ಹೊಸೂರು ಕೊಪ್ಪಲು ಮುಖ್ಯ ರಸ್ತೆ ಕೆಸರು ಗದ್ದೆ

ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ; ಸ್ಥಳೀಯರಿಗೆ ನಿತ್ಯ ಸಂಕಷ್ಟ

Team Udayavani, Aug 22, 2021, 4:30 PM IST

ಹೊಸೂರು ಕೊಪ್ಪಲು ಮುಖ್ಯ ರಸ್ತೆ ಕೆಸರು ಗದ್ದೆ

ಆಲೂರು: ಮಾತೆತ್ತಿದರೆ ಆ ರಸ್ತೆಗೆ ಅಷ್ಟು ಕೋಟಿ ಈ ರಸ್ತೆಗೆ ಇಷ್ಟು ಕೋಟಿ ಎನ್ನುವ ಜನಪ್ರತಿನಿಧಿಗಳು ಒಂದು ಬಾರಿ ಕೆ. ಹೊಸಕೋಟೆ ಹೋಬಳಿ ಕಡೆ ಕಣ್ಣು ಹಾಯಿಸಿದರೆ ಕೆಸರುಮಯವಾದ ಗುಂಡಿ ಬಿದ್ದ ರಸ್ತೆಗಳೇ ಕಣ್ಣು ಮುಂದೆ ಬರುತ್ತವೆ.

ಸಾಕಷ್ಟು ಉದಾಹರಣೆ: ಹೋಬಳಿ ವ್ಯಾಪ್ತಿಯ ಮಗ್ಗೆ ಗ್ರಾಪಂಗೆ ಸೇರಿದ ಹೊಸೂರು ಕೊಪ್ಪಲು ಗ್ರಾಮ ‌ ಮುಖ್ಯ ರಸ್ತೆ ಸೇರಿ ಕೆಲವು ಗ್ರಾಮದ ರಸ್ತೆ ಗಳು ಸ್ವಲ್ಪ ಮಳೆಯಾದರೆ ಸಾಕು ಕೆಸರುಗದ್ದೆಯಂತಾಗುತ್ತವೆ. ಡಾಂಬರಿಕರಣ ಕಾಣದೆ ರಸ್ತೆಗಳು ಭಾರೀ ಪ್ರಮಾಣದಲ್ಲಿ ಹದಗೆಟ್ಟಿದ್ದು ಇದು ರಸ್ತೆಯೇ ಎಂಬ ಸಂದೇಹ ಜನಸಾಮಾನ್ಯರಲ್ಲಿ ಮೂಡುತ್ತಿದೆ. ರಾತ್ರಿ ವೇಳೆ ಗುಂಡಿಗಳು ಕಾಣದೆ ಎಷ್ಟೋ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಈ ಮಾರ್ಗದಲ್ಲಿ ಓಡಾಡುವ ‌ ಜನ ಜೀವ ಕೈಯಲ್ಲಿಡಿದು ಓಡಾಡುವಂತಾಗಿದೆ.

ಕೂಡಲೇ ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ವಾಹನ ಸವಾರರು ಮತ್ತು ಪಾದಚಾರಿಗಳು ಸ್ಥಳೀಯ ಆಡಳಿತಕ್ಕೆ ಹಲವು ಬಾರಿ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯ ಮಟ್ಟ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನಸಾಮಾನ್ಯರಿಗೆ ಹಲವು ಅನುಮಾನ ಮೂಡುವಂತಾಗಿದೆ.

ಇದನ್ನೂ ಓದಿ:ನದಿ ನೀರು ವಿಚಾರವಾಗಿ ಪರಿಹಾರ ಸಾಧ್ಯವಾಗದಿದ್ದರೆ ಜೆಡಿಎಸ್ ನಿಂದ ಹೋರಾಟ: ದೇವೇಗೌಡ

ಕಾಡಾನೆಗಳ ಉಪಟಳವೂ ಹೆಚ್ಚಳ: ಬೇಡದ ವಿಷಯಕ್ಕೆ ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳು ಸಂಘಟನೆಗಳು, ರಾಜಕೀಯ ಪಕ್ಷದ ಮುಖಂಡರು, ಹದಗೆಟ್ಟ ರಸ್ತೆಗಳ ‌ ವಿಷಯದಲ್ಲಿ ಮೌನವಷ್ಟೇ ಅಲ್ಲ ಜಾಣ ಕುರುಡುತನವನ್ನು ಪ್ರದರ್ಶನ ಮಾಡುತ್ತಾರೆ. ಕೆ.ಹೊಸಕೋಟೆ ಹೋಬಳಿ ಭಾರತದಲ್ಲಿ ಶೇ.60 ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದುಈಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು ಅವುಗಳಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ.

ತಾಲೂಕು ಆಡಳಿತಕ್ಕೆ ತಿಳಿಸಿದ್ದರೂ ಪ್ರಯೋಜನವಿಲ್ಲ
ಹಲವು ವರ್ಷಗಳಿಂದ ಹದಗೆಟ್ಟ ರಸ್ತೆ ಬಗ್ಗೆ ಹೋಬಳಿ ಮಟ್ಟದ ರೈತ ಸಂಘತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಇದುವರೆಗೂ ಗಮನ ಹರಿಸಿಲ್ಲ. ಈ ಭಾಗದ ಜನ ಒಂದು ಕಡೆಕಾಡಾನೆಯಿಂದ ಇನ್ನೊಂದೆಡೆ ಹದಗೆಟ್ಟ ರಸ್ತೆಯಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡುವ ಮೂಲಕ ಮೂಲಭೂತ ಸೌಕರ್ಯ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದು ಕೆ.ಹೊಸಕೋಟೆ ಹೋಬಳಿ ರೈತಸಂಘದ ಮುಖಂಡರಾದ ಜಯಣ್ಣ ಹೈದೂರು ತಿಳಿಸಿದ್ದಾರೆ.

ಕೆಲವು ರಸ್ತೆಗಳ ಬಗ್ಗೆ ಹಲವು ದೂರು ಬಂದಿದ್ದು ಮಳೆ ನಿಂತ ತಕ್ಷಣ ರಸ್ತೆಗಳ ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು, ಗ್ರಾಪಂ ಸಭೆಯಲ್ಲಿ ಸದಸ್ಯರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
– ಶಿವಲಿಂಗಪ್ಪ, ಪಿಡಿಒ, ಮಗ್ಗೆ ಗ್ರಾಪಂ

– ಟಿ.ಕೆ.ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.