ಅತಿಸಾರ ಭೇದಿ ನಿಯಂತ್ರಣಕ್ಕೆ ಅರಿವು ಅಗತ್ಯ
Team Udayavani, Jun 2, 2019, 3:00 AM IST
ಬೇಲೂರು: ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿ ತಡೆಯುವ ಮುಂಜಾಗ್ರತಾ ಕ್ರಮ ಅನುಸರಿಸಲು ಸಾರ್ವಜನಿರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹಗರೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಾಲಿನಿ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿದ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಮುಗಿಯವ ಹಂತ ಮಳೆಗಾಲ ಆರಂಭದಲ್ಲಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿಯಿಂದ ದೇಶದಲ್ಲಿ ಲಕ್ಷಾಂತರ ಮಕ್ಕಳು ಸಾವಿಗಿಡಾಗುತ್ತಿದ್ದು ಇದನ್ನುತಪ್ಪಿಸಲು ಜನರಲ್ಲಿ ಈ ಕಾಯಿಲೆ ಬಗ್ಗೆ ಅರಿವು ಮೂಡಿಸುವುದು ಬಹು ಮುಖ್ಯ ಎಂದರು.
ಬಡತನ, ಶಿಕ್ಷಣದ ಕೊರತೆ ಹಾಗೂ ಹಿಂದುಳಿದ ವರ್ಗಗಳಲ್ಲಿ ಹೆಚ್ಚು ಸಮಸ್ಯೆ ಕಂಡುಬರುತ್ತಿದು ಇದಕ್ಕೆ ಪ್ರಮುಖ ಕಾರಣ ಸ್ವಚ್ಛತೆ ಇಲ್ಲ ದಿರುವುದೇ ಮುಖ್ಯವಾಗಿದ್ದು ಪ್ರಸ್ತುತ ಆರೋಗ್ಯ ಇಲಾಖೆ ಹಾಗು ಎಲ್ಲಾ ಇಲಾಖೆಗಳು ಒಗ್ಗೂಡಿ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಒಆರ್‌ಎಸ್ ದಾಸ್ತಾನು ಮಾಡಿ: ತಾಲೂಕಿನ ಎಲ್ಲ ಆರೋಗ್ಯ ಕೆಂದ್ರಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅತಿಸಾರ ಭೇದಿ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದಲ್ಲದೇ ಪ್ರತಿ ಕೆಂದ್ರದಲ್ಲಿ ಒಆರ್‌ಎಸ್ ಮತ್ತು ಜಿಂಕ್ ಪೌಡರ್ ದಾಸ್ತನು ಮಾಡಿ 5 ವರ್ಷದ ಒಳಗಿನ ಪ್ರತಿ ಮಗುವಿಗೆ ನೀಡುವುದು ಒಳ್ಳೆಯದು ಎಂದು ತಿಳಿಸಿದರು.
ಅತಿಸಾರ ಭೇದಿಗೆ ಮುಖ್ಯವಾಗಿ ಸ್ವಚ್ಛತೆ ಇಲ್ಲದಿರುವುದೇ ಕಾರಣವಾಗಿದ್ದು ಆರೋಗ್ಯ ಇಲಾಖೆ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪತ್ರಿ ಶಾಲೆಗೆ ತೆರಳಿ ವಿದ್ಯಾರ್ಥಿ ಗಳಿಗೆ ಕೈಗಳನ್ನು ಸ್ವಚ್ಛತೆ ಹೇಗೆ ಮಾಡಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಏರ್ಪಡಿಸಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಶುದ್ಧ ನೀರು ಪೂರೈಸಿ: ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಸಿಸ್ಟನ್‌ಗಳನ್ನು ಅಳವಡಿಸಿದ್ದು ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಸಿಸ್ಟ್‌ನ್‌ಗಳನನು ಸ್ವಚ್ಛತೆ ಮಾಡಲು ಮುಂದಾಗಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಮುಂದಾಗಬೇಕು ಎಂದು ತಿಳಿಸಿದರು.
ಅಪೌಷ್ಟಿಕತೆ ನಿವಾರಣೆ: ತಾಲೂಕು ಆರೋಗ್ಯಧಿಕಾರಿ ಡಾ.ವಿಜಯ್ ಮಾತನಾಡಿ, ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಅಪೌಷ್ಟಿಕತೆ ಕಂಡು ಬಂದ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಬೇಕಿತ್ತು ಅದರೆ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಅಪೌಷ್ಟಿಕತೆ ಇರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಲಾರ್ವಾ ಪರೀಕ್ಷೆ: ಪಟ್ಟಣದ ಕೇಲವು ವಾರ್ಡಗಳಲ್ಲಿ ಚಿಕನ್‌ಗೂನ್ಯ, ಡೆಂ ಘೀ ಜ್ವರ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಂಡು ಮನೆ ಮನೆಗೆ ತೆರಳಿ ಲಾರ್ವಾ ಪರೀಕ್ಷೆ ಮಾಡಲಾಗುತ್ತಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ನೀರು ಸಂಗ್ರಹಿಸಬಾರದು ಮತ್ತು ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವಂತೆ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಸಹಾಯಕಿ ಉಷಾ, ಪುರಸಭೆ ಎಂಜಿನಿಯರ್ ಮಧುಸೂದನ್, ಶಿಕ್ಷಣ ಇಲಾಖೆಯ ಚಂದ್ರಮತಿ, ತಾಲೂಕು ಪಂಚಾಯಿತಿ ಅಧಿಕಾರಿ ದಯಾನಂದ್, ಸಿಡಿಪಿಒ ಕಚೇರಿಯ ತೇಜಸ್ವಿನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.