ನೀರು ಹರಿಸದಿದ್ದರೆ ಅಹೋರಾತ್ರಿ ಧರಣಿ: ಶ್ರೀನಿವಾಸ್‌ಗೌಡ


Team Udayavani, Aug 20, 2019, 5:08 PM IST

002

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಅಧ್ಯಕ್ಷ ಶ್ರೀನಿವಾಸ್‌ಗೌಡ ಮಾತನಾಡಿದರು. ಗೌರವಾಧ್ಯಕ್ಷ ಅಸ್ಲಾಂಪಾಷ ಪದಾಧಿಕಾರಿಗಳಾದ ರೆಹಮತ್‌, ಶಿವಕುಮಾರ್‌, ಬಸವಣ್ಣ ಇದ್ದರು.

ತುರುವೇಕೆರೆ: ತಾಲೂಕಿನಲ್ಲಿರುವ ಹೇಮಾವತಿ ನಾಲೆಯಲ್ಲಿ ನೀರು ಹರಿದು ಹೋಗುತ್ತಿದ್ದರೂ, ವಿತರಣಾ ನಾಲೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸದ ಜಿಲ್ಲಾಡಳಿತ ರೈತರಿಗೆ ವಂಚನೆ ಎಸಗುತ್ತಿದ್ದು, ತಾಲೂಕಿನ ಕೆರೆ-ಕಟ್ಟೆಗಳಿಗೆ ನೀರು ಹರಿಸದಿದ್ದರೆ ಪಟ್ಟಣದ ಹೇಮಾವತಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸ ಲಾಗುವುದೆಂದು ರೈತ ಸಂಘದ ಅಧ್ಯಕ್ಷ ಶ್ರೀನಿವಾಸ್‌ಗೌಡ ಎಚ್ಚರಿಸಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿಗಾಗಿ ಅತಿ ಹೆಚ್ಚು ಭೂಮಿ ಕಳೆದುಕೊಂಡವರು ನಮ್ಮ ತಾಲೂಕಿನ ರೈತರು. ಆದರೂ ನೀರುಕೊಡದೇ ವಂಚಿಸಲಾಗಿದೆ. ಕೊನೇ ದಿನಗಳಲ್ಲಿ ಅಲ್ಪಮಟ್ಟಿನ ನೀರು ಬಿಡುಗಡೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿಗೆ 5 ಟಿ.ಎಂ.ಸಿ. ನೀರು ನ್ಯಾಯಯುತ ವಾಗಿ ಸಿಗಬೇಕು. ಜಲಾಶಯ ಭರ್ತಿಯಾಗಿದ್ದರೂ, ತಾಲೂಕಿಗೆ ನೀರು ಹರಿಸದೆ ನೇರವಾಗಿ ಕುಡಿವ ನೀರಿನ ಉದ್ದೇಶಕ್ಕೆಂದು ನೆಪಹೇಳುತ್ತ ತಾಲೂಕಿನಿಂದ ಮುಂದೆ ತಗೆದುಕೊಂಡು ಹೋಗುತ್ತಿರುವುದು ಖಂಡನೀಯ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ತಾಲೂಕಿನ ಕೆರೆ-ಕಟ್ಟೆಗಳಿಗೆ ವಿತರಣಾ ನಾಲೆಗಳ ಮೂಲಕ ನೀರು ಹರಿಸಬೇಕು. ಇಲ್ಲದಿದ್ದರೆ ಆ. 26 ರಂದು ಧರಣಿ ಹಮ್ಮಿಕೊಳ್ಳಲಾಗುವುದೆಂದು ಗುಡುಗಿದರು.

ರೈತ ಸಂಘಟನೆ ಗೌರವಾಧ್ಯಕ್ಷ ಅಸ್ಲಾಂಪಾಷ ಮಾತನಾಡಿ, ನೀರು ಬಿಡುಗಡೆಗೂ ಮುನ್ನ ನಾಲೆಯಲ್ಲಿ ಹೂಳೆತ್ತುವ ಹಾಗೂ ಜಂಗಲ್ ಕಟ್ಟಿಂಗ್‌ ನೆಪದಲ್ಲಿ ಕೋಟ್ಯಂತರ ರೂ. ಲಪಟಾಯಿಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತಾಲೂಕಿನ ರೈತರಿಗೆ ಮೋಸ ಮಾಡಿದ್ದಾರೆ.

ಇಂತಹ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದಬ್ಬೇಘಟ್ಟ ಏತ ನೀರಾವರಿ ವ್ಯಾಪ್ತಿಗೆ ಬರುವ ಕೆರೆಗಳಿಗೂ ನೀರು ಹರಿಸಬೇಕು.

ಸಾಧ್ಯವಾದರೆ ಏತ ನೀರಾವರಿಯಲ್ಲಿ ಬಳಸಿರುವ ಪೈಪ್‌ಲೈನ್‌ ಸಂಪೂರ್ಣ ಕಳಪೆಯಾಗಿದ್ದು, ಹೊಸ ದಾಗಿ ಗುಣಮಟ್ಟದ ಪೈಪ್‌ಲೈನ್‌ ಅಳವಡಿಸಿ ಸಮರ್ಪಕ ರೀತಿಯಲ್ಲಿ ನೀರು ಹರಿಸುವಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕೆಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ರೆಹಮತ್‌, ಶಿವಕುಮಾರ್‌, ಬಸವಣ್ಣ, ಬಾಬಾಜಾನ್‌, ಶೇಖರ್‌, ಗೋವಿಂದರಾಜು, ಕುಮಾರ್‌, ಚಂದ್ರಯ್ಯ, ಕಿರಣ್‌, ಲೋಕೇಶ್‌, ಸುರೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.