ದೇಶದ ಸಂಸ್ಕೃತಿ, ಪರಂಪರೆಗೆ ಪ್ರಾಕೃತ ಭಾಷೆಯ ಕೊಡುಗೆ ಅಪಾರ: ಕೆ.ಗೋಪಾಲಯ್ಯ
Team Udayavani, Aug 15, 2022, 11:45 AM IST
ಹಾಸನ: ದೇಶದ ಸಂಸ್ಕೃತಿ ಪರಂಪರೆಗೆ ಪ್ರಾಕೃತ ಭಾಷೆಯ ಕೊಡುಗೆ ಅಪಾರ. ಅದೇ ರೀತಿ ಐತಿಹಾಸಿಕ ಹಿರಿಮೆಯ, ಪುಣ್ಯ ಭೂಮಿ ಶ್ರವಣಬೆಳಗೊಳ ವಿಶ್ವದ ಶಾಂತಿಯ ಪ್ರತೀಕ ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅಭಿಪ್ರಾಯಪಟ್ಟಿದ್ದಾರೆ.
ಶ್ರವಣಬೆಳಗುಳದ ಶ್ರೀ ಧವಳತೀರ್ಥಂ ನಲ್ಲಿದು 2018 ರಲ್ಲಿ ಶ್ರೀ ಭಗವಾನ್ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಸಂಬಂಧ ಪ್ರಾಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಬಾಹುಬಲಿ ಪ್ರಾಕೃತ ವಿದ್ಯಾಪೀಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.
ಶ್ರವಣಬೆಳಗೊಳ ಸಹಸ್ರಾರು ಮಹನೀಯರು ನೆಲೆಸಿದ್ದ, ಋಷಿ ಮುನಿಗಳು ತಪಸ್ಸು ಗೈದ ಪುಣ್ಯ ಭೂಮಿ ಇದರ ಅಭಿವೃದ್ಧಿಗೆ ಮುಖ್ಯ ಮಂತ್ರಿಯವರೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶ್ರಮಿಸುವುದಾಗಿ ಸಚಿವರು ಹೇಳಿದರು.
ಶ್ರವಣಬೆಳಗೊಳದ ಅಭಿವೃದ್ಧಿ ಸಂಕೇತವಾಗಿರುವ ಚಾರೂಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪರಿಶ್ರಮ, ದೂರದೃಷ್ಟಿ ಚಿನಂತನೆ ಹಾಗೂ ಸಂಕಲ್ಪಗಳೇ ಪ್ರಮುಖ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಸ್ವಾಮಿಜಿಯವರೊಂದಿಗೆ ಸಮಾಲೋಚನೆ ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ಹೇಳಿದರು.
ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್ ,ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಮಂಜುನಾಥ್, ಜುಟ್ಟನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಜಿ. ನಿಖಿಲ್ ಗೌಡ, ಶ್ರವಣಬೆಳಗೊಳ ಗ್ರಾಮ ಪಂಚಾಯತಿ ಅಧ್ಯಕ್ಷ ಅನುರಾಧ ಲೋಹಿತ್, ಬಾಹುಬಲಿ ಪ್ರಾಕೃತ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎ.ಸಿ ವಿದ್ಯಾಧರ್, ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಪ್ರೋ ಡಾ ಜಯಕುಮಾರ್ ಉಪಾಧ್ಯೆ , ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ ಎಂ. ವಿ ಮುರುಳಿ ಮತ್ತಿತರರು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.