ರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಫಾರಿ

Team Udayavani, May 3, 2023, 4:10 PM IST

tdy-18

ಸಕಲೇಶಪುರ: ಮೂರು ಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ವಾಹನ ವಶಕ್ಕೆ ಪಡೆದು ರೆಸಾರ್ಟ್‌ ಮಾಲಿಕನೋರ್ವನ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಾನುಬಾಳ್‌ ಹೋಬಳಿ ಮೂರು ಕಣ್ಣು ಗುಡ್ಡ ರಕ್ಷಿತ ಅರಣ್ಯ ಸೆಕ್ಷನ್‌ 4 ಅರಣ್ಯ ಪ್ರದೇಶದ ಅಚ್ಚನಹಳ್ಳಿ ಗ್ರಾಮದ ಸರ್ವೆ ನಂ.93ರಲ್ಲಿ ಸ್ಟೋನ್‌ವ್ಯಾಲಿ ಎಂಬ ರೆಸಾರ್ಟ್‌ನ ವಾಹನದಲ್ಲಿ ಪ್ರವಾಸಿಗರು ಅಕ್ರಮವಾಗಿ ರಕ್ಷಿತಾರಣ್ಯ ಪ್ರವೇಶಿಸಿ ಮೋಜು ಮಸ್ತಿ ಮಾಡುತಿದ್ದರೆಂಬ ಖಚಿತ ಮಾಹಿತಿ ಪಡೆದು, ವಲಯ ಅರಣ್ಯಾಧಿಕಾರಿ ಶಿಲ್ಪ ಅವರು ಅರಣ್ಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ತಕ್ಷಣ ಜೀಪ್‌ ಚಾಲಕ ಜೀಪನ್ನು ಬಿಟ್ಟು ಪರಾರಿಯಾಗಿದ್ದು, ನಂತರ ಅರಣ್ಯ ಪ್ರದೇಶದೊಳಗಿದ್ದ ಜೀಪನ್ನು ವಶ ಪಡಿಸಿ ಕೊಳ್ಳಲಾಗಿದೆ.

ವಾಣಿಜ್ಯ ಉದ್ದೇಶಕ್ಕೆ ಪ್ರವಾಸಿಗರನ್ನು ರಕ್ಷಿತಾ ಅರಣ್ಯ ಪ್ರದೇಶದೊಳಗೆ ವಾಹನದಲ್ಲಿ ಸಫಾರಿ ಕರೆದುಕೊಂಡು ಹೋ ಗುತ್ತಿರುವುದು ಕಂಡು ಬಂದ ಹಿನ್ನೆಲೆ ಸ್ಟೋನ್‌ವ್ಯಾಲಿ ರೆಸಾರ್ಟ್‌ ಮಾಲಿಕ ಸುಭಾಷ್‌ ಸ್ಟೀಫ‌ನ್‌ ಹಾಗೂ ಚಾಲಕನ ಮೇಲೆ ಕರ್ನಾಟಕ ಅರಣ್ಯ ಕಾಯ್ದೆ 1960 ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕಾರ 24,62,104 ಇನ್ನಿತರ ಪ್ರಕರಣ ದಾಖಲಿಸಲಾಗಿದೆ.

ಪದೇ ಪದೇ ರೆಸಾರ್ಟ್‌ ಮಾಲಿಕರು ರಜೆ ಸಂದರ್ಭದಲ್ಲಿ ವಾಣಿಜ್ಯ ಉದ್ದೇಶಕ್ಕೆ ಪ್ರವಾಸಿಗರನ್ನು ರಕ್ಷಿತಾರಣ್ಯ ಪ್ರದೇಶ ದೊಳಗೆ ಸಫಾರಿಗೆ ಕರೆದುಕೊಂಡು ಹೋಗುವುದು ಹೆಚ್ಚಿದ್ದರಿಂದ ಎಸಿಎಫ್ ಸುರೇಶ್‌ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಈ ಸಂಧರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಶಿಲ್ಪ, ಅರಣ್ಯ ಸಿಬ್ಬಂದಿಗಳಾದ ಮಹದೇವ್‌, ಹನುಮಂತು, ಲೋಕೇ ಶ್‌, ಯೋಗೇಶ್‌, ರಮೇಶ್‌, ಸುನೀಲ್‌ ಹಾಗೂ ಚಾಲಕ ಚಿದಾನಂದ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.