ಎಚ್‌ಡಿಡಿ, ರೇವಣ್ಣ ತೀರ್ಮಾನವೇ ಅಂತಿಮ

Team Udayavani, Nov 16, 2021, 3:18 PM IST

ಎಚ್‌ಡಿಡಿ, ರೇವಣ್ಣ ತೀರ್ಮಾನವೇ ಅಂತಿಮ

ಹೊಳೆನರಸೀಪುರ: ಡಿ.10 ರಾಜ್ಯ ವಿಧಾನಪರಿಷತ್‌ಗೆ ನಡೆಯಲಿರುವ 25 ಸ್ಥಾನಗಳ ಪೈಕಿ ಸ್ಥಳೀಯ ಸಂಸ್ಥೆ ಸದಸ್ಯರ ಮತದಾನ ನಡೆಯಬೇಕಿದ್ದು, ಹಾಸನ ಕ್ಷೇತ್ರದಿಂದಲೂ ಓರ್ವರಿಗೆ ಅವಕಾಶ ಇದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ನುಡಿದರು.

ಪಟ್ಟಣದ ಚನ್ನಾಂಬಿಕ ಕನ್ವನ್ಷೇನಲ್‌ ಹಾಲ್‌ ನಲ್ಲಿ ನಡೆದ ತಾಲೂಕು ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಪ್ರಸ್ತುತ ಈ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಶಾಸಕ ರೇವಣ್ಣ ಅವರ ತಿರ್ಮಾನೆವೇ ಅಂತಿಮ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾರ್ಯಕರ್ತರುಭವಾನಿ ರೇವಣ್ಣಅವರಿಗೆಪಕ್ಷದಿಂದ ಟಿಕೆಟ್‌ ನೀಡುವಂತೆ ಒತ್ತಾಯ ಬರುತ್ತಿದೆ. ಅದರಂತೆ ನಮ್ಮ ಇಂದಿನ ಸಭೆಯಲ್ಲಿ ಭಾಗವಹಿಸಿರುವ ಕಾರ್ಯಕರ್ತರು ಮತ್ತು ಮುಖಂಡರು ಆಗ್ರಹ ಪಡಿಸುತ್ತಿರುವುದನ್ನು ಗಮನಿಸಿದ್ದೇನೆ.ಈ ಚುನಾವಣೆಗೆ ಹಿರಿಯರು ನಿರ್ಧರಿಸುವ ಅಭ್ಯರ್ಥಿಯನ್ನು ನಾವು ಕಣಕ್ಕೆ ಇಳಿಸುತ್ತೇವೆ. ಅವರನ್ನು ನಮ್ಮ ಮತದಾರರು ಬೆಂಬಲಿಸಿ ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವುದು ನಿಮ್ಮಗಳಕೆಲಸವಾಗಬೇಕು ಎಂದು ತಿಳಿಸಿದರು.

ಕೆಲವರು ಎಲ್ಲ ಸ್ಥಾನಗಳು ಇವರಕುಟುಂಬಕ್ಕೆ ಬೇಕೆ ಎಂಬ ಪ್ರಶ್ನೆ ಸಾರ್ವಜನಿಕವಾಗಿ ಎದ್ದಿದೆ. ಆದರೆ, ಇಲ್ಲಿ ಒಂದು ಅಂಶ ನಿಖರವಾಗಿ ಗೊತ್ತಾಗಬೇಕಿದೆ. ನಮ್ಮ ಕುಟುಂಬದವರೆಅಗಬೇಕೆಂಬಇರಾದೆ ನಮ್ಮಗಳದಲ್ಲ, ಇಂದು ನೀವುಗಳು ಭವಾನಿ ರೇವಣ್ಣ ಅವರಿಗೆ ಮಾತ್ರ ಟಿಕೆಟ್‌ ನೀಡುವಂತೆ ತಿಳಿಸುತ್ತಿದ್ದೀರಿ. ಆದರೆ, ಇದೇ ಅಂತಿಮವಲ್ಲ,ಪಕ್ಷಯಾರನ್ನೇ ಅಭ್ಯರ್ಥಿಯಾಗಿಸಿದರೂ ಎಲ್ಲರೂ ಒಮ್ಮತದಿಂದ ಗೆಲ್ಲಿಸಬೇಕು ಎಂದು ಹೇಳಿದ ಅವರು ನಮ್ಮ ಕಾರ್ಯಕರ್ತರುಮತ್ತು ಮುಖಂಡರು ನಮ್ಮಗಳ ಮೇಲೆ ಅತಿಯಾದ ಒತ್ತಡ ಹೇರಬೇಡಿ, ಏಕೆಂದರೆ ಈ

