ವಿದ್ಯಾರ್ಥಿಗಳಿಗೆ ಕಲೆ, ಸಂಸ್ಕೃತಿಯ ಅರಿವು ಮೂಡಿಸಿ
Team Udayavani, Jan 29, 2020, 3:00 AM IST
ಅರಸೀಕೆರೆ: ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದ ಮಹತ್ವ ಹಾಗೂ ಜಾನಪದ ಕಲೆ ಮತ್ತು ಸಾಹಿತ್ಯ, ಸಂಸ್ಕೃತಿ ಮನವರಿಕೆ ಮಾಡಿಕೊಡುವಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ಸಹೃದಯಿ ಕನ್ನಡ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಕಣ ಪೂಜೆ ಮಾಡಿ ರಾಗಿ ತೂರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ರೈತರು, ಜನ ಪ್ರತಿನಿಧಿಗಳೂ ಪಾಲ್ಗೊಳ್ಳಲಿ: ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಸೀಮಿತಗೊಳಿಸದೇ ರೈತರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳುವ ರೀತಿ ಎರಡು ಮೂರು ದಿನ ