ಬೆಲೆ ಏರಿಕೆ ತಡೆಯುವಲ್ಲಿಕೇಂದ್ರ ವಿಫ‌ಲ

Team Udayavani, Mar 17, 2021, 1:59 PM IST

ಬೆಲೆ ಏರಿಕೆ ತಡೆಯುವಲ್ಲಿಕೇಂದ್ರ ವಿಫ‌ಲ

ಅರಸೀಕೆರೆ: ನಿತ್ಯ ಅವಶ್ಯಕ ವಸ್ತುಗಳ ಬೆಲೆ ದಿನವೂ ಏರಿಕೆ ಆಗುತ್ತಿದೆ. ಗ್ರಾಮೀಣ ಜನರ ಬದುಕುದುಸ್ತರವಾಗುತ್ತಿದೆ. ಗಗನಕ್ಕೆ ಏರುತ್ತಿರುವ ಬೆಲೆತಡೆಯುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಶಾಸಕ ಕೆ. ಎಂ.ಶಿವಲಿಂಗೇಗೌಡ ಎಚ್ಚರಿಸಿದರು.

ತಾಲೂಕಿನ ಗಂಡಸಿ ಹೋಬಳಿ ಹೋರಿ ಮಂಗಳಾಪುರದಲ್ಲಿ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್‌ಮಿಷನ್‌ ಅಡಿ ಪ್ರತಿ ಮನೆಗೆ ಗಂಗೆ ಯೋಜನೆಯಡಿಪ್ರತಿ ಮನೆಗೂ ನೀರು ಒದಗಿಸಲು ನಲ್ಲಿ ಅಳವಡಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಪೆಟ್ರೋಲ್‌ ಮತ್ತು ಡಿಸೇಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದ್ದು, ಶ್ರೀಸಾಮಾನ್ಯರ ಜೀವನ ತತ್ತರಿಸಿದೆ ಎಂದು ಹೇಳಿದರು.

ನಲ್ಲಿ ಮೂಲಕ ನೀರು: ಹೇಮಾವತಿ ನದಿ ಮೂಲದಿಂದ ತಾಲೂಕಿನ 530 ಹಳ್ಳಿಗಳಿಗೆ ಕುಡಿಯುವ ನೀರು ತಂದಿದ್ದು, ಈಗ ಮನೆ ಮನೆಗೆ ನಲ್ಲಿ ಅಳವಡಿಸಲು 200ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಯೋಜನೆಯಲ್ಲಿ 450 ಓವರ್‌ಹೆಡ್‌ ಟ್ಯಾಂಕ್‌ಗಳನ್ನು ನಿರ್ಮಾಣ ಮಾಡಿ, ಮನೆ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರನ್ನು ತಲುಪಿಸಲಾಗುವುದು ಎಂದು ವಿವರಿಸಿದರು.

ಕೇವಲ ರಸ್ತೆ ಅಭಿವೃದ್ಧಿಪಡಿಸಿಲ್ಲ: ಕ್ಷೇತ್ರದ ಸಮಗ್ರಅಭಿವೃದ್ಧಿ ಮಾಡಿದ್ದಿನೆಯೇ ಹೊರತು, ಕೇವಲ ರಸ್ತೆ ಅಭಿವೃದ್ಧಿಯೊಂದನ್ನೇ ಮಾಡಿಲ್ಲ, ಕ್ಷೇತ್ರದ 10ಸಾವಿರಕ್ಕೂ ಹೆಚ್ಚು ಮಂದಿ ಬೆಂಗಳೂರು ನಗರದಲ್ಲಿಕೂಲಿ, ನಾಲಿ ಮಾಡಿ ಜೀವನ ನಡೆಸುತ್ತಿದ್ದರು. ಅಂತಹ ಜನರಿಗೆ ಉದ್ಯೋಗ ಕಲ್ಪಿಸಲು ಕ್ಷೇತ್ರದಲ್ಲಿನ ಹಲವು ಜನರ ವಿರೋಧದೊಂದಿಗೂ ಪುನಃ ಕರೆ ತಂದುಗಾರ್ಮೆಂಟ್ಸ್‌ಗಳನ್ನು ಆರಂಭಿಸಲು ಉತ್ತೇಜನ ನೀಡಿದ್ದೇನೆ ಎಂದು ಹೇಳಿದರು.

