ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಗೆಲುವು ಖಚಿತ
Team Udayavani, May 11, 2023, 2:16 PM IST
ಹೊಳೆನರಸೀಪುರ: ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾರ ನಿಂತಿದ್ದಾನೆ. ಹಾಸನ, ಅರಕಲಗೂಡು, ಅರಸೀಕೆರೆ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳೇ ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಜೊತೆಗೆ ಉಳಿದಂತೆ ನಾಲ್ಕು ಕ್ಷೇತ್ರಗಳಲ್ಲಿಯೂ ಸಹ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿ ಗೌಡರ ಹುಟ್ಟುಹಬ್ಬಕ್ಕೆ ಅಡ್ವಾನ್ಸ್ ಬಳುವಳಿ ನೀಡುವುದಾಗಿ ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಶಾಸಕ ರೇವಣ್ಣ ಕುಟುಂಬ ತಾಲೂಕಿನ ಪಡುವಲಹಿಪ್ಪೆ ಮತ ಗಟ್ಟೆಯಲ್ಲಿ ಮತಚಲಾಯಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಹಾಗೂ ಪತ್ನಿ ಅಕ್ಷಾತ ಪಟ್ಟಣದ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಕಾಮಸಮುದ್ರ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಹಾಸನ ಜಿಲ್ಲೆ ಪ್ರತಿಷ್ಠಿತ ಕ್ಷೇತ್ರವಾಗಿರುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ 2004 ರಿಂದ ಸತತವಾಗಿ ಗೆಲುವು ಪಡೆದಿರುವ ರೇವಣ್ಣ ಅವರಿಗೆ ಈ ಚುನಾವಣೆ ಐದನೆಯದಾಗಿದೆ. ಬುಧವಾರ ಕಲ್ಲುಬ್ಯಾಡರಹಳ್ಳಿ ಮತ್ತು ಬಂಡಿಶೆಟ್ಟಿಯಲ್ಲ ಮತಯಂತ್ರ ಕೈ ಕೊಟ್ಟಿದ್ದರಿಂದ ಸುಮಾರು ಅರ್ಧ ಗಂಟೆ ಮತದಾನ ತಡವಾಗಿ ಆರಂಭವಾಯಿತು. ತಾಲೂಕಿನ ಪಡುವಲಹಿಪ್ಪೆ ಮತಗಟ್ಟೆಗೆ ಆಗಮಿಸಿದ ರೇವಣ್ಣ ಕುಟುಂಬ ಬೆಳಗ್ಗೆಯೇ ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ರಾಘವೇಂದ್ರ ಸ್ವಾಮಿಗಳ ಮಠ, ಹರದನಹಳ್ಳಿ ಈಶ್ವರದೇವಸ್ಥಾನ, ಬೆಟ್ಟದ ರಂಗನಾಥಸ್ವಾಮಿ ದೇವಾಲಯ ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿಸ ಮತಗಟ್ಟೆಗೆ ಆಗಮಿಸಿ ಗ್ರಾಮದೇವರಿಗೆ ಪೂಜೆ ಸಲ್ಲಿಸಿ ಮತಗಟ್ಟೆಗೆ ಆಗಮಿಸಿ ಕುಟುಂಬ ಸಮೇತ ಮತ ಚಲಾಯಿಸಿದರು.
ಏಳರಲ್ಲೂ ಜೆಡಿಎಸ್ ಗೆಲುವು: ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಗಳ ಪರವಾಗಿ ಮತದಾರ ನಿಂತಿದ್ದಾನೆ. ಏಳು ಕ್ಷೇತ್ರಗಳ ಪೈಕಿ ಅಭ್ಯರ್ಥಿಗಳ ಗೊಂದಲದ ಗೂಡಾಗಿದ್ದ ಹಾಸನ, ಅರಕಲಗೂಡು, ಅರಸೀಕೆರೆ ಕ್ಷೇತ್ರಗಳಲ್ಲೂ ಸಹ ನಮ್ಮ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಜೊತೆಗೆ ಉಳಿದಂತೆ ನಾಲ್ಕು ಕ್ಷೇತ್ರಗಳಲ್ಲಿಯೂ ಸಹ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿ ಗೌಡರ ಹುಟ್ಟುಹಬ್ಬಕ್ಕೆ ಅಡ್ವಾನ್ಸ್ ಬಳುವಳಿ ನೀಡುವುದಾಗಿ ತಿಳಿಸಿದರು.
ಈ ಬಾರಿಯೂ ಭಾರೀ ಅಂತರದ ಗೆಲುವು: ಸಂಸದ ಪ್ರಜ್ವಲ್ ರೇವಣ್ಣ ಅವರು ಮಾತನಾಡಿ, ಈ ಬಾರಿ ನಮ್ಮ ರೇವಣ್ಣ ಸಾಹೇಬರು ಕಳೆದ ಬಾರಿ 45 ಸಾವಿರ ಅಂತರದಲ್ಲಿ ಭಾರೀ ಅಂತರದ ಗೆಲುವು ಕಂಡಿದ್ದರು. ಈ ಬಾರಿ ಅದನ್ನು ಮೀರಿ ಸುಮಾರು 55 ಸಾವಿರದಷ್ಟು ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಭರವಸೆ ಇದೆ ಎಂದು ಆಶಯ ವ್ಯಕ್ತ ಪಡಿಸಿದರು.
ಶಾಯಿ ಹಾಕಿಸಿಕೊಳ್ಳದೆ ಮತ ಚಲಾಯಿಸಿದ ರೇವಣ್ಣ: ಪಡುವಲಹಿಪ್ಪೆ ಮತಗಟ್ಟೆಯಲ್ಲಿ ರೇವಣ್ಣ ಅವರ ಕುಟುಂಬ ಮತಚಲಾಯಿಸುವ ಮುನ್ನವೇ ಎಡಗೈಗೆ ಶಾಯಿ ಹಾಕಿಸಿಕೊಂಡು ಹೊರಬಂದಿದ್ದರು. ಆದರೆ, ಶಾಸಕ ರೇವಣ್ಣ ಅವರು ಮಾತ್ರ ತಮ್ಮ ಎಡಗೈಗೆ ಶಾಯಿ ಹಾಕಿಸಿಕೊಳ್ಳದೆ ಹೊರ ಬಂದು ನಂತರ ನೆನಪು ಮಾಡಿಕೊಂಡು ಮತಗಟ್ಟೆಗೆ ತೆರಳಿ ಶಾಯಿ ಹಾಕಿಸಿಕೊಂಡು ಬಂದು ಸುದ್ದಿಗಾರರೊಂದಿಗೆ ಸೇರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.