ದೇಗುಲ ಬಳಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿ
Team Udayavani, May 3, 2019, 1:37 PM IST
ಹಾಸನ: ಪುರದಮ್ಮ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುವುದರಿಂದ ಅಲ್ಲಿನ ಘನತ್ಯಾಜ್ಯ ನಿರ್ವಹಣೆ ಮಾಡಲು ಪ್ರತ್ಯೇಕ ಘಟಕ ಸ್ಥಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಹಾಸನ ಉಪವಿಭಾಗಾಧಿಕಾರಿ ಹಾಗೂ ಪುರದಮ್ಮ ದೇಗುಲದ ಆಡಳಿತಾಧಿಕಾರಿ ಎಚ್.ಎಲ್.ನಾಗರಾಜ್ ಅವರಿಗೆ ಸೂಚನೆ ನೀಡಿದರು.
ಹಸಿರು ಭೂಮಿ ಪ್ರತಿಷ್ಠಾನದ 2ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಪುರದಮ್ಮ ದೇವಾ ಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿನೆಡುವ ಹಾಗೂ ಕೆರೆ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬರಪರಿಸ್ಥಿತಿ ಎದುರಿಸಲು ಮತ್ತು ಕುಡಿಯುವ ನೀರಿನ ಅಭಾವವನ್ನು ತಪ್ಪಿಸಲು ಪರಿಸರಕ್ಕೆ ಪೂರಕ ವಾಗುವ ಇಂತಹ ಕೆಲಸಗಳನ್ನು ಮಾಡುವ ಸಂಘ ಸಂಸ್ಥೆಗಳಿಗೆ ಶ್ರಮದಾನದ ಮೂಲಕ ಸಾರ್ವಜನಿಕರು ಸಹಕರಿಸಿದ್ದಲ್ಲಿ ಸರ್ಕಾರವೂ ಕೂಡ ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತದೆ ಎಂದರು.
ಕೆರೆ ಕಟ್ಟೆಗಳೇ ದೇವರು: ಅಧ್ಯಕ್ಷತೆ ವಹಿಸಿದ್ದ ಹಾಸನ ಉಪವಿಭಾಗಾಧಿಕಾರಿ ಹಾಗೂ ಹಸಿರು ಭೂಮಿ ಪ್ರತಿ ಷ್ಠಾನದ ಗೌರವಾಧ್ಯಕ್ಷ ಎಚ್.ಎಲ್.ನಾಗರಾಜ್ ಮಾತ ನಾಡಿ, ಕೆರೆ ಕಟ್ಟೆಗಳೇ ಸಮಾಜಕ್ಕೆ ನಿಜವಾದ ದೇವರು. ಅವುಗಳನ್ನು ಸಂರಕ್ಷಿಸಿ ಪೊಷಣೆ ಮಾಡುವುದೇ ನಿಜವಾದ ಪೂಜೆ. ಗ್ರಾಮಾಂತರ ಪ್ರದೇಶದ ಜನರು ತಮ್ಮ ತಮ್ಮ ಊರುಗಳಲ್ಲಿರುವ ಕೆರೆ ಕಟ್ಟೆಗಳನ್ನು ಶ್ರಮದಾನದ ಮೂಲಕ ಪುನಶ್ಚೇತನಗೊಳಿಸಲು ಮುಂದಾಗಬೇಕು. ಇದಕ್ಕೆ ಬೇಕಾದ ಎಲ್ಲಾ ಸಲಹೆ ಸಹಕಾರಗಳನ್ನು ಹಸಿರು ಭೂಮಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.
ಪುರದಮ್ಮ ದೇಗುಲದ ಸಮೀಪವೇ ಇರುವ ಕೆರೆಗೆ ದೇವಾಲಯದ ಸುತ್ತ ಮುತ್ತಲಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಯಾವುದೇ ತ್ಯಾಜ್ಯವನ್ನು ಸುರಿಯದಂತೆ ಹಾಗೂ ಕೆರೆಯ ಪಾವಿತ್ರ್ಯತೆಯನ್ನು ಉಳಿಸಬೇಕೆಂದು ಕೋರಿದರು.
ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕುಗಳಲ್ಲಿಯೂ ಜಾಗೃತಿ ಸಭೆಗಳನ್ನು ಏರ್ಪಡಿಸಲಾಗುವುದು. ಪ್ರೌಢ ಶಾಲೆಗಳಲ್ಲಿರುವ ಪರಿಸರ ಕ್ಲಬ್‌ಗಳನ್ನು ಗುರಿ ಯಾಗಿರಿಸಿಕೊಂಡು ಮಕ್ಕಳಿಗೆ ಪರಿಸರದ ಬಗ್ಗೆ ತರಬೇತಿ ನೀಡಿ ಶಾಲೆಗೆ ಇಬ್ಬರು ವಿದ್ಯಾರ್ಥಿಗಳನ್ನು ಮಾಸ್ಟರ್ ಟ್ರೈನರ್‌ಗಳನ್ನಾಗಿ ಮಾಡುವ ಉದ್ದೇಶವಿದೆ ಎಂದರು.
ಸಮುದಾಯದ ಭಾಗವಹಿಸುವಿಕೆ ಮುಖ್ಯ: ಹಾಸನ ತಹಸೀಲ್ದಾರ್ ಶ್ರೀನಿವಾಸಯ್ಯ ಮಾತನಾಡಿ, ಸಮುದಾ ಯದ ಭಾಗವಹಿಸುವಿಕೆಯಿದ್ದಲ್ಲಿ ಮಾತ್ರ ಇಂತಹ ಪರಿಸರ ಕಾಳಜಿಯುಳ್ಳ ಕೆಲಸಗಳು ಯಶಸ್ವಿಯಾಗು ತ್ತವೆ. ಅಧಿಕಾರಿಗಳೂ ಇಂತಹ ಚಟುವಟಿಕೆಗಳಲ್ಲಿ ವೈಯಕ್ತಿಕವಾಗಿ ಭಾಗವಹಿಸುವುದರಿಂದ ಸಾರ್ವಜನಿ ಕರಿಗೂ ಪ್ರೇರಣೆ ನೀಡಿದಂತಾಗುತ್ತದೆ ಎಂದರು.
ಪರಿಸರ ಸಂರಕ್ಷಣೆಗೆ ಕ್ರಮ ಅಗತ್ಯ
ಎಲ್ಲಾ ತಾಲೂಕುಗಳಲ್ಲಿ ಈ ರೀತಿಯ ಕೆರೆ ಕಟ್ಟೆ ಗಳನ್ನು ಹೂಳೆತ್ತುವ ಹಾಗೂ ಸಸಿನೆಡುವ ಕಾರ್ಯ ಕ್ರಮವನ್ನು ವಿವಿಧ ಸಂಘ ಸಂಸ್ಥೆಗಳು ಪ್ರಯತ್ನಿಸಬೇಕು ಎಂದ ಅವರು, ಇಂದಿನ ಪರಿಸರ ನಾಶಗಳು ಹಾಗೂ ಪ್ರಕೃತಿ ವಿಕೋಪ ಸಂಭವಿಸುವುದು ಪ್ರಕೃತಿಯು ನಮಗೆ ನೀಡು ತ್ತಿರುವ ಅಪಾಯದ ಮುನ್ಸೂಚನೆಯಾಗಿದೆ. ಆದ್ದರಿಂದ ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಯ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.