ಆರ್ಯವೈಶ್ಯ ನಿಗಮದಿಂದ ಸಾಲ ಸೌಲಭ್ಯ
Team Udayavani, Jun 20, 2020, 6:51 AM IST
ಹಾಸನ: ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮವು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ ಆರಂಭಿಸಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ತಿಳಿಸಿದರು. ಹಾಸನದ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಆರ್ಯ ವೈಶ್ಯ ಸಮಾಜದ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.
ಜಿಲ್ಲೆಯಿಂದ 38 ಫಲಾನುಭವಿಗಳಿಗೆ ತಲಾ 65 ಸಾವಿರ ರೂ.ಸಾಲ ನೀಡಲಾಗುತ್ತಿದೆ. ಫಲಾನುಭವಿ ಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾ ರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಎಂಜಿನಿಯರಿಂಗ್, ವೈದ್ಯಕೀಯ, ದಂತವೈದ್ಯಕೀಯ ಮತ್ತಿರ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೇ.2ರ ಬಡ್ಡಿದರದಲ್ಲಿ ಗರಿಷ್ಠ 1 ಲಕ್ಷ ರೂ. ಶೈಕ್ಷಣಿಕ ಸಾಲ ಮಂಜೂರು ಮಾಡಲಾಗುವುದು ಎಂದು ಹೇಳಿದರು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಶೇ.4ರ ಬಡ್ಡಿ ದರದಲ್ಲಿ ಗರಿಷ್ಠ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲಾಗುವುದು ಎಂದರು.ರಾಜ್ಯದಲ್ಲಿ ಸ್ವಯಂ ಉದ್ಯೋಗ ನಡೆಸುವ ಆರ್ಯ ವೈಶ್ಯ ಸಮುದಾ ಯದ ವರಿಗೆ 100 ಫುಡ್ ಟ್ರಕ್ ವಿತರಿಸಲು 5 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯ ಮಂತ್ರಿ ಗಳಿಗೆ ಮನವಿ ಮಾಡಲಾಗಿದೆ ಎಂದರು. ನಿಗಮದ ಜಿಲ್ಲಾ ವ್ಯವಸ್ಥಾಪಕ ಕೃಷ್ಣಕುಮಾರ್ ಹಾಗೂ ಆರ್ಯವೈಶ್ಯ ಮಂಡಳಿ ಕಾರ್ಯದರ್ಶಿ ವಿಶ್ವನಾಥ್, ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಯುವ ಪರಿಷತ್ತಿನ ರವಿ ನಂದನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.