ಹೊಳೆನರಸೀಪುರ: ಮತಪಟ್ಟಿ ಪರಿಷ್ಕರಣೆಗೆ ಚಾಲನೆ
Team Udayavani, Sep 2, 2019, 3:35 PM IST
ಹೊಳೆನರಸೀಪುರ ತಾ| ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಮಾರಂಭದಲ್ಲಿ ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಮಾತನಾಡಿದರು.
ಹೊಳೆನರಸೀಪುರ: ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಸೆ.1 ರಿಂದ ಅ.15 ರವರೆಗೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಹೇಳಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪ ಡಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸೆ.1 ರಿಂದ ಅ.15 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಬೂತ್ ಲೆವಲ್ ಅಧಿಕಾರಿಗಳು ಮನೆ ಮನೆಗೆ ತೆರಳಿ 2020 ರ ಜ.1 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರನ್ನೂ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ 18 ವರ್ಷ ತುಂಬುವವರು ತಮ್ಮ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.
ಈ ಪರಿಷ್ಕರಣೆ ಕೇವಲ ಸೇರ್ಪಡೆಯೊಂದೇ ಅಲ್ಲ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದು, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕರಣವನ್ನು ಸಹ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ಜನವರಿಯಲ್ಲಿ ಗ್ರಾಪಂ ಚುನಾವಣೆ ನಡೆ ಯುವ ಸಾಧ್ಯತೆಯಿದ್ದು ರಾಜ್ಯ ಚುನಾವಣಾ ಅಧಿಕಾರಿ ಸಂಜೀವ್‌ಕುಮಾರ್ ಅವರ ಸೂಚನೆ ಯಂತೆ ಮತಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಿಸಲಾಗಿದೆ. ಪ್ರತಿಯೊಬ್ಬರು ಸಹ ತಮ್ಮ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದರು.
ರಾಜ್ಯ ಚುನಾವಣಾ ಆಯೋಗ ಹೊಸದಾಗಿ ಒಂದು ವೋಟರ್ ಹೆಲ್ಪ್ಲೈನ್ ಆ್ಯಪ್ ಬಿಡು ಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಮತದಾರರ ಚೀಟಿಯಲ್ಲಿನ ದಾಖಲೆಯನ್ನು ನೋಂದಾಯಿಸಿದ್ದಲ್ಲಿ ನೀವು ಮತದಾರರ ಪಟ್ಟಿಯಲ್ಲಿ ಹಾಲಿ ಇರುವರೆ ಅಥವಾ ಇಲ್ಲವೇ ಎಂಬುದಾಗಿ ಮತ್ತು ತಮ್ಮ ಮತದಾನ ಮಾಡುವ ಬೂತ್ ಸಂಖ್ಯೆಗಳನ್ನು ಪೂರ್ಣವಾಗಿ ತೋರಿಸಲಿದೆ ಎಂದರು.
ತಾಪಂ ಇಒ ಕೆ. ಯೋಗೇಶ್ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತ ದಾನದ ಹಕ್ಕು ಪಡೆಯಬೇಕು ಎಂಬ ಉದ್ದೇಶ ದಿಂದ ಮತದಾರರ ಪಟ್ಟಿ ಪರಿಶೀಲನಾ ಅಭಿಯಾನವನ್ನು ರಾಜ್ಯ ಚುನಾವಣಾ ಆಯೋಗ ಆರಂಭಿಸಿದೆ ಎಂದರು. ಡಿವೈಎಸ್‌ಪಿ ಲಕ್ಷ್ಮೇಗೌಡ, ಬಿಇಒ ಲೋಕೇಶ್ ಮಾತನಾಡಿ, ಮತಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.