ನೈತಿಕತೆ ಇದ್ದರೆ ಗೃಹ ಸಚಿವರು ರಾಜೀನಾಮೆ ನೀಡಲಿ

ತಿಂಗಳೊಳಗೇ ಗೃಹ ಸಚಿವರ ಅಸಮರ್ಥತೆ ಸಾಬೀತು: ಜೆಡಿಎಸ್‌ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಟೀಕೆ

Team Udayavani, Aug 28, 2021, 4:50 PM IST

ನೈತಿಕತೆ ಇದ್ದರೆ ಗೃಹ ಸಚಿವರು ರಾಜೀನಾಮೆ ನೀಡಲಿ

ಹಾಸನ: ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾದ ಒಂದು ತಿಂಗಳೊಳಗೇ ತಾವು ಗೃಹ ಸಚಿವರಾಗಲು ಅದಕ್ಷ, ಅಸಮರ್ಥ ಎಂಬುದನ್ನು ಖಚಿತಪಡಿಸಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಲಿ ಎಂದು ರಾಜ್ಯ ಜೆಡಿಎಸ್‌ ಅಧ್ಯಕ್ಷ, ಮಾಜಿ ಸಚಿವ ಎಚ್‌.ಕೆ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೃಹ ಸಚಿವರಾದ ಬಳಿಕ ಆರಗ ಜ್ಞಾನೇಂದ್ರ ಅವರು ನಿದ್ದೆಯೇ ಬರುತ್ತಿಲ್ಲ. ಸಚಿವನಾಗಿ ನನ್ನ ಕಷ್ಟ ನನಗೇ ಗೊತ್ತು ಎಂದೆಲ್ಲಾ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರರಕಣದಲ್ಲಿಯೂ ಸಚಿವರ ಹೇಳಿಕೆ ಅವರ ಅಸಹಾಯಕತೆಯನ್ನು ಸಾಬೀತು ಪಡಿಸಿದೆ. ಅವರು ರಾಜೀನಾಮೆ ಕೊಡಲಿ ಎಂದು ಜೆಡಿಎಸ್‌ ಒತ್ತಾಯಿಸುವುದಿಲ್ಲ. ಆದರೆ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಲಿ ಎಂದರು.

ಗೃಹ ಸಚಿವರ ವಿರುದ್ಧ ವಾಗ್ಧಾಳಿ: ವಿದ್ಯಾರ್ಥಿನಿ ಅಷ್ಟು ಹೊತ್ತಿನಲ್ಲಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರು ಹೇಳುವುದಾದರೆ ಸಂಜೆ 6 ಗಂಟೆ ನಂತರ ಹೆಣ್ಣು ಮಕ್ಕಳು ಮನೆ ಬಿಟ್ಟು ಹೊರಹೋಗ ಬಾರದೆಂದು ಆದೇಶ ಹೊರಡಿಸಲಿ. ನಾಯಿಗಳಿವೆ ಎಂದು ಮಕ್ಕಳನ್ನು ಹೊರಗೆ ಕಳುಹಿಸದಿರಲು ಆಗುತ್ತದೆಯೇ ? ಗೃಹ ಸಚಿವರ ಹೇಳಿಕೆ ಹೇಸಿಗೆ ತರವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಿದ್ದರೆ, ಸಂಬಂಧಪಟ್ಟ ಪೊಲೀಸ್‌ ಠಾಣೆಯ
ಸಿಬ್ಬಂದಿ ಮೇಲೆ ಈ ವೇಳೆಗಾಗಲೇ ಸಸ್ಪೆಂಡ್‌ ಮಾಡಿ ಕ್ರಮ ಕೈಗೊಳ್ಳ ಬೇಕಾಗಿತ್ತು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮದ್ಯದ ಪಾರ್ಟಿಗಳು,
ದರೋಡೆಯಂಥ ಅನಾಚಾರ ನಡೆಯುತ್ತಿರುವುದು ಪೊಲೀಸರಿಗೆ ಗೊತ್ತಿರಲಿಲ್ಲವೇ? ಏಕೆ ಗಸ್ತು ತಿರುಗುತ್ತಿರಲಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಮಾದರಿ ಗೋಶಾಲೆ ನಿರ್ಮಾಣ ಕಾರ್ಯಕ್ಕೆ ಸಚಿವ ಸುಧಾಕರ್ ಚಾಲನೆ

