ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಒಪಿಎಸ್‌ ಜಾರಿ


Team Udayavani, Jan 21, 2023, 4:39 PM IST

tdy-17

ಹಾಸನ: ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ಗಳಿಗೆ ನೀಡಿರುವ ಸಾಲಮನ್ನಾ, ಅಂಗನವಾಡಿ ಕಾರ್ಯಕರ್ತೆ ಯರಿಗೆ ಸಂಬಳ ಮತ್ತು ಇತರೆ ಭತ್ಯೆ ಹೆಚ್ಚಳ ಮಾಡುವುದರ ಜತೆಗೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಹೇಳಿದರು.

ಹೊಳೆನರಸೀಪುರ ಪಟ್ಟಣದ ಚೆನ್ನಾಂಬಿಕ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆದ ತಾಲೂ ಕು ಜೆಡಿಎಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯದಾದ್ಯಂತ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯು ತ್ತಿರುವ ಪಂಚ ರತ್ನ ಯಾತ್ರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಜನಪರ ಸರ್ಕಾರವನ್ನು ರಚಿಸಲಿದೆ ಎಂದರು.

ಕಾಂಗ್ರೆಸ್‌ ಚುನಾವಣಾ ಗಿಮಿಕ್‌: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರಕ್ಕೆ ನೀಡ ಲು ಉದ್ದೇಶಿಸಿದ್ದ ಕನಸಿನ ಯೋಜನೆ ಗಳಾದ ಐಐಟಿ, ಅಂತಾ ರಾಷ್ಟ್ರೀ ಯ ವಿಮಾನ ನಿಲ್ದಾಣ, ತೋಟಗಾರಿಕೆ ಮತ್ತು ಇನ್ನಿತರ ಯೋಜ ನೆಗಳನ್ನು ಬಿಜೆಪಿ ಸರ್ಕಾರವು ಅನುಷ್ಠಾನ ಗೊಳಿಸು ವಲ್ಲಿ ಅಡ್ಡಿ ಮಾಡುತ್ತಿದೆ. ಜೆಡಿಎಸ್‌ ಅಧಿಕಾರಕ್ಕೆ ಬಂದರೇ ಈ ಎರಡು ಮಹತ್ವದ ಯೋಜನೆ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ರೇವಣ್ಣ ಹೇಳಿದರು.

ಕೈ ಚುನಾವಣಾ ಗಿಮಿಕ್‌: ಕಾಂಗ್ರೆಸ್‌ನವರು ಉಚಿತ ವಿದ್ಯುತ್‌ ಭರವಸೆ ಮತ್ತು ಪ್ರತಿ ಬಿಪಿಎಲ್‌ ಕುಟುಂ ಬಕ್ಕೆ ಮಾಸಿಕ ರೂ 2000 ರೂ. ನೀಡುವ ಭರವಸೆ ಕೇವಲ ಚುನಾವಣಾ ಗಿಮಿಕ್‌ ಅಷ್ಟೇ. ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಯಾತ್ರೆ ಅರ್ಥಹೀನ. ವಿಪಕ್ಷವಾಗಿ ಕಾಂಗ್ರೆಸ್‌ ತನ್ನ ಕರ್ತವ್ಯ ನಿರ್ವಹಿಸುವು ದರಲ್ಲಿ ಕಾಂಗ್ರೆಸ್‌ ವಿಫ‌ಲವಾಗಿದೆ. ನಮ್ಮ ರಾಜ್ಯಕ್ಕಾಗಲಿ ಹಾಸನ ಜಿಲ್ಲೆಗಾ ಗಲಿ ಎರಡು ರಾಷ್ಟ್ರೀಯ ಪಕ್ಷಗಳು ಯಾವ ಕೊಡುಗೆ ನೀಡಿವೆ ಎಂದು ಪ್ರಶ್ನಿಸಿದರು.

ಎರಡನೆ ಪಟ್ಟಿ ಬಿಡುಗಡೆ ಶೀಘ್ರ: ಪಕ್ಷದವನನ್ನು ಬೇರು ಮಟ್ಟದಿಂದ ಬಲಪಡಿಸಲು ಮತ್ತು ಸಕ್ರಿಯ ಕಾರ್ಯಕರ್ತರಿಗೆ ಸೂಕ್ತವಾದ ಸ್ಥಾನಮಾನವನ್ನು ಮುಂದಿನ ದಿನಗಳಲ್ಲಿ ಪಕ್ಷವು ಅಧಿಕಾರಕ್ಕೆ ಬಂದ ನಂತರ ನೀಡಲಾಗುತ್ತದೆ. ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ಗಳ ಎರಡನೆಯ ಪಟ್ಟಿ ಆದಷ್ಟು ಬೇಗ ಬಿಡುಗಡೆ ಮಾಡಲಾಗುತ್ತದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಹಾಸನ ಜಿಲ್ಲೆಯ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಹೇಳಿದರು.

ಹೊಳೆನರಸೀಪುರ ತಾಲೂಕು ಜೆ.ಡಿ.ಎಸ್‌.ಅಧ್ಯಕ್ಷ ಎಚ್‌.ಎಸ್‌.ಪುಟ್ಟಸೋಮಪ್ಪ, ತಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ, ಉಪಾಧ್ಯಕ್ಷರಾದ ಜವರೇಗೌಡ, ಪುರಸಭೆ ಅಧ್ಯಕ್ಷೆ ಎನ್‌.ಜ್ಯೋತಿ ಮಂಜುನಾಥ್‌, ಜೆಡಿಎಸ್‌ ಮುಖಂಡರಾದ ಮುತ್ತಿಗೆ ರಾಜೇಗೌಡ, ಲಕ್ಕೂರು ಬಸವರಾಜು, ಎಚ್‌.ವೈ.ಚಂದ್ರಶೇಖರ್‌, ದೊಡ್ಡಮಲ್ಲೇಗೌಡ.ಹೊನವಳ್ಳಿ ಸತೀಶ್‌, ಎಚ್‌. ಎನ್‌ ದೇವೇಗೌಡ ( ಪಾಪಣ್ಣಿ) ಮತ್ತು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.