Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Team Udayavani, Jul 2, 2024, 12:08 AM IST

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

ಹಾಸನ: ದೇಶಾದ್ಯಂತ ಸೋಮವಾರದಿಂದ ಹೊಸ 3 ಕ್ರಿಮಿನಲ್‌ ಕಾನೂನುಗಳು ಜಾರಿಯಾಗಿದ್ದು, ಹೊಸ ಕ್ರಿಮಿನಲ್‌ ಕಾನೂನಿನಡಿ ಹಾಸನದಲ್ಲಿ ರಾಜ್ಯದಲ್ಲೇ ಮೊದಲ ಪ್ರಕರಣ ಬೆಳಗ್ಗೆ 9 ಗಂಟೆಗೆ ದಾಖಲಾಗಿದೆ.

ಹಾಸನ-ಹಳೆಬೀಡು ರಸ್ತೆ ಸೀಗೆ ಗ್ರಾಮದ ಗೇಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿಯಾಗಿ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)ಯಡಿ ರಾಜ್ಯದಲ್ಲಿ ದಾಖಲಾದ ಪ್ರಥಮ ಪ್ರಕರಣ ಎಂದು ಪರಿಗಣಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಅಡಿ, ಬಿಎನ್‌ಎಸ್‌ 2023(ಯು/ಎಸ್‌-281,106) (106 ಮಾನವ ದೇಹವನ್ನು ಬಾಧಿಸುವ ಅಪರಾಧಗಳು, ಜೀವದ ಮೇಲೆ ಪರಿಣಾಮ ಬೀರುವ ಅಪರಾಧಗಳು) (281 ಸಾರ್ವಜನಿಕ ಆರೋಗ್ಯ, ಸುರಕ್ಷೆ, ಮನವರಿಕೆ, ಸಭ್ಯತೆ ಮತ್ತು ನೈತಿಕತೆಯ ಮೇಲೆ ಪರಿಣಾಮ ಬೀರುವ ಅಪರಾಧಗಳು) ದಾಖಲಾಗಿದೆ.

ಅಲ್ಲದೆ ಪೊಲೀಸ್‌ ಅಧಿಕಾರಿಯು ತನಿಖೆಗೆ ಸ್ಥಳಕ್ಕೆ ಧಾವಿಸದಿದ್ದಲ್ಲಿ ಅಥವಾ ತನಿಖೆ ಮಾಡಲು ನಿರಾಕರಿಸಿದ್ದಲ್ಲಿ ಕಲಂ 157 ಸಿಆರ್‌ಪಿಸಿಯ ಕಲಂ (ಎ) ಅಥವಾ (ಬಿ)176 ಬಿಎನ್‌ಎಸ್‌ಎಸ್‌ ಯಡಿ ಕಾರಣ ದಾಖಲಿಸಬಹುದು ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ.

ಹಳೇಬೀಡಿನ ಯೋಗೀಶ್‌ ಅವರ ಪತ್ನಿ ಇಂದು (67) 5 ದಿನಗಳ ಹಿಂದೆ ಕಾಶಿ, ಅಯೋಧ್ಯೆಗೆ ಯಾತ್ರೆ ಹೋಗಿದ್ದರು. ರವಿವಾರ ರಾತ್ರಿ 1 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕರೆತರಲು ಯೋಗೀಶ್‌ ಅವರು ಚಾಲಕ ಸಾಗರ್‌ ಜತೆ ಕಾರಿನಲ್ಲಿ ಹೋಗಿದ್ದರು. ಮುಂಜಾನೆ ಹಾಸನದ ಹಳೇಬೀಡಿನತ್ತ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ಬೆಳಗ್ಗೆ 6.15ಕ್ಕೆ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿತು.

ಯೋಗೀಶ್‌ ಮತ್ತು ಕಾರು ಚಾಲಕ ಸಾಗರ್‌ಗೆ ಸಣ್ಣಪುಟ್ಟ ಗಾಯಗಳಾದರೆ ತೀವ್ರವಾಗಿ ಗಾಯಗೊಂಡ ಇಂದು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟರು. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.