ಭಾಷೆ ನಾಶವಾದರೆ ಸಂಸ್ಕೃತಿಗೂ ಧಕ್ಕೆ
Team Udayavani, May 24, 2019, 3:00 AM IST
ಹಾಸನ: ನಾಡಿನ ಭಾಷೆ ನಾಶವಾದರೆ ಸಂಸ್ಕೃತಿಯೂ ನಾಶವಾಗುತ್ತದೆ. ಆದ್ದರಿಂದ ಕನ್ನಡಿಗರಿಗೆ ಸಿಗುವ ಅವಕಾಶಗಳು ಕೈ ತಪ್ಪದಂತೆ ನೋಡಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಹಂಪನಹಳ್ಳಿ ತಿಮ್ಮೇಗೌಡ ಹೇಳಿದರು.
ನಗರದ ಬಿ.ಕಾಟೇಹಳ್ಳಿಯಲ್ಲಿರುವ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ-ಜೆಸ್ವಿಟ್ ವತಿಯಿಂದ ನವಸದನ ಭವನದಲ್ಲಿ ರಾಜ್ಯಮಟ್ಟದ ಕನ್ನಡ ನಾಡು ನುಡಿ ಸಂಗೋಪನೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಭಾರತ ಬಹು ಸಂಸ್ಕೃತಿ ದೇಶ: ಭಾರತ ಬಹು ಸಂಸ್ಕೃತಿಯ ದೇಶ ಹಾಗೆಯೇ ಕನ್ನಡ ನಾಡು ಬಹು ಸಂಸ್ಕೃತಿಯ ಬೀಡು. ಕರ್ನಾಟಕದಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿರುವುದು ದುರುಂತವೇ ಸರಿ, ಕನ್ನಡ ನುಡಿಯ ಬಗ್ಗೆ ಕನ್ನಡಿಗರಿಗೇ ಇರುವ ಕೀಳರಿಮೆ ಹೋಗಲಾಡಿಸಿ ಭಾಷೆಯ ಸತ್ವವನ್ನು ತಾಯಿಯ ತೊಟ್ಟಿಲಿನಿಂದಲೇ ಉಳಿಸಿಬೆಳೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕನ್ನಡಕ್ಕೆ ಕ್ರೈಸ್ತ ಮಿಶನರಿಗಳ ಕೊಡುಗೆ ಅಪಾರ: ಭಾಷೆ ನಾಶವಾದರೆ ಆ ಭಾಷೆಯ ಜನಾಂಗದ ಸಂಸ್ಕೃತಿ ನಾಶವಾಗುತ್ತದೆ. ಕ್ರೆçಸ್ತ ಮಿಷನರಿಗಳ ಕೊಡುಗೆ ಹಳೆಗನ್ನಡ, ನಡುಗನ್ನಡ ಸಂದರ್ಭದಲ್ಲಿ ಸಾಕಷ್ಟಿದೆ. ಜೆಸ್ವಿಟ್ ಯುವ ಸಹೋದರರು ಧಾರ್ಮಿಕ ಸಂಸ್ಥೆಗಳಲ್ಲಿ ಕನ್ನಡ ನಾಡು ನುಡಿ ಸಂಗೋಪನೆಗೆ ಸಹಕಾರ ನೀಡುತ್ತಿರುವುದು ಸಂತೋಷದಾಯಕ ಬೆಳವಣಿಗೆ ಎಂದು ಹೇಳಿದರು.
ವಚನ ಸಾಹಿತ್ಯದ ಹಿರಿಮೆ: ಹಾಸನದ ಎವಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಸೀ.ಚ. ಯತೀಶ್ವರ್ ಅವರು ಮಾತನಾಡಿ, ವಚನ ಸಾಹಿತ್ಯವು ಇಡೀ ಜಗತ್ತಿನ ಎಲ್ಲ ಸಾಹಿತ್ಯದಲ್ಲೂ ಗುರುತಿಸುವಂತಹ ಸತ್ವ ಪಡೆದುಕೊಂಡಿದೆ. ಬಸವಣ್ಣನವರ ವಚನಗಳು ಇಂದಿನ ಸಮಾಜಕ್ಕೆ ದಾರಿ ದೀಪವಾಗಿವೆ ಯವ ಸಮುದಾಯ ಅದರ ಅರ್ಥವನ್ನು ಗ್ರಹಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಚಾಲಕರಾದ ಫಾ. ಫ್ರಾನ್ಸಿಸ್ ಫೆರ್ನಾಂಡಿಸ್, ಕಾಲೇಜಿನ ನಿರ್ದೇಶಕ ಫಾ. ರೋಶನ್ ಪಿರೇರಾ ಅವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಶುಂಪಾಲರಾದ ದಿನೇಶ್ ಎಂ. ಗಾಂವಾಕರ್ ಹಾಗೂ ಕಾಲೇಜಿನ ಕನ್ನಡ ಅಧ್ಯಾಪಕ ಡಿ.ಬಿ. ರಂಗೇಗೌಡ ವರು ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಜೆಸ್ವಿಟ್ ಸಹೋದರಾರದ ಸ. ಕಿರಣ್ ಪಾಶನ್‌ರವರು ಕಾರ್ಯಕ್ರಮ ನಿರೂಪಿಸಿದರು. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಅನೇಕ ಜೆಸ್ಟಿಟ್ ಸಹೋದರರು ಹಾಗೂ ಕಾಲೇಜಿನ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.