ಚುನಾವಣೆಯಲ್ಲಿಅಭ್ಯರ್ಥಿಯಾಗಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ರೇವಣ್ಣ ಅವರ ನಿಲುವೇ ಅಂತಿಮ ಅವರು ಅತೀ ಶೀಘ್ರವಾಗಿ ಅಭ್ಯರ್ಥಿಯಾರೆಂಬುದನ್ನು ಪ್ರಕಟಗೊಳಿಸಲಿದ್ದಾರೆ. ಏಕೆಂದರೆ ಈಗಾಗಲೆ ಕಾರ್ಯಕರ್ತರು ಮತ್ತು ಮುಖಂಡರುಗಳಲ್ಲಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಇತೀ ಹಾಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಅವರ ಮಾತು ಮುಗಿಯುತಿದ್ದಂತೆ ಶಾಸಕ ಎಚ್‌.ಡಿ.ರೇವಣ್ಣ ಮಾತನಾಡಿ, ಕಾರ್ಯಕರ್ತರ ಅನಿಸಿಕೆ ಮತ್ತು ಮುಖಂಡರು ಮಾತನ್ನು ಆಲಿಸಿದ್ದೇನೆ. ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಡೆದಿರುವ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭವಾನಿ ರೇವಣ್ಣ ಅವರ ಹೆಸರು ಬರುತ್ತಿದೆ. ನಮ್ಮ ಕಾರ್ಯಕರ್ತರ ಮತ್ತು ಮುಖಂಡರ ಅನಿಸಿಕೆಗಳನ್ನು ದೇವೇಗೌಡರ ಗಮನಕ್ಕೂ ತರಲಾಗುತ್ತದೆ. ಅಂತಿಮವಾಗಿ ಗೌಡರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದರು.

ತಾವು ಶಾಸಕರಾದ ನಂತರ ತಾಲೂಕು ಹಾಗು ಜಿಲ್ಲೆಗೆ ಅವಶ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯವೇದಿಕೆಯಲ್ಲಿ ದಲಿತ ಮುಖಂಡಲಕ್ಕೂರು ಬಸವರಾಜು, ತಾಪಂ ಮಾಜಿಸದಸ್ಯಮಲ್ಲಿಕಾರ್ಜುನ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಪುಟ್ಟ ಸೋಮಪ್ಪ , ದೊಡ್ಡಮಲ್ಲೇಗೌಡ, ತಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ, ಪುರಸಭೆ ಅಧ್ಯಕ್ಷೇ ವೀಣಾ, ಉಪಾಧ್ಯಕ್ಷೆ ತ್ರೀಲೋಚನಾ ಹಾಜರಿದ್ದರು. ತಾಪಂ ಮಾಜಿ ಸದಸ್ಯ ಜವರೇಗೌಡ ಕಾರ್ಯಕ್ರಮವನ್ನು ನಿರೂಪಿಸಿದರು.

ಭವಾನಿ ರೇವಣ್ಣಗೆ ಅಭೂತಪೂರ್ವ ಸ್ವಾಗತ : ಕಾರ್ಯಕರ್ತರ ಸಭೆ ಆರಂಭಗೊಂಡ ಕೆಲ ನಿಮಿ ಷಗಳ ನಂತರ ಭವಾನಿ ರೇವಣ್ಣ ಅವರು ಸಭೆಗೆ ಆಗಮಿಸಿದರು. ಅವರ ಆಗಮನ ಆಗುತ್ತಿದ್ದಂತೆ ಸಭೆಯಲ್ಲಿ ಕುಳಿತಿದ್ದವರು ಎದ್ದು ನಿಂತು ಭವಾನಿ ರೇವಣ್ಣ ಅವರನ್ನು ಗೌರವದಿಂದ ಸ್ವಾಗತಿಸಿ ವೇದಿಕೆಗೆ ಕಳುಹಿಸಿಕೊಟ್ಟರು. ಸಭೆಯಲ್ಲಿ ಹಳ್ಳಿಮೈಸೂರು ಭಾಗದ ಕಡೆಯಿಂದ ಬಾಲು, ಹೊಳೆನರಸೀಪುರ ಪಟ್ಟಣದಿಂದ ಪುರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಣ್‌, ಮುತ್ತಿಗೆರಾಜೇಗೌಡ,ಜಿಪಂ ಮಾಜಿ ಸದಸ್ಯ ಎಚ್‌. ವೈ.ಚಂದ್ರಶೇಖರ್‌ ಮತ್ತೆ ಹಲವರು ಮಾತನಾಡಿ ಭವಾನಿ ರೇವಣ್ಣ ಅವರೇ ಸೂಕ್ತ ಅಭ್ಯರ್ಥಿ ಎಂದು ತಮ್ಮ ಇಂಗಿತವನ್ನು ವ್ಯಕ್ತ ಪಡಿಸಿದರು. ಇನ್ನೇರಡು ಮೂರು ದಿನಗಳಲ್ಲಿ ಉಳಿದ ತಾಲೂಕುಕೇಂದ್ರಗಳಲ್ಲಿ ಪಕ್ಷದಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಯಾರೆಂಬುದನ್ನು ಪ್ರಕಟಿಸಲಾಗುವುದು. ಯಾರೊಬ್ಬರೂ ಪಕ್ಷದ ಹಿರಿಯರುಕೈಗೊಳ್ಳುವ ತಿರ್ಮಾನಕ್ಕೆ ಬದ್ಧರಾಗಿ ಅವರು ಸೂಚಿಸುವ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು. ●ರೇವಣ್ಣ. ಜೆಡಿಎಸ್‌ ವರಿಷ್ಠ

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.