ದಳ, ಬಿಜೆಪಿ ಸೇರಿದವರಿಗೆ ಕಾಂಗ್ರೆಸ್ ಬಲದ ಅರಿವು
Team Udayavani, Oct 24, 2022, 5:08 PM IST
ಹೊಳೆನರಸೀಪುರ: ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿ ಮತ್ತು ದಳಕ್ಕೆ ತೆರಳಿದ್ದ ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ಪುನಃ ತನ್ನ ಮಾತೃ ಪಕ್ಷಕ್ಕೆ ಹಿಂದಿರುಗುವ ಸಾಧ್ಯತೆ ಅಧಿಕವಾಗಿದ್ದು ರಾಜಕೀಯ ಚಟುವಟಿಕೆ ಗರಿಗೆದರಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಆರೇಳು ತಿಂಗಳಷ್ಟೇ ಬಾಕಿಯಿದ್ದು ಅಷ್ಟರೊಳಗೆ ರಾಜಕೀಯ ಪಕ್ಷಗಳಲ್ಲಿ ಮುಖಂಡರು ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ವೇದಿಕೆ ಸಿದ್ಧ ಪಡಿಸಿಕೊಂಡಿದ್ದಾರೆ. ಕಳೆದ 2018 ರ ವಿಧಾನ ಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದಲ್ಲಿದ್ದ ಅನೇಕ ಮುಖಂಡರು ಪಕ್ಷ ತ್ಯಜಿಸಿ ಬಿಜೆಪಿ ಮತ್ತು ದಳದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಕ್ಷೇತ್ರದ ಬಗ್ಗೆ ರಾಜ್ಯ ಹೈಕಮಾಂಡ್ ಹೆಚ್ಚಿನ ಶಕ್ತಿ ತುಂಬುವ ಸಲುವಾಗಿ ಪಕ್ಷದ ಮುಖಂಡರು, ಕಾರ್ಯತಂತ್ರ ನಡೆಸಿ ಪಕ್ಷಕ್ಕೆ ಯುವ ನೇತಾರನನ್ನು ತರುವ ಸಲುವಾಗಿ ನಡೆದ ಪ್ರಯತ್ನಗಳು ಸಫಲವಾಗುವ ಸಾಧ್ಯತೆ ಅಧಿಕವಾಗಿರುವ ಹಿನ್ನೆಲೆ ಪಕ್ಷ ತ್ಯಜಿಸಿ ಅನ್ಯ ಪಕ್ಷಗಳಿಗೆ ತೆರಳಿದ್ದವರು ಸದ್ಯದಲ್ಲೆ ಮಾತೃ ಪಕ್ಷಕ್ಕೆ ಹಿಂತಿರುಗಲು ವೇದಿಕೆ ಸಿದ್ಧವಾಗುತ್ತಿದೆ. ಈ ಹಿಂದೆ ಪಕ್ಷ ತ್ಯಜಿಸಿದ್ದ ಬಹುತೇಕ ಮುಖಂ ಡರು ಯಾವುದೇ ಶರತ್ತು ಇಲ್ಲದೆ ಪಕ್ಷಕ್ಕೆ ಹಿಂತಿರುಗುತ್ತಿರುವುದು ಒಳ್ಳೆಯ ಸೂಚನೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಅನಪಮ ಮಹೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಮತ್ತು ಪಕ್ಷದ ಮುಖಂಡ ಎಂ.ಕೆ.ಶೇಷೇಗೌಡ ಅವರುಗಳನ್ನು ರಾಜ್ಯ ಕೆಪಿಸಿಸಿಗೆ ಸದಸ್ಯ ಸ್ಥಾನ ದೊರತ ಹಿನ್ನೆಲೆ ತಾಲೂಕಿನಲ್ಲಿ ಪಕ್ಷಕ್ಕೆ ನೂತನ ಅಧ್ಯಕ್ಷರ ನ್ನು ನೇಮಕ ಮಾಡಲು ಪಕ್ಷದ ಹೈಕಮಾಂಡ್ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಪಕ್ಷ ತ್ಯಜಿಸಿ ತೆರಳಿದ್ದ ಬಹುತೇಕ ಮುಖಂಡರು ಪಕ್ಷಕ್ಕೆ ಹಿಂತಿರು ಗುವ ಜೊತೆಗೆ ತಂತಮ್ಮ ಗ್ರಾಮಗಳಲ್ಲಿ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಪಣ ತೊಡುವುದಾಗಿ ಬೇಷರತ್ ಹೇಳಿಕೆ ನೀಡಿದ್ದು ಪಕ್ಷಕ್ಕೆ ಬಲ ಬಂದಿದೆ. ಪ್ರಸ್ತುತ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಪಕ್ಷಕ್ಕೆ ತೆರಳಿದ್ದ ಮುಖಂಡ ರು ಇದೀಗ ಬಿಜೆಪಿ ಪಕ್ಷಕ್ಕೆ ತಳಮಟ್ಟದಲ್ಲಿ ಹೇಳಿಕೊಳುವಂತ ಬಲ ಇಲ್ಲದೆ ಇರುವುದನ್ನು ಮನಗಂಡಿರುವ ಮುಖಂಡರು ಹಿಂದಿರುಗಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ಎರಡು ಮೂರು ತಿಂಗಳಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ಸಲುವಾಗಿ ಪಕ್ಷಗಳಲ್ಲಿ ಸ್ಥಾನಮಾನ ಹೆಚ್ಚಿಸಿಕೊಳ್ಳಲು ಬಕಾ ಪಕ್ಷಿಗಳಂತೆ ಕಾದಿದ್ದಾರೆ. ಪ್ರಸ್ತುತ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹೊಣೆಯನ್ನು ಮಾಜಿ ಸಂಸದ ಹಾಗೂ ಮಾಜಿ ಸಚಿವ ಜಿ.ಪುಟ್ಟ ಸ್ವಾಮಿಗೌಡ ಅವರ ಸೊಸೆ ಮತ್ತು ಮೊಮ್ಮಗ ಶ್ರೇಯಸ್ ಎಂ ಪಟೇಲ್ ಹೆಗಲಿಗೆ ಬೀಳುವುದು ಬಹುತೇಕ ಗ್ಯಾರಂಟಿ ಆಗಿದೆ.
ಇದೀಗ ಶ್ರೇಯಸ್ ಪಟೇಲ್ ಮತ್ತು ಅನುಪಮ ಅವರುಗಳು ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಮುಂದಾಗಿರುವುದು ಕ್ಷೇತ್ರದ ಮತದಾರರಲ್ಲಿ ಮತ್ತುಷ್ಟು ಹುರುಪು ಹೆಚ್ಚಿಸಿದೆ. ಮುಂದಿನ ನಾಲ್ಕಾರು ತಿಂಗಳಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿಲಿದೆ ಅನ್ನೋದು ಆಯಾಯಾ ಪಕ್ಷಗಳ ಕಾರ್ಯಕರ್ತರ ಅಭಿಪ್ರಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.