ಸೌಲಭ್ಯ ಸದ್ಬಳಕೆಯಾಗಲಿ
Team Udayavani, Oct 4, 2019, 5:04 PM IST
ಸಕಲೇಶಪುರ: ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಸರ್ಕಾರ ಇಂದು ಅನೇಕ ಯೋಜನೆಗಳನ್ನು ರೂಪಿಸಿದ್ದು, ಇದರ ಪ್ರಯೋಜನವನ್ನು ಪಡೆ ಯಲು ಯುವ ಜನಾಂಗ ಮುಂದಾಗಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತ ಹೇಳಿದರು.
ಗುರುವಾರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಭಾವಿ ಜವಳಿ ಉದ್ದಿಮೆದಾರರಿಗೆ ನೂತನ ಜವಳಿ ನೀತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ತಾಲೂಕು ಪಂಚಾಯಿತಿ ಸದಸ್ಯ ಎಡೆಹಳ್ಳಿ.ಆರ್.ಮಂಜುನಾಥ್ ಮಾತನಾಡಿ, ಪುರಾತನ ಕಾಲದಲ್ಲಿ ಮನುಷ್ಯ ಬಟ್ಟೆ ಇಲ್ಲದೇ ಮಾನ ಮುಚ್ಚಿಕೊಳ್ಳಲು ಸೊಪ್ಪನ್ನು ಸುತ್ತಿಕೊಳ್ಳುತ್ತಿದ್ದ . ಈಗ ಕಾಲ ಬದಲಾಗಿದ್ದು ಆಧುನಿಕ ಯುಗದಲ್ಲಿ ಮನುಷ್ಯ ಇಂದು ವಿಕಾಸಗೊಂಡಿದ್ದು, ತನ್ನ ವಸ್ತ್ರಗಳಿಗಾಗಿಯೇ ಸಾವಿರಾರು ರೂ. ಖರ್ಚು ಮಾಡುತ್ತಿದ್ದಾನೆ. ಸರ್ಕಾರ ಜಾರಿಗೆ ತಂದಿರುವ ಇಂತಹ ಯೋಜನೆಗಳಲ್ಲಿ ತರಬೇತಿಯನ್ನು ಪಡೆದು ತಮ್ಮ ಭವಿಷ್ಯದ ಜೀವನವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಣಕಾಸು ನಿಗಮ(ಕೆಎಸ್‌ಎಫ್ಸಿ)ಯ ವ್ಯವಸ್ಥಾಪಕರಾದ ಪರಶಿವಮೂರ್ತಿ ಅವರು ಸಾಲ ಸೌಲಭ್ಯಗಳನ್ನು ಯಾವರೀತಿಯಲ್ಲಿ ನೀಡಲಾಗುತ್ತದೆ, ಸಬ್ಸಿಡಿಗಳು ಹೇಗೆ ದೊರೆಯುತ್ತದೆ ಎಂಬುದಾಗಿ ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷ ಕೃಷ್ಣೇಗೌಡ , ಸದಸ್ಯರಾದ ರುಕ್ಮಿಣಿ ,ಚಂದ್ರಮತಿ , ಪುರಸಭಾ ಸದಸ್ಯರಾದ ಕಾಡಪ್ಪ, ಅಣ್ಣಪ್ಪ , ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಶಿವಲಿಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.