ಜನರ ಕಷ್ಟಕ್ಕಿಂತ ವರ್ಗಾವಣೆ ಮುಖ್ಯವೇ?
Team Udayavani, Sep 19, 2020, 6:39 PM IST
ಹಾಸನ: ಜಿಲ್ಲೆಯಲ್ಲಿ ರೈತರ ಸಂಕಷ್ಟ ಕೇಳುವವರಿಲ್ಲ.ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಆದರೆ, ಆಡಳಿತ ಪಕ್ಷ ರಾಜಕಾರಣಿಗಳು, ಅಧಿಕಾರಿಗಳ ವರ್ಗಾವಣೆ ದಂಧೆ ಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆತಂಕ ವ್ಯಕ್ತ ಪಡಿಸಿದರು.
ಜಿಲ್ಲೆಯಲ್ಲಿ ಇದುವರೆಗೂ 12 ಸಾವಿರ ಜನರಿಗೆ ಕೋವಿಡ್ ಸೋಂಕು ಹರಡಿದೆ. ಸೋಂಕಿಗೆ 250ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅಧಿಕೃತವಾಗಿ 12 ಸಾವಿರ ಜನ ರಿಗೆ ಸೋಂಕು ದೃಢಪಟ್ಟಿದ್ದರೂ ಮುಂದಿನ ದಿನಗಳಲ್ಲಿ ಜಿಲ್ಲೆಯ 10 ಲಕ್ಷ ಜನರಿಗೆ ಸೋಂಕು ಹರಡುವ ಭೀತಿ ಇದೆ. ಚಿಕಿತ್ಸೆ ಸಿಗುವುದಿಲ್ಲವೆಂದು ಜನರು ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಸಂಚಾರಿ ಪರೀಕ್ಷಾ ವ್ಯವಸ್ಥೆ ಮಾಡಿ, ಕೋವಿಡ್ ಪರೀಕ್ಷೆ ನಡೆಸಿ ಸೋಂಕು ಹರಡುವುದನ್ನು ನಿಯಂತ್ರಿಸಬೇಕು ಎಂದರು.
ಜಿಲ್ಲೆಯ ಜನರು ಸಂಕಷ್ಟ ಲ್ಲಿದ್ದರೂ ವರ್ಗಾವಣೆ ದಂಧೆಯಲ್ಲಿ ಆಡಳಿತ ಪಕ್ಷದವರು ತಲ್ಲೀನರಾಗಿದ್ದಾರೆ. ಒಬ್ಬ ಪೊಲೀಸ್ ಇನ್‌ಸೆಕ್ಟರ್ ವರ್ಗವಣೆಗೆ 25 ಲಕ್ಷ ರೂ., ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ವರ್ಗಾವಣೆಗೆ1ಕೋಟಿ ರೂ. ಲಂಚ ಕೊಡಲಾಗಿದೆ ಎಂಬ ದೂರು ಗಳಿವೆ. ಸಿಎಂ ಯಡಿಯೂರಪ ³ ಅವರು ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸಿ ಗೌರವ ಉಳಿಸಿಕೊಳ್ಳಲಿ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.