Hassan; ಪ್ರೀತಂ ಗೌಡ ನನ್ನ ತಮ್ಮನಿದ್ದಂತೆ, ಚರ್ಚಿಸಿ ಸರಿ ಮಾಡೋಣ: ಎಚ್.ಡಿ.ಕುಮಾರಸ್ವಾಮಿ
Team Udayavani, Feb 13, 2024, 12:17 AM IST
ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಅವರೇ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಈ ಬಗ್ಗೆ ಚರ್ಚೆ ಮಾಡೋಣ. ಗೊಂದಲವನ್ನು ಕುಳಿತು ಸರಿ ಮಾಡೋಣ. ನಾವು ಅಣ್ಣ ತಮ್ಮಂದಿರಂತೆ ಮುನ್ನಡೆಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪಾಪ ಯಾರೋ ಅವನಮನಸ್ಸಿನ ಮೇಲೆ ಪ್ರಭಾವ ಬೀರಿದಂತಿದೆ. ಅವನಿಗಿನ್ನೂ ಸಣ್ಣ ಪ್ರಾಯ. ಹಾಗಾಗಿ ಬಿರುಸಿನಲ್ಲಿ ಮಾತಾಡುತ್ತಾರೆ. ಅವನು ನನ್ನ ತಮ್ಮನಂತೆ. ಕುಳಿತು ಸರಿ ಮಾಡೋಣ. ಅದೇನೂ ದೊಡ್ಡ ಸಮಸ್ಯೆ ಅಲ್ಲ ಎಂದು ನಗುತ್ತಲೇ ಹೇಳಿದರು.
ರಾಜಕಾರಣದಲ್ಲಿ ಅಣ್ಣ ತಮ್ಮ ಆಗಲು ಸಾಧ್ಯವಿಲ್ಲ: ಪ್ರೀತಂ ಗೌಡ
ನಾನು ಯುವಕನಾಗಿ ಬಿರುಸಿನಿಂದ ಮಾತನಾಡಿದ್ದರೂ ಅದರಲ್ಲಿ ಬದ್ಧತೆ ಇರುತ್ತದೆ. ನಾನೇನು ಮಾಡಬೇಕು ಎಂಬುದರ ಬಗ್ಗೆ ಬಿಜೆಪಿ ತೀರ್ಮಾನಿಸುತ್ತದೆ. ರಾಜಕಾರಣದಲ್ಲಿ ಅಣ್ಣ, ತಮ್ಮ ಆಗಲು ಸಾಧ್ಯವಿಲ್ಲ ಎಂದು ಪ್ರೀತಂ ಗೌಡ ಹೇಳಿದರು. ಅವರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಾನು ಉತ್ಸಾಹದಲ್ಲಿ ಮಾತನಾಡುವುದಿಲ್ಲ. ನನ್ನ ಕೆಲಸ ಮಾತನಾಡುತ್ತದೆ. ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನನ್ನ ಜತೆ ಕುಳಿತು ಮಾತನಾಡುವ ಬದಲು ಅವರ ಶಾಸಕರ ಜತೆ ಮಾತನಾಡುವುದು ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.