ಅಭಿವೃದ್ಧಿ ಮೂಲಕ ಉತ್ತರ: ಅಲ್ಲದೆ, ಕರೆಕಲ್ಲು ಗುಡ್ಡದ ಬಳಿಯಲ್ಲಿ ಕೈಗಾರಿಕಾ ವಲಯವನ್ನು ಸ್ಥಾಪನೆಮಾಡುವ ಮೂಲಕ ಕ್ಷೇತ್ರದ ನಿರುದ್ಯೋಗಿಯುವಕರಿಗೆ ಉದ್ಯೋಗ ದೊರಕಿಸಲು ನಿರಂತರಹೋರಾಟ ಮಾಡುವ ಮೂಲಕ ತಮ್ಮ ರಾಜಕೀಯ ವಿರೋಧಿಗಳಿಗೆ ಅಭಿವೃದ್ಧಿ ಕಾರ್ಯಗಳ ಮೂಲಕ ಉತ್ತರ ನೀಡಿದ್ದೇನೆ ಎಂದು ಹೇಳಿದರು.

ಕೆರೆ ಕಟ್ಟೆ ನೀರು: ನನ್ನ ರಾಜಕೀಯ ವಿರೋಧಿಗಳ ಟೀಕೆ, ಟಿಪ್ಪಣಿ ಮತ್ತು ಗಿಮಿಕ್‌ ರಾಜಕಾರಣಕ್ಕೆ ನಾನುಎಂದಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ, ಕ್ಷೇತ್ರದಮತದಾರರು ನನ್ನ ಮೇಲೆ ಇಟ್ಟಿರುವ ನಂಬಿಕೆ ಹಾಗೂವಿಶ್ವಾಸಕ್ಕೆ ನಾನು ಋಣಿಯಾಗಿದ್ದು, ನನ್ನ ಮುಂದಿನ ಹೋರಾಟ ತಾಲೂಕಿನ ಕೆರೆ ಕಟ್ಟೆಗಳಿಗೆ ನದಿ ನೀರು ತುಂಬಿಸುವುದು ಎಂದು ಹೇಳಿದರು.

ಜನ ಕೈಜೋಡಿಸಬೇಕು: ಅಲ್ಲದೆ, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯಲ್ಲಿ ಸರ್ಕಾರ ತಾರತಮ್ಯ ಮಾಡಿ, ತಾಲೂಕಿನ ಎರಡು ಕೆರೆಗಳಿಗೆ ನೀರು ನೀಡಿ ಅನ್ಯಾಯ ಮಾಡಲು ಹೊರಟಿದ್ದು, ಬಾಣಾವರ ಹಾಗೂ ಕಣಕಟ್ಟೆ ಹೋಬಳಿ ಕೆರೆ-ಕೆರೆಗಳಿಗೆ ನೀರು ಒದಗಿಸುವವರೆಗೆ ನನ್ನ ಹೋರಾಟ ನಿಲ್ಲದು, ಈ ನನ್ನ ಹೋರಾಟಕ್ಕೆ ತಾಲೂಕಿನ ಜನತೆ ತಮ್ಮ ಜೊತೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೊಂಡೆನಾಳು ಗ್ರಾಪಂ ಅಧ್ಯಕ್ಷ ಹರೀಶ್‌, ಮುಖಂಡರಾದ ಚಿಕ್ಕಯರಗನಾಳು ಮಲ್ಲೇಶ, ಕೊಂಡೆನಾಳು ರಾಜು, ಹರೀಶ, ಶಂಕರೇಗೌಡ, ಗಂಗಾಧರ ಮತ್ತು ಗ್ರಾಮಸ್ಥರು, ಇಲಾಖೆಯ ಎಂಜಿನಿಯರ್‌ ಶಿವಾನಂದ, ಭಾಗವಹಿಸಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.