ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ : ಕೋಡಿಮಠ ಶ್ರೀ
Team Udayavani, Sep 12, 2021, 8:30 PM IST
ಅರಸೀಕೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿ ಆಶೀರ್ವಾದ ಪಡೆದರೇ ಹೊರತು, ರಾಜಕಾರಣದ ಬಗ್ಗೆ ಯಾವುದೇ ವಿಷಯ ಪ್ರಸ್ತಾಪ ಮಾಡಿಲ್ಲ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.
ತಾಲೂಕಿನ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ವಿವಾಹ ಕಾರ್ಯಕ್ರಮಕ್ಕೆ ತಾವು ಹೋದಾಗ ಅಲ್ಲಿಗೆ ಸಿದ್ದರಾಮಯ್ಯನವರು ಬಂದಿದ್ದರು, ಕೋವಿಡ್ ಸಂಕಷ್ಟ ಪರಿಸ್ಥಿತಿ ಹಾಗೂ ಇತರೆ ವಿಷಯಗಳ ಬಗ್ಗೆ ಕೆಲವು ನಿಮಿಷ ವಿಚಾರ ಮಂಥನ ನಡೆದು ನಂತರ ಆಶೀರ್ವಾದ ಪಡೆದರು ಎಂದರು.
ಇದನ್ನೂ ಓದಿ:ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ : ಸಚಿವ ಶಿವರಾಮ ಹೆಬ್ಬಾರ
ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣ ಸೇರಿದಂತೆ ಅತ್ಯಂತ ಸೂಕ್ಷ್ಮ ವಿಷಯಗಳನ್ನು ಯಾರೂ ಪ್ರಸ್ತಾಪ ಮಾಡಿಲ್ಲ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಬೇರೆಸುವುದು ಸರಿಯಲ್ಲ ಎಂದರಲ್ಲದೆ, ಒಳ್ಳೆಯ ಕೆಲಸ ಕಾರ್ಯಗಳು ಅಥವಾ ಸಮಸ್ಯೆಗಳ ಪರಿಹಾರದ ಬಗ್ಗೆ ಸೂಕ್ತ ಮಾರ್ಗದರ್ಶನ ಪಡೆಯುವುದು ಅನಾದಿಕಾಲದ ರಾಜ ವಂಶದ ಆಡಳಿತದಲ್ಲಿ ಬೆಳೆದು ಬಂದಿರುವ ಗುರು ಪರಂಪರೆಯ ಸಂಪ್ರದಾಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.