ಹಾಸನದಲ್ಲಿಂದು ಜೆಡಿಎಲ್‌ಪಿ ಸಭೆ
Team Udayavani, Sep 22, 2018, 6:20 AM IST
ಹಾಸನ: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ಸಂಜೆ ಹಾಸನದಲ್ಲಿ ನಡೆಯಲಿದೆ. “ಆಪರೇಷನ್ ಕಮಲ’ದ ಆತಂಕದ ನಡುವೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ತವರು ಜಿಲ್ಲೆಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಶನಿವಾರ
ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮಹತ್ವದ ಕಾರ್ಯಸೂಚಿ ಏನೂ ಇಲ್ಲ. ಇದೊಂದು ಅನೌಪಚಾರಿಕ ಸಭೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಭೆ ನಡೆಯುವ ಸ್ಥಳವನ್ನು ಇನ್ನೂ ನಿಗದಿಪಡಿಸಿಲ್ಲ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಯಾವ ಸ್ಥಳ ಎಂಬುದನ್ನು ನಿಗದಿಪಡಿಸಲಾಗುವುದು ಎಂದರು.
ಭಾನುವಾರ ಹಾಸನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು
ಶಿಲಾನ್ಯಾಸ ಹಾಗೂ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸುವರು. ಈ ಹಿನ್ನೆಲೆಯಲ್ಲಿ ಸಭೆಗೆ ಎಲ್ಲಾ ಜೆಡಿಎಸ್ ಶಾಸಕರನ್ನೂ ಆಹ್ವಾನಿಸಲಾಗಿದೆ. ಶಾಸಕರಿಗೆ ಕಾರ್ಯಕ್ರಮದ ಮುನ್ನಾ ದಿನವೇ ಬರಬೇಕೆಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯೂ ನಡೆಯಲಿದೆ. ಜೆಡಿಎಸ್ ಶಾಸಕರು ಯಾವುದಾದರೂ ಪಕ್ಷಕ್ಕೆ ಹೋಗುತ್ತಾರೆಂಬ ಕಾರಣಕ್ಕೆ ಜೆಡಿಎಲ್‌ಪಿ ಸಭೆ ನಡೆಸುತ್ತಿಲ್ಲ. ಪಕ್ಷದ ಸಂಘಟನೆ, ಅತಿವೃಷ್ಟಿಯಿಂದಾಗಿರುವ ಹಾನಿ,
ಬರ ಪರಿಸ್ಥಿತಿಯ ನಿರ್ವಹಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.