ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಕರ್ತವ್ಯ
Team Udayavani, Mar 8, 2020, 4:58 PM IST
ಹಾಸನ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ತರಬೇತಿ ವಿಭಾಗದ ಪೊಲೀಸ್ ಮಹಾ ನಿರೀಕ್ಷಕ ಪಿ. ಹರಿ ಶೇಖರನ್ ಹೇಳಿದ್ದಾರೆ.
ಹಾಸನ ತಾಲೂಕು ಶಾಂತಿಗ್ರಾಮ ಸಮೀಪವಿರುವ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ 4ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌ಗಳ ಮತ್ತು ಮೊದಲ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ. ಭದ್ರತೆ, ರಕ್ಷಣೆಯ ಕರ್ತವ್ಯಗಾರಿಕೆ ಪೊಲೀಸ್ ಇಲಾಖೆಯದ್ದಾಗಿದೆ. ಪೊಲೀಸರು ಸಾರ್ವಜನಿಕರ ಸೇವೆಗೆ ಸದಾ ಸಿದ್ಧವಾಗಿರಬೇಕು. ಸಮಾಜ ವಿರೋಧಿ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಸಮಾಜದ ಜೀವನ ಮಟ್ಟದ ಸುಧಾರಣೆ ಸಮಾಜವನ್ನು ಉತ್ತಮ ಸ್ಥಿತಿಯಲ್ಲಿಡಲು ಪೂರಕವಾಗುವಂತೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
ಅಪರಾಧಿಕ ನ್ಯಾಯ ವ್ಯವಸ್ಥೆಗೆ ಸಂಬಂಧಿಸಿದ ಇತರೆ ವಿಭಾಗಗಳೊಂದಿಗೆ ಸಮನ್ವಯ ಸಾಧಿಸುವುದು. ಜಾತಿ, ಧರ್ಮ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳನ್ನೊಳಗೊಂಡ ಸಮಾಜದ ಪ್ರತಿಯೊಂದು ವರ್ಗಕ್ಕೂ ಸಮಾನತೆ ಒದಗಿಸು ವುದು ಕಾನೂನಿನ ಧ್ಯೇಯವಾಗಿದೆ. ಇದನ್ನು ಕ್ರಮಬದ್ಧವಾಗಿ ಪರಿಪಾಲನೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.
ಮಾನವ ಹಕ್ಕುಗಳನ್ನು ರಕ್ಷಿಸಿ: ಮಾನವ ಹಕ್ಕುಗಳ ರಕ್ಷಣೆ ಹಾಗೂ ವಿಶೇಷವಾಗಿ ಮಹಿಳೆ ಮತ್ತು ಮಕ್ಕಳ ಹಾಗೂ ಹಿಂದುಳಿದ ವರ್ಗಗಳ ಮತ್ತು ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆ, ವೃತ್ತಿ ಸಂಬಂಧಿತ ಕೌಶಲ್ಯ ಮತ್ತು ವರ್ತನೆಗಳ ಜ್ಞಾನಾರ್ಜನೆ ಹಾಗೂ ಪೊಲೀಸ್ ಕೆಲಸದಲ್ಲಿ ಆಧುನಿಕ ಪದ್ಧತಿಗಳ ಅನುಸರಣೆ ಸಮಗ್ರತೆಗೆ ಒತ್ತು ನೀಡುವುದರೊಂದಿಗೆ ಪೊಲೀಸರು ವೃತ್ತಿಪರತೆಯ ಮೌಲ್ಯಗಳನ್ನು ಬೆಳೆಸಿಕೊಳ್ಳುಬೇಕು ಎಂದು ಹೇಳಿದರು. ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ತರಬೇತಿ ಅವಧಿಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಆರ್. ಶ್ರೀನಿವಾಸ್ ಗೌಡ, ನಿವೃತ್ತ ಅಧಿಕಾರಿಗಳು ಹಾಗೂ ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.