![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 12, 2023, 4:12 PM IST
ಚನ್ನರಾಯಪಟ್ಟಣ: ಪಶುಗಳಿಗೆ ಚಿಕಿತ್ಸೆ ನೀಡಬೇಕಾದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ವೈದ್ಯರ ಹಾಗೂ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ತಾಲೂಕಿನ ಜಾನುವಾರುಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ.
ತಾಲೂಕಿನಲ್ಲಿ 49 ಪಶು ಆಸ್ಪತ್ರೆ ಇದ್ದರೆ, ಕೇವಲ 7 ಮಂದಿ ವೈದ್ಯರು ಮಾತ್ರ ಇದ್ದಾರೆ. ಇದಲ್ಲದೆ ಪಶು ಪರಿವೀಕ್ಷಕರು, ಜಾನುವಾರು ಅಭಿವೃದ್ಧಿ ಅಧಿಕಾರಿ, ಆಸ್ಪತ್ರೆ ಮೇಲ್ವಿಚಾರಕರು, ಡಿ ಗ್ರೂಪ್ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು ದಶಕಗಳಿಂದ ಖಾಲಿ ಇವೆ. ಇದರಿಂದಾಗಿ ಹೈನುಗಾರಿಕೆ ಮಾಡುವ ರೈತರಿಗೆ ಹಾಗೂ ರಾಸುಗಳನ್ನು ಹೊಂದಿರುವವರಿಗೆ ಸಮರ್ಪಕ ಸೇವೆ ದೊರೆಯದೇ ತೊಂದರೆ ಅನುಭವಿಸುತ್ತಿದ್ದಾರೆ.
ವಿವಿಧ ಹುದ್ದೆಗಳೂ ಖಾಲಿ: ಐದು ಪಶು ಚಿಕಿತ್ಸಾ ಕೇಂದ್ರಗಳಲ್ಲಿ ಚನ್ನರಾಯಪಟ್ಟಣವ ಹೊರತುಪಡಿಸಿದರೆ, ನುಗ್ಗೇಹಳ್ಳಿ, ಹಿರೀಸಾವೆ, ಶ್ರವಣಬೆಳಗೊಳ, ಬಾಗೂರು ಈ ನಾಲ್ಕು ಕೇಂದ್ರಗಳಲ್ಲಿ ವೈದ್ಯರಿಲ್ಲ. 21 ಪಶು ಚಿಕಿತ್ಸಾಲಯ ಹಾಗೂ 23 ಪ್ರಾಥಮಿಕ ಪಶು ಚಿಕಿತ್ಸಾಲಯಕ್ಕೆ ಕೇವಲ ಆರು ಮಂದಿ ವೈದ್ಯರು ಸೇವೆ ಸಲ್ಲಿಸುತ್ತಿರುವುದು ಒಂದೆಡೆಯಾದರೆ, ಇನ್ನು ಆಸ್ಪತ್ರೆಯ ವಿವಿಧ ಹುದ್ದೆಗಳು ಖಾಲಿ ಇದೆ. ಎಷ್ಟು ಮಂದಿ ಸೇವೆ?: ತಾಲೂಕಿನಲ್ಲಿ 28 ವೈದ್ಯಾಧಿಕಾರಿ ಹುದ್ದೆ ಇದ್ದು, ಏಳು ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಜಾನುವಾರು ಅಭಿವೃದ್ಧಿ ಅಧಿಕಾರಿ ಒಬ್ಬರಿದ್ದಾರೆ. ಹಿರಿಯ ಪಶುವೈದ್ಯ ಪರೀಕ್ಷಕರ ಹುದ್ದೆ 29 ಇದ್ದು, 13 ಮಂದಿ ಇದ್ದಾರೆ.
ಪಶುವೈದ್ಯ ಪರೀಕ್ಷರ 16 ಹುದ್ದೆಗೆ 16 ಮಂದಿ ಇದ್ದಾರೆ. ಕಿರಿಯ ಪಶುವೈದ್ಯ ಪರೀಕ್ಷಕರ 30 ಹುದ್ದೆಗೆ ಕೇವಲ 6 ಮಂದಿ ಸೇವೆಯಲ್ಲಿದ್ದಾರೆ. ಜಾನುವಾರು ಅಧಿಕಾರಿ 4 ಸ್ಥಾನಗಳಿದ್ದು, 3 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಡಿಗ್ರೂಪ್ ನೌಕರರ 70 ಹುದ್ದೆ ಇದ್ದು, 12 ಮಂದಿ ಮಾತ್ರ ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರಿರುವ ಆಸ್ಪತ್ರೆ: ತಾಲೂಕಿನ ಮಟ್ಟನವಿಲೆ, ಉದಯಪುರ, ದಂಡಿಗನಹಳ್ಳಿ, ಕುಂಬೇನಹಳ್ಳಿ ಬೋರೆ, ಜುಟ್ಟನಹಳ್ಳಿ ಅತ್ತಿಹಳ್ಳಿ ಪಶು ಚಿಕಿತ್ಸಾಲಯಗಳಲ್ಲಿ ಮಾತ್ರ ವೈದರಿದ್ದು, ಅವರು ತಮ್ಮ ಆಸ್ಪತ್ರೆ ಜೊತೆಯಲ್ಲಿ ಅಕ್ಕ ಪಕ್ಕದ ನಾಲ್ಕೈದು ಆಸ್ಪತ್ರೆಗೂ ತೆರಳಿ ಅಲ್ಲಿನ ಪಶುಗಳ ಆರೋಗ್ಯ ತಪಾಸಣೆ ಮಾಡಬೇಕಾಗಿದೆ.
