತಿರುವ ರಸ್ತೆ.

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಕಳೆದ ವರ್ಷದ ಮಳೆಗಾಲದಲ್ಲಿ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸಂಭವಿಸಿದ ಭೂಕುಸಿತದಿಂದ ಸೃಷ್ಟಿಯಾದ ಹಲವು ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿ ಮಾಡದಿರುವುದು ಆತಂಕಕಾರಿ ಸಂಗತಿಯಾಗಿದೆ.

ಭೂಕುಸಿತ: ಕಳೆದ ವರ್ಷ ಸುರಿದ ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ದೋಣಿಗಾಲ್ನಿಂದ ಅಡ್ಡಹೊಳೆಯವರೆಗೆ ಸುಮಾರು 25ಕ್ಕೂ ಹೆಚ್ಚು ಸ್ಥಳಗಳಿಲ್ಲಿ ಭೂಕುಸಿತ ಉಂಟಾಗಿ ಹೆದ್ದಾರಿ ಆಗಾಗ ಬಂದ್‌ ಆಗಿತ್ತು. ತಾಲೂಕಿನ ಮಾರನಹಳ್ಳಿ ಸಮೀಪ ಗುಡ್ಡ ಕುಸಿದ‌ು ಟ್ಯಾಂಕರ್‌ವೊಂದು ಪ್ರಪಾತಕ್ಕೆ ಉರುಳಿ ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್‌ ನೀರಿನಲ್ಲಿ ಮೃತಪಟ್ಟಿದ್ದರು. ಚಾಲಕನ ಮೃತದೇಹವನ್ನು ಸತತ ಕಾರ್ಯಾಚರಣೆ ನಡೆಸಿ ತೆಗೆಯಲಾಗಿತ್ತು.

ನಿರಂತರ ಅಪಘಾತ: ನಿರಂತರವಾಗಿ ಭೂಕುಸಿತ ಸಂಭವಿಸುತ್ತಲೇ ಇದ್ದ ಕಾರಣದಿಂದ ಕಳೆದ ವರ್ಷ ಆ.13ರಿಂದ ನವೆಂಬರ್‌ ಮಧ್ಯ ಭಾಗದವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಪರಿಣಾಮವಾಗಿ ಬೆಂಗಳೂರು- ಮಂಗಳೂರು ನಡುವಿನ ವಾಹನ ಸಂಚಾರ ಮತ್ತು ಸರಕು ಸಾಗಣೆಯ ಮೇಲೆ ಬಲವಾದ ಹೊಡೆತ ಬಿದ್ದಿತ್ತು.

ಕಾಮಗಾರಿ ವಿಳಂಬ: ಅಡ್ಡಹೊಳೆಯಿಂದ ಮಾರನ ಹಳ್ಳಿಯವರೆಗೆ ಸುಮಾರು 12 ಕಡೆಗಳಲ್ಲಿ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿದ್ದರೆ, 13 ಕಡೆಗಳಲ್ಲಿ ಹೆದ್ದಾರಿಯ ಬದಿಯ ತಡೆಗೋಡೆ ಕುಸಿದು ಆಳವಾದ ಕಣಿವೆಗೆ ಉರುಳಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿರುವುದು ಮತ್ತು ತಡೆಗೋಡೆ ಕುಸಿದ ಸ್ಥಳಗಳಲ್ಲಿ ಮರಳಿನ ಚೀಲ ಪೇರಿಸಿ, ಬಣ್ಣದ ರಿಬ್ಬನ್‌ ಕಟ್ಟಿ ಎಚ್ಚರಿಕೆ ನೀಡಿರುವುದರ ಹೊರತಾಗಿ ಯಾವ ಕೆಲಸವೂ ಆಗಿಲ್ಲ.ಇನ್ನು ಕೆಲವಡೆ ಟಿಪ್ಪರ್‌ಗಳ ಮುಖಾಂತರ ಕುಸಿದ ರಸ್ತೆಯ ಬದಿಯಲ್ಲಿ ಮಣ್ಣು ಸುರಿಯಲಾಗಿದ್ದು ಆದರೆ ಇದು ಮಳೆಗಾಲದಲ್ಲಿ ಉಳಿಯುವುದು ಅನುಮಾನವಾಗಿದೆ.

