ಹೇಮಾವತಿ ಜಲಾಶಯ ಒಳ ಹರಿವಿನ ಪ್ರಮಾಣ ವೃದ್ಧಿ

ಸಕಲೇಶಪುರ ತಾಲೂಕಿನಲ್ಲಿ ಈ ತಿಂಗಳು ವಾಡಿಕೆಗಿಂತ ಹೆಚ್ಚು ,ಮಳೆ: ಅರಸೀಕೆರೆ, ಚನ್ನರಾಯಪಟ್ಟಣದಲ್ಲೂ ಹೆಚ್ಚು ಮಳೆ ದಾಖಲು

Team Udayavani, Jul 23, 2019, 1:31 PM IST

hasan-tdy-2

ಹಾಸನ: ಹೇಮಾವತಿ ಜಲಾನಯನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ವೃದ್ಧಿಸಿದೆ.

ಹೇಮಾವತಿ ಜಲಾಶಯದ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮುಂಗಾರು ಮಳೆ ಬಿರುಸಾಗಿದೆ. ಹಾಗಾಗಿ ಜಲಾಶಯಕ್ಕೆ ಭಾನುವಾರ 2124 ಕ್ಯೂಸೆಕ್‌ ಇದ್ದ ಒಳ ಹರಿವಿನ ಪ್ರಮಾಣ ಸೋಮವಾರ 5 ಸಾವಿರ ಕ್ಯೂಸೆಕ್‌ಗೆ ಏರಿದೆ.

37.10 ಟಿಎಂಸಿ ಸಂಗ್ರಹಣಾ ಸಾಮರ್ಥಯದ ಜಲಾ ಶಯ ಕಳೆದ ವರ್ಷ ಈ ದಿನಕ್ಕೆ ಭರ್ತಿಯಾಗಿ ಹೆಚ್ಚುವರಿ ನೀರು ಕ್ರಸ್ಟ್‌ಗೇಟ್‌ಗಳ ಮೂಲಕ ಬೋರ್ಗೆರೆಯುತ್ತಾ ನದಿಗೆ ಹರಿಯುತ್ತಿತ್ತು. ಆದರೆ ಈ ವರ್ಷ ಜಲಾಶ ಯದಲ್ಲಿ 13.49 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ 9.12 ಟಿಎಂಸಿ ಮಾತ್ರ. ಜಲಾಶಯದಲ್ಲಿ 22 ಟಿಎಂಸಿ ನೀರು ಸಂಗ್ರಹವಾದರೆ ಮಾತ್ರ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ನಾಲೆಗಳಲ್ಲಿ ನೀರು ಹರಿಸಲಾಗುವುದು ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಎಂಜಿನಿಯರುಗಳು ಸ್ಪಷ್ಟಪಡಿಸಿದ್ದಾರೆ.

22 ಟಿಎಂಸಿ ನೀರು ಸಂಗ್ರಹ ಸಾಧ್ಯತೆ: ಒಳಹರಿವಿನ ಪ್ರಮಾಣ ಪ್ರತಿದಿನವೂ 5 ರಿಂದ 10 ಸಾವಿರ ಕ್ಯೂಸೆಕ್‌ನಂತೆ ಮುಂದುವರಿದರೆ ಇನ್ನು 15 ದಿನಗಳಲ್ಲಿ 22 ಟಿಎಂಸಿ ನೀರು ಸಂಗ್ರಹವಾಗಬಹುದು ಎಂಬ ಆಶಾ ಭಾವ ಮೂಡಿದೆ. ಮುಂಗಾರು ಮಳೆ ಇನ್ನೂ ಒಂದೂ ವರೆ ತಿಂಗಳು ಇರುವುದರಿಂದ 22 ಟಿಎಂಸಿ ವರೆಗೆ ನೀರು ಸಂಗ್ರಹವಾಗಬಹುದೆಂಬ ನಿರೀಕ್ಷೆಯಿದೆ. ಸಮಾಧಾನಕರ ಅಂಶವೆಂದರೆ ಈಗ ಸಂಗ್ರಹವಾಗಿ ರುವ ನೀರನ್ನು ಕಾವೇರಿ ನದಿ ನೀರು ಪ್ರಾಧಿಕಾರದ ಸೂಚನೆಯಂತೆ ತಮಿಳುನಾಡಿಗೆ ಹರಿಸದಿದ್ದರೆ ಹೇಮಾವತಿ ಅಚ್ಚುಕಟ್ಟು ಪ್ರದೇಶಕ್ಕೆ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಬಹುದು.

ಸಕಲೇಶಪುರ ತಾಲೂಕಿನಲ್ಲಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆ ಮಳೆ 572 ಮಿಲಿಮೀಟರ್‌ಗೆ ಬದಲಾಗಿ 593 ಮಿಲಿ ಮೀಟರ್‌ ಮಳೆಯಾಗಿದ್ದು, ವಾಡಿಕೆಗಿಂತ ಶೇ.4 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಹೇಮಾವತಿ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರಬೇಕಾದ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯಲ್ಲಿ ವಾಡಿಕೆಗಿಂತ ಶೇ.7 ರಷ್ಟು ಮಳೆಯ ಕೊರತೆಯಾಗಿದ್ದರೆ, ಬೆಳಗೋಡು ಹೋಬಳಿಯಲ್ಲಿ ಶೇ.43 ಹಾಗೂ ಸಕಲೇಶಪುರ ಕಸಬಾ ಹೋಬಳಿಯಲ್ಲಿ ಶೇ.9 ರಷ್ಟು ಮಳೆಯ ಕೊರತೆಯಾಗಿದೆ.

 

● ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.