Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
ಸುಮಲತಾ ವಿರುದ್ಧವೂ ಮಾಜಿ ಪ್ರಧಾನಿ ಬೇಸರ
Team Udayavani, Apr 24, 2024, 11:32 PM IST
ಹಾಸನ: ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ವೇಳೆ ಮೈತ್ರಿಪಕ್ಷಗಳ ಅಭ್ಯರ್ಥಿಗಳ ಪರ ಬಿಜೆಪಿಯ ಕೆಲ ವರು ಸಹಕಾರ ನೀಡಲಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಕೆಲವು ನಾಯಕರು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಹಕಾರ ನೀಡಲಿಲ್ಲ. ಮಂಡ್ಯ ಕ್ಷೇತ್ರದಲ್ಲೂ ಸುಮಲತಾ ಅಂಬರೀಷ್ ಹೀಗೆಯೇ ನಡೆದುಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹಣದ ಹೊಳೆ ಯನ್ನೇ ಹರಿಸಿದ್ದಾರೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ ಮಾಡಿಕೊಡಲೆಂದೇ ಈ ರಾಜ್ಯ ಸರಕಾರ 125 ಕೋಟಿ ರೂ. ಎಲ್‌ಒಸಿ ಬಿಡುಗಡೆ ಮಾಡಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ 7 ಕಡೆ ಮಂಗಳವಾರ ತಾನು ಪ್ರಚಾರ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಕಾಂಗ್ರೆಸ್‌ನವರು ಎಷ್ಟೇ ಹಣದ ಹೊಳೆ ಹರಿಸಿದರೂ ಎಚ್.ಡಿ. ಕುಮಾರಸ್ವಾಮಿ ಮತ್ತು ಡಾ| ಸಿ.ಎನ್. ಮಂಜುನಾಥ್ ಗೆಲ್ಲು ತ್ತಾರೆ ಎಂದು ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.