![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 28, 2020, 6:55 AM IST
ಅರಸೀಕೆರೆ: ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಜೀವನ ಮತ್ತು ಸಾಧನೆ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು. ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಒಕ್ಕಲಿಗರ ಸಂಘದ ಸಂಯು ಕ್ತಾಶ್ರಯಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡರ ಹೆಸರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗಿದ್ದು, ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಮುಂದಾ ಗಿರುವುದು ಶ್ಲಾಘನೀಯ ಎಂದರು.
ತಹಶೀಲ್ದಾರ್ ಸಂತೋಷ್ ಕುಮಾರ್, ಜಿಪಂ ಸದಸ್ಯ ಮಾಡಾಳು ಸ್ವಾಮಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆರ್.ಅನಂತಕುಮಾರ್, ತಾ ಪಂ ಇಒ ಎಸ್‌ಪಿ ನಟರಾಜ್, ನಗರಸಭೆ ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಪೌರಾಯುಕ್ತ ಕಾಂತರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಯ್ಯ ಒಕ್ಕಲಿಗ ಸಮಾಜದ ಮುಖಂಡರು ಭಾಗವಹಿಸಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.