ದೋಣಿಗಲ್ ಸಮೀಪ ಭೂಕುಸಿತ: ಪರಿಹಾರಕ್ಕೆ ಆಗ್ರಹಿಸಿ ರಾ. ಹೆದ್ದಾರಿ ತಡೆದು ಆಕ್ರೋಶ
50 ಎಕರೆಗೂ ಹೆಚ್ಚು ತೋಟಕ್ಕೆ ಹಾನಿ
Team Udayavani, Aug 11, 2022, 3:57 PM IST
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯ ಗುತ್ತಿಗೆದಾರರ ನಿರ್ಲಕ್ಷ್ಯದ ಪರಿಣಾಮ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಎಕರೆ ಕಾಫಿ ತೋಟ ಹಾಗೂ ಗದ್ದೆಗೆ ಹಾನಿಯಾಗಿದ್ದು ಕೂಡಲೆ ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂತ್ರಸ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 75 ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ ಸುಮಾರು 15 ಮಂದಿಯ ಕಾಫಿ ತೋಟ ಹಾಗೂ ಗದ್ದೆಗಳಿಗೆ ತೀವ್ರ ಹಾನಿಯಾಗಿದ್ದು ಆದರೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯಾವುದೆ ಅಧಿಕಾರಿಗಳು ಬಂದಿಲ್ಲ, ಕಳೆದ 7 ವರ್ಷಗಳಿಂದ ಈ ಕಾಮಗಾರಿ ಮಾಡುತ್ತಲೆ ಇದ್ದಾರೆ. ಭೂಕುಸಿತದಿಂದ ಸುಮಾರು 50ಎಕರೆಗೂ ಹೆಚ್ಚು ಕಾಫಿ ತೋಟ ಗದ್ದೆ ಸಂಪೂರ್ಣ ನಾಶವಾಗಿದೆ. ಗುತ್ತಿಗೆದಾರರು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ದೋಣಿಗಲ್ ಸಮೀಪ ಸಂತ್ರಸ್ತರು ಬಂದು ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಮಾರು ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು.
ಅಂತಿಮವಾಗಿ ತಹಶೀಲ್ದಾರ್ ಜಯಕುಮಾರ್ ಹಾಗೂ ನಗರ ಠಾಣೆಯ ಪಿಎಸ್ಐ ಶಿವಶಂಕರ್ ಪ್ರತಿಭಟನಕಾರರನ್ನು ಸಮಾಧಾನಗೊಳಿಸಿದ ಮೇಲೆ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ವಾಹನಗಳನ್ನು ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.