ಹಾಸನ ಪೊಲೀಸ್‌ ಲೇಔಟ್‌ನಲ್ಲಿ ಅನ್ಯಾಯ: ಪ್ರತಿಭಟನೆ

Team Udayavani, Jan 14, 2022, 12:17 PM IST

1-hasan-2

ಹಾಸನ: ಪೊಲೀಸ್‌ ಬಡಾವಣೆ ನಿವೇಶನಗಳ ಹಂಚಿಕೆ ಹಾಗೂ ದರ ನಿಗದಿಯಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದ ಹೊರ ವಲಯದ ಸತ್ಯಮಂಗಲದ ಹೌಸಿಂಗ್‌ ಬೋರ್ಡ್‌ ಬಡಾವಣೆ ಸಮೀಪ ಪೊಲೀಸ್‌ ಅಧಿಕಾರಿಗಳ ಮತ್ತು ಸಿಬ್ಬಂದಿಯವರ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಿಸಿರುವ ವಸತಿ ಬಡಾವಣೆ ಯಲ್ಲಿ ಪೊಲೀಸ್‌ ಸಿಬ್ಬಂದಿ ಜತೆಗೆ ಬೇರೆಯವರೂ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಹಣ ಪಾವತಿ ಮಾಡಿದ್ದಾರೆ.

ಹಾಸನದಲ್ಲಿ ಈ ಹಿಂದೆ ಎಸ್ಪಿಯಾಗಿದ್ದ ಎ.ಎನ್‌.ಪ್ರಕಾಶ್‌ ಗೌಡ ಅಧ್ಯಕ್ಷ, ಉಪಾಧ್ಯಕ್ಷ ಎಚ್‌.ಪಿ.ಶ್ರೀಧರ್‌ ಅವರು ಉಪಾಧ್ಯಕ್ಷರಾಗಿರುವ ಸಂಘದ ವಸತಿ ಬಡಾವಣೆ ಯನ್ನು ಎಸ್‌ಆರ್‌ ಡೆವಲಪರ್ ಅಭಿವೃದ್ಧಿಪಡಿಸಿದ್ದು, ನಿವೇಶನಗಳ ಹಂಚಿಕೆ ಸಂಬಂಧ ಬುಧವಾರ ಸಂಜೆ ಬಡಾವಣೆ ಬಳಿ ಸಭೆ ಕರೆಯಲಾಗಿತ್ತು. ಈ ಹಿಂದೆಯೇ ಒಂದೇ ಬಾರಿಗೆ ಸಂಪೂರ್ಣ ಹಣ ಪಾವತಿಸುವವರಿಗೆ ಚದರ ಅಡಿಗೆ 700 ರೂ, ಕಂತುಗಳಲ್ಲಿ ಹಣ ಪಾವತಿಸಿರುವವರಿಗೆ 725 ರೂ. ಗಳಂತೆ ನಿಗದಿ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ನಡೆದ ಸಭೆಯಲ್ಲಿ ನಿವೇಶನಗಳಿಗೆ ಈ ಹಿಂದೆ ಪೂರ್ಣ ಮೊತ್ತ ಪಾವತಿ ಮಾಡಿದವರೂ ಹೆಚ್ಚುವರಿ ಚದರ ಅಡಿಗೆ 145 ರೂ. ಪಾವತಿ ಮಾಡಬೇಕು. ನಿವೇ ಶನ ಚದರ ಅಡಿಗೆ ಬದಲಾಗಿ ಚದರ ಮೀಟರ್‌ಗಳಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದಾಗ ಹಣ ಪಾವತಿ ಮಾಡಿದ್ದವರು ಸಂಘದ ಪದಾಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ನಮಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪ್ರಕಾಶ್‌ ಗೌಡ ಮಾಹಿತಿ ನೀಡದೆ ಸಭೆಯಿಂದ ನಿರ್ಗಮಿಸಿದರು. ರಾತ್ರಿ 11 ಗಂಟೆವರೆಗೂ ಪ್ರತಿಭಟನೆ ನಡೆಸಿದ ನೂರಾರು ಜನ ಇದುವರೆಗೂ ನಿವೇಶನದ ಅಭಿವೃದ್ಧಿ ಮಾಡದಿದ್ದರೂ ಹೆಚ್ಚುವರಿ ಹಣ ನೀಡಬೇಕೆಂದು ಈಗ ಹೇಳಿ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಕಳೆದ 6 ವರ್ಷಗಳ ಹಿಂದೆಯೇ ನಾವು ಹಣ ಪಾವತಿ ಮಾಡಿ ದ್ದೇವೆ. ಮೊದಲು ಹಣ ಪಾವತಿಸಿದವರಿಗೆ ಸತ್ಯ ಮಂಗಲ ಹೌಸಿಂಗ್‌ಬೋರ್ಡ್‌ ಸಮೀಪ, ಕಂತುಗಳಲ್ಲಿ ವಿಳಂಬವಾಗಿ ಹಣ ಕಟ್ಟಿದವರಿಗೆ ದೂರದಲ್ಲಿ ನಿವೇಶನ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡ ನಿವೇಶನದಾರರು, ಈ ಮೊದಲು ನಿಗದಿ ಮಾಡಿದಂತೆ ನಮಗೆ ನಿವೇಶನ ಕೊಡಬೇಕೆಂದು ಪಟ್ಟು ಹಿಡಿದ್ದಾರೆ. ಮತ್ತೂಂದು ಸಭೆ ನಡೆಸಿ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.