ತಹಶೀಲ್ದಾರರು ಜಾಗರೂಕರಾಗಿ ಕಾರ್ಯ ನಿರ್ವಹಿಸಲಿ
Team Udayavani, May 14, 2020, 6:36 AM IST
ಹಾಸನ: ಜೆಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹೆಚ್ಚಿನ ಜಾಗರೂಕತೆ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದರು.
ಡೀಸಿ ಕಚೇರಿಯಲ್ಲಿ ಎಲ್ಲಾ ತಾಲೂಕುಗಳ ತಹಶೀ ಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಹೊರ ರಾಜ್ಯಗಳಿಂದ ಬರುವವರನ್ನು ಚೆಕ್‌ಪೋಸ್ಟ್‌ಗಳ ಲ್ಲಿಯೇ ತಡೆದು ಕ್ವಾರಂಟೈನ್‌ಗೆ ಕಳುಹಿಸಬೇಕು. ತಹಶೀ ಲ್ದಾರರು ಪ್ರತಿದಿನ ಚೆಕ್‌ಪೋಸ್ಟ್‌ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಪ್ರತಿ ತಾಲೂಕಿನಲ್ಲಿ 2 ಹೋಟೆಲ್‌ಗಳನ್ನು ಹೋಂ ಕ್ವಾರಂಟೈನ್ ಮಾಡಬಹುದಾದ ಸ್ಥಳಗಳೆಂದು ಗುರುತಿಸ ಬೇಕು. ಪರಸ್ಥಳಗಳಿಂದ ಬಂದವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಕ್ವಾಂರಂಟೈನ್ ಇರಲು ಇಚ್ಛಿಸದಿದ್ದಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಹೋಟೆಲ್‌ಗಳಲ್ಲಿ ಹೋಂ ಕ್ವಾರಂಟೈನ್ ಆಗಲು ವ್ಯವಸ್ಥೆ ಮಾಡಬೇಕು ಎಂದರು.
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಚನ್ನರಾಯ ಪಟ್ಟಣ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿ ಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಡ್ಡಾಯವಾಗಿ ಆರೋಗ್ಯ ಸುರಕ್ಷತಾ ಪರಿಕರಗಳನ್ನು ನೀಡಬೇಕು ಎಂದು ಹೇಳಿದರು. ಎಸ್ಪಿ ಆರ್. ಶ್ರೀನಿವಾಸ್ ಗೌಡ ಅವರು ಮಾತನಾಡಿ, ಚೆಕ್‌ಪೋಸ್ಟ್‌ಗಳಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಚಾಲಕರನ್ನು ಹೊರತುಪಡಿಸಿ ಬೇರೆ ಯಾರೇ ಬಂದರೂ ಅವರನ್ನು ತಡೆದು ಪರಿಶೀಲಿಸಿ ಹೋಂ ಕ್ವಾರಂಟೈನ್‌ಗೆ ಕಳುಹಿಸಬೇಕು.
ಚೆಕ್‌ಪೋಸ್ಟ್‌ಗಳಲ್ಲಿ ಸೇವಾ ಸಿಂಧು ಪಾಸ್ ಇಲ್ಲದವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸ ಬೇಕೆಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಬಿ.ಎ. ಪರಮೇಶ್, ಎಡೀಸಿ ಕವಿತಾ ರಾಜರಾಂ, ನಗರಾಭಿವೃದಿಟಛಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್, ತಹಶೀಲ್ದಾರ್ ಶಿವಶಂಕರಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.