ಹೆಚ್ಚು ಒತ್ತಡ: ತಾಲೂಕಿನಲ್ಲಿ ಇರುವ ಬೆರಳೆಣಿಕೆಯಷ್ಟು ವೈದ್ಯರು ಜಾನುವಾಗಳ ತಪಾಸಣೆಯನ್ನು ಮಾತ್ರ ಮಾಡುತ್ತಿಲ್ಲ, ಚಿರತೆ ದಾಳಿಗೆ ತುತ್ತಾದವುಗಳ ತಪಾಸಣೆ ಮಾಡುವುದು, ಒಂದು ವೇಳೆ ರಾಸುಗಳು ರೋಗಕ್ಕೆ ತತ್ತಾಗಿ ಮೃತಟ್ಟರೆ ಮಹಜರ್ ಮಾಡಿ ವರದಿ ನೀಡುವುದು, ವಿಮೆ ದೃಢೀಕರಣ ಕೆಲಸವನ್ನು ಇರುವ ವೈದ್ಯರೇ ಮಾಡಬೇಕಾಗಿದೆ. ಇನ್ನು ಲಸಿಕಾ ಅಭಿಯಾನದಲ್ಲಿ ಪಾಲ್ಗೊಳಬೇಕು, ರೈತರಿಗೆ ಶಿಬಿರ ಏರ್ಪಡಿಸಿ ರಾಸುಗಳನ್ನು ಯಾವ ರೀತಿಯಲ್ಲಿ ಜೋಪಾನವಾಗಿ ನೋಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು ಇವರೇ ನೀಡಬೇಕಾಗಿದ್ದು, ಒತ್ತಡದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಆಸ್ಪತ್ರೆಗೆ ಅಧಿಕಾರಿಯೂ ತೆರಳಿ ಸೇವೆ: ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಶೇಖರ್ ತಾಲೂಕಿನ ಎಲ್ಲಾ ಪಶು ಆಸ್ಪತ್ರೆಗಳನ್ನು ನೋಡಿಕೊಳ್ಳುವುದಲ್ಲದೆ, ಎಲ್ಲಿ ವೈದ್ಯರು ಸರಿಯಾಗಿ ಸೇವೆ ಮಾಡುತ್ತಿದ್ದಾರೆ ಎನ್ನುವುದ್ದನ್ನು ಗಮನ ಹರಿಸಬೇಕು. ಇದರೊಂದಿಗೆ ಸರ್ಕಾರದ ಯೋಜನೆಯನ್ನು ಜನತೆಗೆ ತಲುಪಿಸುವ ಕೆಲಸ, ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ, ಕೆಡಿಪಿ ಸಭೆ, ಶಾಸಕರ ಸಭೆ ಸೇರಿದಂತೆ ವಿವಿಧ ಸಭೆಗೆ ಹಾಜರಾಗಬೇಕಿದೆ. ಪಟ್ಟಣದ ಪಶು ಆಸ್ಪತ್ರೆಗೆ ಆಗಮಿಸುವ ರಾಸುಗಳ ಚಿಕಿತ್ಸೆ ನೀಡುವುದಲ್ಲದೆ ಹೆಚ್ಚುವರಿಯಾಗಿ ಎಂಟು ಆಸ್ಪತ್ರೆಗೆ ತೆರಳಬೇಕಾಗಿದೆ.
