ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಚಾಲನೆ

Team Udayavani, May 26, 2020, 7:46 AM IST

raste-abhi-hsn

ಹಾಸನ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ 45 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.

ಹಾಸನ ನಗರದ ಹೊರವಲಯ ದೇವೇ ಗೌಡ ನಗರ ಮತ್ತು ಕೃಷ್ಣ ನಗರಕ್ಕೆ ರಾಜ್ಯ ಹೆದ್ದಾರಿ ಗೊರೂರು ರಸ್ತೆಯಿಂದ ಸಂಪರ್ಕ ಕಲ್ಪಿಸುವ ಸುಮಾರು 2 ಕೋಟಿ ರೂ., ರಾಜಘಟ್ಟದಿಂದ ಗವೇನಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ  ಬೈಪಾಸ್‌ಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ತೊಂದರೆ  ಮಾಡದೇ ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸುಮಾರು 45 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಯವರು ಮಂಜೂರು ಮಾಡಿದ್ದಾರೆ ಎಂದರು.

ಹಾಸನ ನಗರಸಭೆ, ಲೋಕೋಪಯೋಗಿ ಇಲಾಖೆ, ಕಾವೇರಿ ನೀರಾವರಿ ನಿಗಮ  ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳಿಂದ 100 ಕೋಟಿ ರೂ. ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಠಾನವಾಗುತ್ತಿವೆ ಎಂದು ತಿಳಿಸಿದರು.

ರಸ್ತೆ ಅಭಿವೃದ್ಧಿಗೆ ಕ್ರಮ: ಹಾಸನ ನಗರಕ್ಕೆ ಹೊಂದಿಕೊಂಡಂತಿರುವ ಗವೇನಹಳ್ಳಿ, ದೇವೇಗೌಡನಗರ, ಕೃಷ್ಣಾನಗರ, ತಟ್ಟೇಕೆರೆ ಮತ್ತಿತರೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಹಾಳಾಗಿ ಸಾರ್ವಜನಿಕರಿಗೆ ತೊಂದರೆಯಾಗು ತ್ತಿತ್ತು.  ಹಾಗಾಗಿ ಈ ರಸ್ತೆಗಳನ್ನು ಕೈಗೊತ್ತಿ ಕೊಂಡಿದ್ದು, ಡಿಸೆಂಬರ್‌ ವೇಳೆಗೆ ಎಲ್ಲ ಕಾಮಗಾರಿ ಗಳೂ ಪೂರ್ಣಗೊಳ್ಳಲಿವೆ ಎಂದರು.

ಸಾಮಾಜಿಕ ಅಂತರ ಕಾಪಾಡಿ: ಕೊರೊನಾ ದೊಂದಿಗೆ ನಾವು ಬದುಕುಬೇಕಾವುದು ಅನಿವಾರ್ಯವಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸ್ವತ್ಛತೆ ಕಾಪಾಡಬೇಕು ಮತ್ತು ಸಾಮಾಜಿಕ ಅಂತರವನ್ನು  ಕಾಪಾಡಿಕೊಂಡು ಮಾಸ್ಕ್ ಬಳಕೆ ಮಾಡುವ ಮೂಲಕ ಕೊರೋನಾ ಹರಡದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಅಮೃತ್‌ ಯೋಜನೆ ಪ್ರಗತಿ: ಹಾಸನ ನಗರಕ್ಕೆ ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಸುವ ಅಮೃತ್‌ ಯೋಜನೆಯಡಿ ಪೈಪ್‌ಲೈನ್‌ ಅಳವಡಿ ಸುವ ಕಾಮಗಾರಿಗಳು ಪ್ರಗತಿಯಲ್ಲಿದೆ. ಡಿಸೆಂಬರ್‌ ಒಳಗೆ ಕಾಮಗಾರಿ ಪೂರ್ಣ ಗೊಂಡು ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.