ಕಸಾಪ ಅಧ್ಯಕ್ಷರ ಅವಧಿ 5 ವರ್ಷ: ಎಚ್. ಎಲ್. ಮಲ್ಲೇಶಗೌಡ.
Team Udayavani, Jan 1, 2022, 6:49 PM IST
ಆಲೂರು: ಶಕ್ತಿ, ಆಸಕ್ತಿ ಹೊಂದಿರುವ ಹಾಗೂ ಸಾಮಾಜಿಕ ನ್ಯಾಯದಲ್ಲಿ ಸಾಹಿತ್ಯಾಸಕ್ತರ ಅಭಿಪ್ರಾಯದಂತೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್. ಎಲ್. ಮಲ್ಲೇಶಗೌಡ ತಿಳಿಸಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ ಕುರಿತು ಏರ್ಪಡಿಸಲಾಗಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯವನ್ನು ಪ್ರತಿ ಅಂಗಳದಲ್ಲಿ ಪಸರಿಸುವ ಶಕ್ತಿ ಹೊಂದಿರುವ ಸಾಹಿತ್ಯ ಆಸಕ್ತರನ್ನು ಸಮಿತಿಯಲ್ಲಿ ನೇಮಕ ಮಾಡುವ ಉದ್ದೇಶ ಹೊಂದಲಾಗಿದೆ. ಪ್ರತಿ ಹೋಬಳಿಯಲ್ಲಿ ಕನಿಷ್ಠ 500 ಜನರು ಸದಸ್ಯರಾಗುವುದರೊಂದಿಗೆ ಕನ್ನಡ ಸಾಹಿತ್ಯ ಭವನ ನಿರ್ಮಾಣವಾಗಬೇಕು.
ಸಮಿತಿ ಐದು ವರ್ಷ ಆಡಳಿತದಲ್ಲಿ ಇರುತ್ತದೆ. ಪದಾಧಿಕಾರಿಗಳು ನಿಷ್ಕ್ರಿಯಾದ ಸಂದರ್ಭದಲ್ಲಿ ಖಂಡಿತ ಬದಲಾವಣೆಯನ್ನು ಸರ್ವ ಸದಸ್ಯರ ಸಮ್ಮುಖದಲ್ಲಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ಆವಧಿಯನ್ನು ಅನ್ಯತಾ ಮೊಟಕುಗೊಳಿಸವುದಿಲ್ಲ ಎಂದರು.
ಸಣ್ಣ ಪತ್ರಿಕೆಗಳ ರಾಜ್ಯ ಅಧ್ಯಕ್ಷ ಜೆ. ಆರ್. ಕೆಂಚೇಗೌಡ ರವರು ಮಾತನಾಡಿ, ಪರಿಷತ್ತು ಪರಿಶುದ್ಧವಾಗಿರಬೇಕು. ಒಮ್ಮತ ಅಭಿಪ್ರಾಯದ ಮೂಲಕ ಕನ್ನಡ ಸಾಹಿತ್ಯ ತೇರನ್ನು ಎಳೆಯೋಣ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಉದಯರವಿ ಮಾತನಾಡಿ ಹಿಂದೆ ನಾನು ಅಧ್ಯಕ್ಷನಾದ ಸಂದರ್ಭದಲ್ಲಿ ಸಭೆಗೆ ಬಂದ ಸಂದರ್ಭದಲ್ಲಿ ನಾಲ್ಕರಿಂದ ಐದು ಜನ ಸಾಹಿತ್ಯ ಅಸಕ್ತರಿರುತ್ತಿದ್ದರು ಇಂದು ನೂರಾರು ಜನ ಸಭೆಗೆ ಬರುತ್ತಾರೆ ಇದು ಸಂತೋಷದ ವಿಷಯ ತಾಲ್ಲೂಕಿನಲ್ಲಿ ಸಾಹಿತ್ಯ ಅಸಕ್ತರು ಹೆಚ್ಚುತ್ತಿದ್ದು ಸಾಹಿತ್ಯ ಮನೆ ಮನೆಗೆ ತಲುಪಬೇಕು ಯಾರೇ ಅಧ್ಯಕ್ಷರಾದರೂ ಯಾವುದೇ ಅಸಮಾಧಾನವಿಲ್ಲದೇ ಸಾಹಿತ್ಯ ಕಟ್ಟುವ ಕೆಲಸವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಗೌರವ ಕಾರ್ಯದರ್ಶಿ ಬಿ. ಆರ್. ಬೊಮ್ಮೇಗೌಡ,ಕೋಶಾಧ್ಯಕ್ಷ ಬಿ.ಎನ್. ಜಯರಾಂ, ಉದಯರವಿ,ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.