ಹೊರ ರಾಜ್ಯದ ಕೂಲಿ ಕಾರ್ಮಿಕರ ತಪಾಸಣೆ
Team Udayavani, Apr 8, 2020, 1:22 PM IST
ಸಕಲೇಶಪುರ: ಹೊರ ರಾಜ್ಯದಿಂದ ಕಾಫಿ ತೋಟವೊಂದರಲ್ಲಿ ಕೆಲಸ ಮಾಡಲು ಬಂದ ಕೂಲಿ ಕಾರ್ಮಿಕರು ಗ್ರಾಮದಲ್ಲಿ ಇರುವುದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬುಗಡಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು.
ತಾಲೂಕಿನ ಕ್ಯಾನಹಳ್ಳಿ ಗ್ರಾಪಂ ವ್ಯಾಪ್ತಿಯ ಬುಗಡ ಹಳ್ಳಿ ಗ್ರಾಮದ ಕಾಫಿ ತೋಟವೊಂದರ ಮಾಲಿಕರು ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಕಾಫಿ ತೋಟವನ್ನು ನಿರ್ವಹಣೆ ಮಾಡಲಾಗದೇ ಬೇರೊಬ್ಬರಿಗೆ ಗುತ್ತಿಗೆ ನೀಡಿದ್ದರು. ತೋಟವನ್ನು ಗುತ್ತಿಗೆ ಪಡೆದಿದ್ದ ವ್ಯಕ್ತಿ ತೋಟದಲ್ಲಿ ಕೃಷಿ ಕೆಲಸ ಮಾಡಲು ಪಕ್ಕದ ಮೂಡಿಗೆರೆ ತಾಲೂಕಿನ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ 16 ಜನ ಕೃಷಿ ಕಾರ್ಮಿಕರನ್ನು ಅಧಿಕಾರಿಗಳ ಅನುಮತಿ ಪಡೆದು ಗ್ರಾಮಕ್ಕೆ ಕಳೆದ ಎರಡು ದಿನಗಳ ಹಿಂದೆ ಕರೆ ತಂದಿದ್ದರು. ಆದರೆ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು ಅಪರಿಚಿತರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಕೂಡಲೇ ಇವರನ್ನು ಇಲ್ಲಿಂದ ಜಾಗ ಖಾಲಿ ಮಾಡಿಸಬೇಕು ಎಂದು ಗ್ರಾಪಂಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಗ್ರಾಪಂಯವರು ಅವರನ್ನು ತೆರವುಗೊಳಿಸಲು ಮುಂದಾದಾಗ ತೋಟದ ಮಾಲೀಕರು ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಲಾಕ್ ಡೌನ್ ಇರುವುದರಿಂದ ಕೂಲಿ ಬೇರೆಲ್ಲೂ ಕಳುಹಿಸಲಾಗುವುದಿಲ್ಲ. ಅವರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸುತ್ತೇವೆ ಎಂದು ಹೇಳಿದ್ದರಿಂದ ಉಪವಿಭಾ ಗಾಧಿಕಾರಿ ಗಿರೀಶ್ ನಂದನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಇವರ ಆರೋಗ್ಯ ತಪಾಸಣೆ ಮಾಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಕಾರ್ಮಿಕಕರಿಗೆ ಗುತ್ತಿಗೆದಾರರು ಮೂಲ ಸೌಕರ್ಯ ಒದಗಿಸಬೇಕು. ಕೂಲಿ ಕಾರ್ಮಿಕರಿಗೆ ಗ್ರಾಮಸ್ಥರು ತೊಂದರೆ ನೀಡಬಾರದು ಎಂದರು. ಟಿಎಚ್‌ಒ ಮಹೇಶ್, ಕ್ಯಾನಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಗ್ರಾಮಾಂತರ ಠಾಣೆ ಪಿಎಸ್‌ಐ ಚಂದ್ರಶೇಖರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.