ಮಾಳೇಗೆರೆಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಒತ್ತಾಯ
Team Udayavani, Aug 27, 2019, 4:59 PM IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೇಲೂರು: ತಾಲೂಕಿನ ಕೋಗಿಲಮನೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಂದ ದಿನನಿತ್ಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವ ಜನಿಕರು ಸಂಚರಿಸುತ್ತಿದ್ದು, ಮದ ಘಟ್ಟ ರಸ್ತೆಯ ಶನೇಶ್ವರ ದೇಗುಲ ಸಮೀಪ ಬಸ್ ತಂಗುದಾಣ ನಿರ್ಮಿಸುವಂತೆ ಜನ ಪ್ರತಿನಿಧಿಗಳು ಹಾಗೂ ಅಧಿ ಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಾಲೂಕಿನ ಬಿಕ್ಕೋಡು ಹೋಬಳಿ ಕೋಗಿಲಮನೆ ಗ್ರಾಪಂಗೆ ಸೇರುವ ಮಾಳೇಗೆರೆ ಹಳೇಊರು, ಹೊಸಕೊಪ್ಪಲು, ಚಲುವೇಗೌಡನ ಕೊಪ್ಪಲು ಹಾಗೂ ಮಾಳೇಗೆರೆ ಕಾಲೋನಿಗಳಿಂದ ದಿನನಿತ್ಯ ಸಾಕಷ್ಟು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬೇಲೂರು, ಬಿಕ್ಕೋಡು ಹಾಸನಕ್ಕೆ ಪ್ರಯಾಣಿ ಸುತ್ತಿದ್ದು ಮಳೆ ಬಿಸಿಲೆನ್ನದೆ ಮರದ ಕೆಳಗೆ ನೀಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲಾ ಮಕ್ಕಳ ಪರದಾಟ: ಬೇಸಿಗೆ ಸಮಯದಲ್ಲಿ ರಸ್ತೆ ಪಕ್ಕದ ಮರದ ಕೆಳಗೆ ನಿಲ್ಲಬಹುದು. ಆದರೆ ಮಳೆಗಾಲದಲ್ಲಿ ಶಾಲಾ ಕಾಲೇಜಿಗೆ ತೆರಳುವ ಮಕ್ಕಳು ಪಠ್ಯಪುಸ್ತಕ ಹಾಗೂ ನೋಟ್ ಬುಕ್ಸ್ ಹಾಗೂ ಇನ್ನಿತರೆ ವಸ್ತುಗಳೆಲ್ಲ ಮಳೆ ನೀರಿನಲ್ಲಿ ನೆನೆಯುವುದಲ್ಲದೇ, ರಸ್ತೆ ಪಕ್ಕದಲ್ಲಿ ನಿಲ್ಲುವ ನೀರಿನಿಂದ ಬಟ್ಟೆಗಳೆಲ್ಲ ಕೊಳೆಯಾಗುತ್ತದೆ. ಶಾಲಾ ಕಾಲೇಜುಗಳಿಗೆ ತೆರಳಿದರೆ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಬೈಸಿಕೊಳ್ಳುವುದು ಅನಿವಾರ್ಯವಾಗಿದೆ.
ವೃದ್ಧರು ಮಳೆಯರು, ಮಕ್ಕಳಿಗೂ ತೊಂದರೆ ಆಗುತ್ತಿರುವುದರಿಂದ ನಮಗೆ ತಕ್ಷಣವೇ ಮದಘಟ್ಟ ರಸ್ತೆಯ ಮಾಳೇಗೆರೆ ಶನೇಶ್ವರ ದೇಗುಲ ಸಮೀಪ ಬಸ್ ತಂಗುದಾಣ ನಿರ್ಮಿಸಬೇಕು. ಇಲ್ಲದಿದ್ದಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಮಾಳೇಗೆರೆ ಶನೇಶ್ವರ ದೇಗುಲ ಸಮೀಪ ಬಸ್‌ಗಳನ್ನು ತಡೆದು ಪ್ರತಿಭಟಿಸ ಬೇಕಾಗುತ್ತದೆ ಎಂದು ಈ ಭಾಗದ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.