ಹಣ ಪಡೆದು ವಾಹನಗಳ ಸಂಚಾರಕ್ಕೆ ಅನುಮತಿ : ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ
Team Udayavani, Jul 30, 2021, 5:04 PM IST
ಸಕಲೇಶಪುರ: ಭೂಕುಸಿತದಿಂದ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ಕೆಲವರು ಹಣ ಪಡೆದು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆಂದು ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ದೋಣಿಗಾಲ್ ಸಮೀಪ ಸಂಘಟನೆ ವತಿಯಿಂದ ವಾಹನಗಳನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು ರಾಷ್ಟ್ರೀಯ ಹೆದ್ದಾರಿ 75 ರಸ್ತೆಯಲ್ಲಿ ಬೇಲಿಯೆ ಎದ್ದು ಹೊಲ ಮೇಯ್ದಂತೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ದೋಣಿಗಲ್ ಸಮೀಪ ಡಾಂಬರ್ ರಸ್ತೆ ಕುಸಿತದಿಂದಾಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೂ ಟ್ಯಾಂಕರ್ ಹಾಗೂ ಸಿಮೆಂಟ್ ಲಾರಿಗಳ ಚಾಲಕರಲ್ಲಿ ಹಣ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಹಲವು ಅಧಿಕಾರಿಗಳು ಇದರಲ್ಲಿ ಶಾಮೀಲು ಆಗಿದ್ದಾರೆ ಎಂದು ಆರೋಪಿಸಿದರು.
ಭಾರಿ ವಾಹನಗಳ ಸಂಚಾರದಿಂದ ಮತ್ತೆ ಭೂಕುಸಿತವಾಗಿ ದುರಸ್ತಿ ಕಾಮಗಾರಿ ವಿಳಂಬವಾಗುವ ಸಾಧ್ಯತೆಯಿದೆ. ಭಾರಿ ವಾಹನಗಳ ಸಂಚಾರಕ್ಕೆ ಕಡ್ಡಾಯವಾಗಿ ನಿಷೇಧ ಹೇರಬೇಕು. ಒಂದು ವೇಳೆ ಹಣ ಪಡೆದು ಮತ್ತೊಮ್ಮೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಕರವೇ ಪ್ರವೀಣ್ ಶೆಟ್ಟಿ ಬಣದ ಪ್ರಧಾನ ಕಾರ್ಯದರ್ಶಿ ಹರೀಶ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.