ಅದಕ್ಷ ಪೊಲೀಸರೇ ಹೆಚ್ಚು: ಪೊಲೀಸ್‌ ಇಲಾಖೆಯಲ್ಲಿ ಶೇ. 30 ಹುದ್ದೆಗಳು ಖಾಲಿ ಇವೆ. ಪೊಲೀಸ್‌ ಅತಿ ಮುಖ್ಯವಾದ ಇಲಾಖೆ ಅಗತ್ಯ ಸಿಬ್ಬಂದಿ ಇಲ್ಲದಿದ್ದರೆ ಕಾನೂನು, ಸುವ್ಯವಸ್ಥೆ ಕಾಪಾಡುವುದು. ಅಪರಾಧ ಪ್ರಕರಣಗಳನ್ನು ತಡೆಯುವುದು ಹೇಗೆ? ಪೊಲೀಸರನ್ನು ಹೊರ ಗುತ್ತಿಗೆಯಲ್ಲಿ ನೇಮಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸಿಬ್ಬಂದಿ ನೇಮಕಾತಿ ಆಗಬೇಕು. ಯುವಕರು ತನಿಖೆಗೆ ಬರಬೇಕು. ಈಗಿರುವ ಪೊಲೀಸ್‌ ಸಿಬ್ಬಂದಿಯಲ್ಲಿ ಅದಕ್ಷರೇ ಹೆಚ್ಚಿದ್ದು,ಕಮೀಷನ್‌ ದಂಧೆ, ಲಂಚ ವಸೂಲಿಯಲ್ಲಿ ತೊಡಗಿರುವವರೇ ಹೆಚ್ಚು. ಅವರನ್ನು ಕೆಲ ವರ್ಷಗಳ ಕಾಲ ಗ್ರಾಮಾಂತರ ಪ್ರದೇಶಕ್ಕೆ ವರ್ಗ ಮಾಡಲಿ. ಪೊಲೀಸ್‌ ಮತ್ತು ಕಂದಾಯ ಇಲಾಖೆ ಪ್ರಾಮಾಣಿಕವಾಗಿ ಹಾಗೂ ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ ಸರ್ಕಾರದ ಇತರೆ ಇಲಾಖೆಗಳಲ್ಲಿ ಆಡಳಿತ ಚನ್ನಾಗಿರುತ್ತದೆ ಎಂದರು.

ಜೆಡಿಎಸ್‌ ತೀವ್ರ ಖಂಡನೆ: ಮೈಸೂರಿನ ಪ್ರಕರಣವನ್ನು ನಾನು ವೈಯಕ್ತಿಕವಾಗಿ ಹಾಗೂ ಪಕ್ಷದಿಂದ ತೀವ್ರವಾಗಿ ಖಂಡಿಸುತ್ತೇವೆ. ಇದು ಮೈಸೂರಿಗೆ ಕಪ್ಪು ಚುಕ್ಕೆ. ದೆಹಲಿಯ ನಿರ್ಭಯ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಹ ಪ್ರಕರಣವಿದು. ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಘನತೆ ಹಾಳಾಗಿದೆ. ಪೊಲೀಸ್‌ ವೈಫ‌ಲ್ಯವೇ ಇದಕ್ಕೆ ಕಾರಣ. ಪ್ರಕರಣ ನಡೆದು 2 ದಿನಗಳಾದರೂ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ. ಇದು ಪೊಲೀಸರ ವೈಫ‌ಲ್ಯಕ್ಕೆ ಸಾಕ್ಷಿಯಾಗಿದೆ. ಈ ಪ್ರಕರಣವನ್ನು ಯಾವುದೇ ಪಕ್ಷ ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದರು.

ಗಂಭೀರ ಕ್ರಮಕ್ಕೆ ಒತ್ತಾಯ
ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿಯವರೇ ಮಧ್ಯ ಪ್ರವೇಶಿಸಿ ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಲುಕ್ರಮಕೈಗೊಳ್ಳಬೇಕು.ಕಳೆದ2 ವರ್ಷಗಳಿಂದ ರಾಜ್ಯದಲ್ಲಿ ಮಹಿಳೆಯರ ಮೇಲೆ ಬಹಳಷ್ಟು ದೌರ್ಜನ್ಯ ಪ್ರಕರಣಗಳು ನಡೆದಿವೆ. ದೆಹಲಿಯಲ್ಲಿರುವಂತೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.