ಧರಾಶಾಹಿಯಾದ ಬೃಹತ್ ಮರ
Team Udayavani, Nov 21, 2021, 4:59 PM IST
ಹಾಸನ: ಕಳೆದ ಎರಡು ವಾರಗಳಿಂದ ನಿರಂತರ ಮಳೆಯಿಂದಾಗ ರಸ್ತೆ ಬದಿಯ ಬೃಹತ್ ಮರ ಬೇರು ಸಹಿತ ರಸ್ತೆಗೆ ಬಿದ್ದಿರುವ ಘಟನೆ ಶನಿವಾರ ಬೆಳಗ್ಗೆ ನಗರದಲ್ಲಿ ಸಂಭವಿಸಿದೆ. ಕೆ.ಆರ್.ಪುರಂ. ಸ್ವಪ್ನ ಸಾಗರ್ ಹೋಟೆಲ್ ಸಮೀಪದ 9ನೇ ಅಡ್ಡ ರಸ್ತೆ ಕ್ರಾಸ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎದುರು ಇರುವ ಹಳೆಯದಾದ ಮರವೊಂದು ಧರೆಗೆ ಉರುಳಿದೆ.
ಮಳೆಯಿಂದಾಗಿ ಮರದ ಬೇರುಗಳು ಸಡಿಲಗೊಂಡು ಮರವು ಧರಾಶಾಹಿಯಾಗಿದೆ. ಆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಮರ ಬೀಳುವ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಬಚಾವಾದರು ಎಂದು ಪತ್ಯಕ್ಷದರ್ಶಿಗಳು ತಿಳಿಸಿದರು.
ನಗರಸಭೆ 9ನೇ ವಾರ್ಡಿನ ಸದಸ್ಯ ಸಂತೋಷ್ ಮಾತನಾಡಿ, ನಗರಸಭೆಯ ಅಧ್ಯಕ್ಷರು ಮತ್ತು ಆಯುಕ್ತರು ಹಾಗೂ ಸದಸ್ಯರು ಸೇರಿ ಸಭೆ ನಡೆಸಿ ನಗರ ಸಭೆ ವ್ಯಾಪ್ತಿಯಲ್ಲಿರುವ ಹಳೆ ಮರಗಳು ಅಪಾಯದ ಸ್ಥಿತಿಯಲ್ಲಿದೆ ಅದನ್ನು ಗುರುತಿಸಿ ತೆರವು ಮಾಡುವ ಬಗ್ಗೆ ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೇ ಇದುವರೆಗೂ ಅಪಾಯ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಪ್ರದರ್ಶಿಸಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.