ಓರ್ವ ವೈದ್ಯ ಎಷ್ಟು ಆಸ್ಪತ್ರೆಯಲ್ಲಿ ಸೇವೆ?: ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಶೇಖರ್, ಚನ್ನರಾಯಪಟ್ಟಣದ ತಾಲೂಕು ಕೇಂದ್ರದಲ್ಲಿನ ಕಚೇರಿಯಲ್ಲಿ ಸೇವೆ ಸಲ್ಲಿಸಬೇಕು. ಆದರೆ ಇವರು ಪಟ್ಟಣದ ಅಕ್ಕ ಪಕ್ಕದಲ್ಲಿ 8 ಆಸ್ಪತ್ರೆಗಳಿಗೆ ತೆರಳಿ ಪಶುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಡಾ.ಸುಬ್ರಹ್ಮಣ್ಯ ಹಾಗೂ ಡಾ.ಶ್ರೀಧರ್ ತಲಾ 9 ಪಶು ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಡಾ.ಪ್ರಮೋದ್ 11 ಆಸ್ಪತ್ರೆ, ಡಾ.ಪ್ರವೀಣ್, ಡಾ.ಮಂಜುನಾಥ್ ತಲಾ 5 ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದರೆ ನೂತನವಾಗಿ ತಾಲೂಕಿಗೆ ಆಗಮಿಸಿರುವ ಡಾ.ಕಾವ್ಯ ಎರಡು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾಯಿಲೆ ನಿಯಂತ್ರಣ ಕಷ್ಟ : ಬೇಸಿಗೆ ಸಮೀಪಿಸಿದೆ. ಈ ವೇಳೆ ರಾಸುಗಳಿಗೆ ರೈತರು ಒಣ ಮೇವು ಹಾಕುತ್ತಾರೆ. ಇನ್ನು ಬಿಸಿಲ ತಾಪಕ್ಕೆ ಚಪ್ಪೆರೋಗ, ಕುಂದುರೋಗ, ಗಂಟಲುಬೇನೆ, ಕಾಲುಬೇನೆ, ಕರಳುಬೇನೆ, ಕೆಚ್ಚಲು ಬಾವು, ಕಾಲುಬಾಯಿ ರೋಗ ಬರುವುದಲ್ಲದೆ ಹಲವು ರಾಸುಗಳು ಸೇವನೆ ಮಾಡುವ ಆಹಾರ ವಿಷವಾಗುತ್ತದೆ. ಇಂತಹ ವೇಳೆ ಚಿಕಿತ್ಸೆ ಕೊಡಿಸಲು ರೈತರು ಹರಸಾಹಸ ಪಡುವಂತಾಗಿದೆ. ಇದಲ್ಲದೆ ಕುರಿ, ಕೋಳಿ, ಮೇಕೆ, ಕೋಳಿ, ನಾಯಿ, ಬೆಕ್ಕುಗಳಿಗೆ ರೋಗ ಬಂದರೂ ವೈದ್ಯರನ್ನು ಸಂಪರ್ಕಿಸುವುದು ಕಷ್ಟವಾಗುತ್ತಿದೆ. 47 ಸಾವಿರ ಎಮ್ಮೆ, 77 ಸಾವಿರ ಹಸು: 2020ನೇ ಸಾಲಿನಲ್ಲಿ ಗಣತಿ ಪ್ರಕಾರ ತಾಲೂಕಿನಲ್ಲಿ 47,967 ಎಮ್ಮೆಗಳು, 77,906 ಹಸುಗಳು, 36,208 ಮೇಕೆ, 508 ಹಂದಿ, 36,523 ಕುರಿಗಳಿವೆ. ಇವುಗಳ ಜೊತೆಗೆ ಕೋಳಿ, ಕುದುರೆ, ಕತ್ತೆ, ನಾಯಿ, ಬೆಕ್ಕು, ಮೊಲ ಹೀಗೆ ಇತರ ಸಾಕುಪ್ರಾಣಿಗಳು ತಾಲೂಕಿನಲ್ಲಿ 1,93,627 ಇವೆ. ಇವುಗಳು ರೋಗಕ್ಕೀಡಾದರೂ ಈ ವೈದ್ಯರೇ ಗ್ರಾಮಗಳಿಗೆ ತೆರಳಿ ನೋಡಿಕೊಳ್ಳಬೇಕಾಗಿದೆ.
ವೈದ್ಯರು ಕೊರತೆ ಇರುವ ಬಗ್ಗೆ ಮೇಲಧಿಕಾರಿ ಗಳ ಗಮನಕ್ಕೆ ತಂದಿರುವುದಲ್ಲದೆ, ಶಾಸಕರು, ಕೆಡಿಪಿ ಸಭೆ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಇರುವ ವೈದ್ಯರಿಂದಲೇ ಎಲ್ಲಾ ಆಸ್ಪತ್ರೆಗಳಲ್ಲಿ ಕೆಲಸ ಮಾಡಿಸಲಾಗುತ್ತಿದೆ. – ಡಾ.ಸೋಮಶೇಖರ್, ಸಹಾಯಕ ನಿರ್ದೇಶಕರು, ಪಶುಪಾಲನಾ ಇಲಾಖೆ
ಪಶುಪಾಲನಾ ಮಂತ್ರಿ ಕೆ. ವೆಂಕಟೇಶ್ ಅವರೊಂದಿಗೆ ಮಾತನಾಡಿದ್ದು, ತಾಲೂಕಿನಲ್ಲಿ ಇರುವ ವೈದ್ಯರ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. – ಸಿ.ಎನ್.ಬಾಲಕೃಷ್ಣ, ಶಾಸಕ
– ಶಾಮಸುಂದರ್ ಕೆ.ಅಣ್ಣೇನಹಳ್ಳಿ
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.