ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಪ್ರವೇಶ ನೀಡಲಿ

Team Udayavani, Jun 7, 2019, 7:40 AM IST

hasan-tdy-2..

ಹಾಸನದಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಗಂಗಾಧರ್‌ ಬಹುಜನ್‌ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಹಾಸನ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಬಯಸಿ ಅರ್ಜಿಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ನೀಡದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳು‌ವುದಾಗಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಗಂಗಾಧರ್‌ ಬಹುಜನ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯು ಎಸ್ಸಿ, ಎಸ್ಟಿ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಸಂಖ್ಯೆಯನ್ನು ಕಡಿತಗೊಳಿಸುವಂತೆ ಹೊರಡಿಸಿರುವ ದಲಿತ ವಿರೋಧಿ ಹಾಗೂ ವಿದ್ಯಾರ್ಥಿ, ಯುವಜನ ವಿರೋಧಿ ಆದೇಶವನ್ನು ಹಿಂಪಡೆದು ವಿದ್ಯಾರ್ಥಿನಿಲಯ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳನ್ನೂ ದಾಖಲಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಮಂಜೂರಾತಿ ಸಂಖ್ಯೆಗಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡರೆ ಅಂತಹ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಇತರೆ ಸಮಸ್ಯೆಗಳಿಗೆ ನಿಲಯದ ಮೇಲ್ವಿಚಾರಕರು, ಸಹಾಯಕ ನಿರ್ದೇಶಕರು ಹಾಗೂ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು 2018 ಆಗಸ್ಟ್‌ 27 ರಂದು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

ದಲಿತ ವಿರೋಧಿ ಆದೇಶ: ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರಿಗೆ ಈ ಆದೇಶ ತಪಲಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಮ್ಮ ಇಲಾಖೆ ಮೂಲಕ ಹೊರಡಿಸಿರುವ ಆದೇಶ ದಲಿತ ವಿರೋಧಿಯಾಗಿದೆ ಎಂದರು.

ನಿರ್ವಹಣಾ ವೆಚ್ಚ ಹೆಚ್ಚಳ ಮಾಡಿ: ವಿದ್ಯಾರ್ಥಿ ನಿಲಯಗಳಲ್ಲಿ ತಿಂಗಳಿಗೆ ವಿದ್ಯಾರ್ಥಿಯೊಬ್ಬರಿಗೆ ನೀಡುತ್ತಿರುವ ನಿರ್ವಹಣಾ ಭತ್ಯೆ 1,600 ರಿಂದ 3 ಸಾವಿರ ರೂ.ಗಳಿಗೆ ಏರಿಸಬೇಕು ನಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನಹರಿಸದಿದ್ದರೇ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಹರೀಶ್‌ ಅತ್ನಿ, ಉಪಾಧ್ಯಕ್ಷ ಎ.ಪಿ. ಅಹಮದ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್‌ ಕೀರ್ತಿ, ಜಿಲ್ಲಾ ಕಾರ್ಯದರ್ಶಿ ದೇವರಾಜು ತಿರುಪತಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.