ಸರ್ಕಾರಿ ಆಸ್ಪತ್ರೆಯಲ್ಲಿ ಅಶುಚಿತ್ವ, ಲೋಕಾಯುಕ್ತ ಬೇಸರ

Team Udayavani, Jan 26, 2019, 7:59 AM IST

hospital.jpg

ಬೇಲೂರು: ಪಟ್ಟಣದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ರೇವಣ್ಣ, ಶುಚಿತ್ವ ಕಾಪಾಡದ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿನ ಚುಚ್ಚು ಮದ್ದು ಕೊಠಡಿ, ಪ್ರಯೋಗಾಲಯ, ಪುರುಷರು, ಮಹಿಳೆಯರು, ಮಕ್ಕಳ ವಾರ್ಡ್‌, ಡಯಾಲಿಸಿಸ್‌ ಕೇಂದ್ರ, ಎಕ್ಸರೆ ವಿಭಾಗ ಮತ್ತು ಉಪಾಹಾರ ಗೃಹಕ್ಕೆ ಭೇಟಿ ನೀಡಿದ ಇನ್ಸ್‌ಪೆಕ್ಟರ್‌ ಪರಿಶೀಲಿದರು. ಆಸ್ಪತ್ರೆ ಕೊಠಡಿಗಳ ಕಿಟಕಿ ಗಾಜುಗಳು ಹೊಡೆದಿದ್ದು, ಹಾಸಿಗೆ ಹರಿದು ಹೋಗಿರುವುದನ್ನು ಕಂಡು ಆಸ್ಪತ್ರೆಯ ಸ್ವಚ್ಛತೆ ಕಾಪಾಡಲು ವಿಫ‌ಲವಾಗಿರುವ ವೈದ್ಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಗುತ್ತಿಗೆ ಪಡೆದಿರುವ ಟೆಂಡರ್‌ದಾರನಿಗೆ ಸ್ವಚ್ಛತೆ ಕಾಪಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ತಾಕೀತು ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ರೇವಣ್ಣ, ಸರ್ಕಾರಿ ಆಸ್ಪತ್ರೆಯ ವೈದ್ಯರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಮೆಚ್ಚುಗೆ ಮಾತು ಸಾರ್ವಜನಿಕರಿಂದ ಕೇಳಿ ಬಂದಿದೆ. ಆದರೆ, ಆಸ್ಪತ್ರೆಯಲ್ಲಿನ ಸ್ವಚ್ಛತೆಗೆ ಹೆಚ್ಚು ಕಾಳಜಿವಹಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ ಎಂದರು.

ಸ್ವಚ್ಛತೆಗೆ ಆದ್ಯತೆ ನೀಡಿ: ರೋಗ ಗುಣಪಡಿಸುವುದು ವೈದ್ಯರ ಕರ್ತವ್ಯ. ಆದರೆ, ರೋಗಬಾರದ ರೀತಿ ಸ್ವಚ್ಛತೆ ಕಾಪಾಡುವುದು ಬಹುಮುಖ್ಯವಾದ ಕೆಲಸ. ಶೌಚಾಲಯ ಹಾಗೂ ಕೊಠಡಿಗಳಲ್ಲಿ ಸ್ವಚ್ಛತೆಯ ಇಲ್ಲ, ಪ್ರಯೋಗ ಶಾಲೆಯಲ್ಲಿ ಎಲ್ಲಂದರಲ್ಲಿ ರೋಗಿಗಳು ಉಪಯೋಗಿಸಿದ ಹತ್ತಿ ಬಿದ್ದಿದೆ. ಇದರಿಂದ ಬೇರೆಯವರಿಗೂ ಕಾಯಿಲೆ ಹರಡುವ ಸಾಧ್ಯತೆ ಇದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

ಖಾಸಗಿ ಮೆಡಿಕಲ್‌ಗೆ ಕಳುಹಿಸಬೇಡಿ: ಬಡ ರೋಗಿಗಳ ಪಾಲಿಗೆ ಸರ್ಕಾರಿ ಆಸ್ಪತ್ರೆಗಳು ದೇವಾಲಯಗಳಾಗಿವೆ. ವೈದ್ಯರು ಯಾವುದೇ ಕಾರಣಕ್ಕೂ ಖಾಸಗಿ ಮೆಡಿಕಲ್‌ ಶಾಪ್‌ಗ್ಳಿಗೆ ಚೀಟಿ ಬರೆದುಕೊಡುವುದನ್ನು ನಿಲ್ಲಿಸಬೇಕು. ಸರ್ಕಾರ ಎಲ್ಲಾ ಕಾಯಿಲೆಗಳಿಗೂ ಔಷಧಿ, ಮಾತ್ರೆಗಳನ್ನು ಪೂರೈಕೆ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಡ ರೋಗಿಗಳನ್ನು ಹೊರಗಡೆ ಕಳುಹಿಸಬಾರದು ಎಂದು ಹೇಳಿದರು.

ಚಾಲಕನ ವರ್ಗಾವಣೆ ಮಾಡಿ: ವೈದ್ಯರನ್ನೇ ಜನರು ದೇವರು ಎಂದು ನಂಬಿದ್ದಾರೆ. ಹೀಗಾಗಿ ವೈದ್ಯರು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಆಸ್ಪತ್ರೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದರು. ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಒದಗಿಸುತ್ತಿರುವ ಆ್ಯಂಬುಲೆನ್ಸ್‌ ಚಾಲಕನ ಮೇಲೆ ಸಾಕಷ್ಟು ದೂರು ಕೇಳಿಬಂದಿವೆ. ಎರಡು ತಿಂಗಳ ಒಳಗೆ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ನೀವೇ ಜವಾಬ್ದಾರಿ ಹೊರಬೇಕು ಎಂದು ವೈದ್ಯ ನರಸೇಗೌಡರಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.