Hassan ಐಎನ್‌ಡಿಐಎದಿಂದ ಜೆಡಿಎಸ್ ಹೊರಗಿಟ್ಟಿದ್ದೇ ಕಾಂಗ್ರೆಸ್: ಎಚ್‌ಡಿಡಿ
Team Udayavani, Dec 4, 2023, 11:55 PM IST
ಹಾಸನ: “ಇಂಡಿಯಾ’ ಮೈತ್ರಿಕೂಟ ದಿಂದ ಜೆಡಿಎಸ್ ಅನ್ನು ಹೊರಗಿಟ್ಟಿದ್ದೇ ಕಾಂಗ್ರೆಸ್ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಬಿಜೆಪಿ ಹೊರತುಪಡಿಸಿ ರಾಷ್ಟ್ರದ ಜಾತ್ಯತೀತ ಪಕ್ಷಗಳ ಬಹುತೇಕ ನಾಯಕರು ಭಾಗಿಯಾಗಿದ್ದರು. ಅನಂತರ ಕುಮಾರಸ್ವಾಮಿ ಅವರ ಸರಕಾರ ತೆಗೆದವರೂ ಕಾಂಗ್ರೆಸ್‌ನವರೇ ಎಂದು ದೂರಿದರು.
ಮೋದಿ, ಶಾ ಸ್ವಾಗತಿಸಿದರು
ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತ ತಂತ್ರವನ್ನು ಕಾಂಗ್ರೆಸ್ ಮಾಡುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್‌ನ್ನು ಎನ್‌ಡಿಎಗೆ ಸ್ವಾಗತಿಸಿದರು. ಮೋದಿ ಬಗ್ಗೆ ವೈಯಕ್ತಿಕವಾಗಿ ಗೌರವ ಇಟ್ಟುಕೊಂಡಿದ್ದೇನೆ. ಅವರೂ ನನ್ನ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಜತೆ ಕೈ ಜೋಡಿಸಿ, ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು ತಿಳಿಸಿದರು.
ಭವಾನಿ ಪ್ರಕರಣವನ್ನು ದೊಡ್ಡದು ಮಾಡಬೇಡಿ
ಭವಾನಿ ರೇವಣ್ಣ ಅವರ ಕಾರು ಅಪಘಾತದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭವಾನಿಗೆ ಎರಡು ಮಂಡಿಗಳ ಆಪರೇಷನ್ ಆಗಿದ್ದು, ಆರೋಗ್ಯ ಸರಿಯಿಲ್ಲ. ಅದನ್ನೇ ದೊಡ್ಡದು ಮಾಡೋದು ಬೇಡ ಎಂದು ಹೆಚ್ಚು ಪ್ರತಿಕ್ರಿಯಿಸಲು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.