ಸಚಿವ ರೇವಣ್ಣ ಆಪ್ತರ ಮೇಲೆ ಐಟಿ ದಾಳಿ
Team Udayavani, Apr 16, 2019, 9:46 AM IST
ಹಾಸನ: ಕರ್ನಾಟಕದಲ್ಲಿ ಪ್ರಥಮ ಹಂತದ ಲೋಕಸಭಾ ಚುನಾವಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿರುವಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಇನ್ನು ಮಂಗಳವಾರದಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿರುವುದರಿಂದ ಆ ಬಳಿಕ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ-ಹೆಂಡ ಮತ್ತು ಇತರೇ ಆಮಿಷಗಳನ್ನು ಒಡ್ಡುವ ಸಾಧ್ಯತೆಗಳಿರುವುದಿಂದ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ಆಪ್ತರ ಚಲನವಲನಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ.
ಇದಕ್ಕೆ ಪೂರಕವಾಗಿ ಇಂದು ಬೆಳಿಗ್ಗೆ ಹಾಸನ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವ ಹೆಚ್.ಡಿ. ರೇವಣ್ಣ ಅವರ ಮೂವರು ಆಪ್ತರ ನಿವಾಸ, ಕಚೇರಿ ಸೇರಿದಂತೆ ಪೆಟ್ರೋಲ್ ಬಂಕ್ ಹಾಗೂ ಮರದ ಮಿಲ್ ಗಳಿಗೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯ 8 ಜನ ಅಧಿಕಾರಿಗಳಿದ್ದ ತಂಡ ಅಲ್ಲೆಲ್ಲಾ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿವೆ.
ರೇವಣ್ಣ ಅವರ ಆಪ್ತ ಕಾರ್ಲೆ ಇಂದ್ರೇಶ್ ಅವರ ಫ್ಯಾಕ್ಟರಿ ಹಾಗೂ ಗೆಸ್ಟ್ ಹೌಸ್ ಮೇಲೆ ದಾಳಿ ನಡೆದಿದೆ. ಎರಡು ಕಾರುಗಳಲ್ಲಿ ಬಂದ ಅಧಿಕಾರಿಗಳು ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಲೆ ಇಂದ್ರೇಶ್ ಅವರ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ.
ಇನ್ನು ಹೊಳೇನರಸೀಪುರದ ಹರದನಹಳ್ಳಿಯಲ್ಲಿರುವ ಪಾಪಣ್ಣಿ ಅವರ ಮನೆಯಲ್ಲೂ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಜೆಡೆಎಸ್ ಜಿಲ್ಲಾ ಪಂಚಾಯತ್ ಸದಸ್ಯ ತಿಪ್ಪೇಗೌಡ ಅವರ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧನಪರಿಷತ್ ಸದಸ್ಯ ಪಟೇಲ್ ಶಿವರಾಂ ಅವರ ಮನೆಯ ಮೇಲೂ ಆದಾಯ ತೆರಿಗೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.