ವಾರದಲ್ಲಿ 3 ದಿನ ಮದ್ಯ ಮಾರಾಟ
Team Udayavani, May 4, 2020, 5:23 PM IST
ಹಾಸನ: ವಾರದಲ್ಲಿ 3 ದಿನ ಮಾತ್ರ ಬೆಳಗ್ಗೆ 9ರಿಂದ ಸಂಜೆ 7ರ ವರೆಗೂ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟಿದೆ. ಆದರೆ ಮದ್ಯ ಖರೀದಿಯ ಪ್ರಮಾಣದ ಮಿತಿಯನ್ನೇನೂ ನಿಗದಿಪಡಿಸಿಲ್ಲ. ದಾಸ್ತಾನು ಮುಗಿಯುವರೆಗೂ ವಹಿವಾಟು ನಡೆಯಲಿದೆ.
ಸಿ.ಎಲ್ -2 ( ಮದ್ಯದಂಗಡಿ ) ಹಾಗೂ ಎಂಎಸ್ಐಎಲ್ ಮಳಿಗೆಗಳಲ್ಲಿ ಮಾತ್ರ ಸಾಮಾಜಿಕ ಅಂತರ ಕಾಯ್ದು ಕೊಂಡು ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಅವಕಾಶವಿಲ್ಲ. ಮದ್ಯ ಮಾರಾಟಗಾರರು ಗ್ಲೌಸ್ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ. ಮದ್ಯ ಖರೀದಿ ಮಾಡುವವರಿಗೆ ಸಾನಿಟೈಸರ್ ಬಳಕೆ ಸೂಚನೆ ನೀಡಬೇಕು. ಮದ್ಯ ಖರೀದಿಸುವವರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮದ್ಯದಂಗಡಿಗಳ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮದ್ಯ ಮಾರಾಟ ಮಳಿಗೆಯವರು ಭಾನುವಾರವೇ ಮದ್ಯದಂಗಡಿಗಳ ಮುಂದೆ ಮರದ ತುಂಡುಗಳಿಂದ ಬ್ಯಾರಿಕೇಡ್ ನಿರ್ಮಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಕಲವು ಮದ್ಯ ವ್ಯಾಪಾರಿಗಳು ಭಾನುವಾರ ಸಂಜೆಯೇ ಅಂಗಡಿಗಳ ಮುಂದೆ ಪೂಜೆ ನೆರವೇರಿಸಿ ಸೋಮವಾರದಿಂದ ವ್ಯಾಪಾರಕ್ಕೆ ಸಿದ್ಧತೆ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.