ಮಕ್ಕಳ ಸುರಕ್ಷತೆಗೆ ಚಾಲಕರು ಆದ್ಯತೆ ನೀಡಲಿ
Team Udayavani, Jul 8, 2019, 4:14 PM IST
ಹಾಸನ ನಗರದಲ್ಲಿರುವ ಕೆಎಸ್‌ಆರ್‌ಟಿಸಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿಂದು ಆಯೋಜಿಸಲಾಗಿದ್ದ ಶಾಲಾ ವಾಹನಗಳ ತಪಾಸಣೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ಶಾಲಾ ವಾಹನ ತಪಾಸಣೆ ಮಾಡಿದರು.
ಹಾಸನ: ರಸ್ತೆ ಸುರಕ್ಷತಾ ನಿಯಮವನ್ನು ಅನುಸರಿಸುವ ಜೊತೆಗೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ನಿಧಾನವಾಗಿ ವಾಹನ ಚಾಲನೆ ಮಾಡುವಂತೆ ಶಾಲಾ ವಾಹನ ಚಾಲಕರಿಗೆ ಮೈಸೂರು ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿ.ಟಿ ಮೂರ್ತಿ ತಿಳಿವಳಿಕೆ ಹೇಳಿದರು.
ನಗರದ ಹಾಲು ಒಕ್ಕೂಟದ ವ ಕೆಎಸ್‌ಆರ್‌ಟಿಸಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಶಾಲಾ ವಾಹನಗಳ ತಪಾಸಣೆ ಹಾಗೂ ಚಾಲಕರು, ಸಹಾಯಕರುಗಳಿಗೆ ರಸ್ತೆ ಸುರ ಕ್ಷತೆಯ ಕುರಿತು ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಚಾಲಕ ವೃತ್ತಿ ಹೆಚ್ಚು ಜವಾಬ್ದಾರಿ ಯುತವಾಗಿದೆ. ಇದರಲ್ಲಿ ಅತಿ ಹೆಚ್ಚಿನ ಜಾಗರೂಕತೆ ಅಗತ್ಯ, ಅನೇಕ ಅಮೂಲ್ಯ ಜೀವಗಳ ಜವಾಬ್ದಾರಿ ತಮ್ಮದಾಗಿರುತ್ತದೆ. ಶಾಲಾ ವಾಹನ ಚಾಲಕರು ಹಾಗೂ ಸಹಾಯಕರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಮಕ್ಕಳ ಸುರಕ್ಷತೆಯಲ್ಲಿ ಶಾಲಾ ಸಿಬ್ಬಂದಿ ಹಾಗೂ ಪೋಷಕರೂ ಕೂಡ ಪಾಲುದಾರರಾಗಿದ್ದು ತಮ್ಮ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮವನ್ನು ಅನುಸರಿಸಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಅಶೋಕ್ ಕುಮಾರ್ ಮಾತನಾಡಿ, ವಾಹನ ಚಾಲಕರ ನಿರ್ಲಕ್ಷ್ಯದಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಮಕ್ಕಳನ್ನು ಕರೆದೊಯ್ಯುವ ವಾಹನಗಳು ಸುಸಜ್ಜಿತವಾಗಿರಬೇಕು ಶಾಲಾ ಆಡಳಿತ ಮಂಡಳಿ ತಮ್ಮ ಸಂಸ್ಥೆಯ ವಾಹನವನ್ನು ಸಕಾಲಕ್ಕೆ ಪರಿಶೀಲನೆ ಮಾಡಿಸಿಕೊಳ್ಳಬೇಕೆಂದು ಹೇಳಿದರು.
ಇದೇ ವೇಳೆ ಮೋಟಾರು ವಾಹನ ನಿರೀಕ್ಷಕ ಸತೀಶ್ ಕುಮಾರ್ ಮಾತ ನಾಡಿ, ಯಾವುದೇ ಶಿಕ್ಷಣ ಸಂಸ್ಥೆಗಳು ಚಾಲಕರನ್ನು ನೇಮಕ ಮಾಡುವ ಮುನ್ನ ಅಗತ್ಯ ದಾಖಲಾತಿ ಬಗ್ಗೆ ಪರಿಶೀಲನೆ ಮಾಡಬೇಕು ಎಂದರು.
ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಜಿಪಿಎಸ್ ಮತ್ತು ವೇಗನಿಯಂತ್ರಣ ಅಳ ವಡಿಸಿಕೊಳ್ಳಬೇಕು ಎಂದರು.
ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಡಯಟ್‌ನ ಉಪ ನಿರ್ದೇಶಕ ಪುಟ್ಟರಾಜು, ಬಿಇಒ ಕೃಷ್ಣ, ಮೋಟಾರು ವಾಹನ ನಿರೀಕ್ಷಕ ಯಶ ವಂತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.