ಎತ್ತಿನ ಹೊಳೆ ಕಾಮಗಾರಿಯಿಂದ ಆಪತ್ತು: ಕಳೆದ ಬಾರಿ ಗುಡ್ಡ ಕುಸಿದಿದ್ದ ಬಹುತೇಕ ಸ್ಥಳಗಳಲ್ಲಿ ಈ ಬಾರಿಯೂ ಅಪಾಯದ ಸ್ಥಿತಿಯೇ ಇದೆ. ಅರ್ಧ ಜರಿದು ನಿಂತಿರುವ ಮಣ್ಣಿನ ರಾಶಿ, ಕಲ್ಲು ಬಂಡೆಗಳು ಕೆಳಕ್ಕೆ ಉರುಳಲು ಕಾದು ಕುಳಿತಿವೆ. ಇತ್ತೀಚೆಗೆ ಸುರಿದ ಸಣ್ಣ ಮಳೆಗೆ ಕೆಲವು ಕಡೆ ಮಣ್ಣಿನ ರಾಶಿ ತುಸು ಕೆಳಕ್ಕೆ ಜಾರಿರುವುದು ಕಂಡುಬರುತ್ತಿದೆ. ಜೊತೆಗೆ ಬೃಹತ್‌ ಯಂತ್ರಗಳನ್ನು ಬಳಸಿ ಎತ್ತಿನಹೊಳೆ ಕಾಮಗಾರಿ ಸಹ ಅಲ್ಲಲ್ಲಿ ಹೆದ್ದಾರಿ ಬದಿ ಮಾಡುತ್ತಿರುವುದು ಮತ್ತಷ್ಟು ಆತಂಕ ತಂದಿದೆ.

ಏಕಮುಖ ಸಂಚಾರದಿಂದ ಟ್ರಾಫಿಕ್‌ ಜಾಮ್‌: ಕೆಲವೆಡೆ ಇನ್ನು ಏಕಮುಖ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿದ್ದು, ಇದರಿಂದ ಹಲವು ಸಂದರ್ಭಗಳಲ್ಲಿ ಸರಾಗ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನಗಳ ದಟ್ಟಣಿಯುಂಟಾಗಿ ವಾಹನ ಚಾಲಕರು ತೊಂದರೆ ಅನುಭವಿಸಬೇಕಾಗಿದೆ. ಹೆದ್ದಾರಿಯುದ್ದಕ್ಕೂ ಮತ್ತೆ ಭೂಕುಸಿತ ಸಂಭವಿಸಿದಂತೆ ತಡೆಯುವ ಸಂಬಂಧ ಅಧ್ಯಯನ ನಡೆಸಿ, ವರದಿ ನೀಡಲು ಎರಡು ಸಮಿತಿಗಳನ್ನು ನೇಮಿಸಲಾಗಿತ್ತು. ಬೆಂಗಳೂ ರಿನ ಭಾರತೀಯ ವಿಜ್ಞಾನ ಸಂಸ್ಥೆಯ ಮಣ್ಣು ಎಂಜಿನಿಯರಿಂಗ್‌ ವಿಭಾಗದ ಪ್ರೊ.ಬಿ.ಆರ್‌. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ನೀಡಿದ್ದ ವರದಿ ಆಧರಿಸಿ, ಶಾಶ್ವತವಾಗಿ ಭೂಕುಸಿತ ತಡೆಗೆ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಆದರೆ ಈ ವರದಿಯನ್ನು ಅನುಷ್ಠಾನಕ್ಕೆ ತರಲಾಗಿಲ್ಲ. ಭರ್ಜರಿ ಮಳೆ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ.

ಕೊನೆಯ ಹಂತದಲ್ಲಿ ಶಿರಾಡಿ ಘಾಟಿಯಲ್ಲಿ ಭೂಕುಸಿತ ತಡೆ ಕಾಮಗಾರಿ ಆರಂಭಕ್ಕೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ತಾಲೂಕಿನಲ್ಲಿದ್ದ ರಾಷ್ಟ್ರೀಯ ಹೆದ್ದಾರಿ 75 ಉಪವಿಭಾಗದ ಕಚೇರಿ ಸ್ಥಳಾಂತರ ವಾಗಿದ್ದು ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿ ಕುರಿತು ಮಾಹಿತಿ ನೀಡುವವರೆ ಇಲ್ಲದಂತಾಗಿದೆ.

ಅಪಾಯಕಾರಿ ಸ್ಥಳದ ದುರಸ್ತಿ: ಹೆಸರು ಹೇಳಲು ಇಚ್ಛಿಸದ ಹೆದ್ದಾರಿ ಎಂಜಿನಿಯರ್‌ ಒಬ್ಬರು ದೂರ ವಾಣಿಯಲ್ಲಿ ಮಾತನಾಡಿ, ಈಗಾಗಲೇ 3 ಅಪಾ¿ ುಕಾರಿ ಸ್ಥಳಗಳನ್ನು ದುರಸ್ತಿ ಮಾಡಲಾಗಿದ್ದು 4ನೇ ಅಪಾಯಕಾರಿ ಸ್ಥಳವನ್ನು ಇದೀಗ ದುರಸ್ತಿ ಮಾಡಲಾಗುತ್ತಿದೆ. ಕೆಲವೊಂದು ಕಾರಣಗಳಿಂದ ಕಾಮಗಾರಿ ತಡವಾಗಿ ಆಗುತ್ತಿದೆ ಎಂದರು.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.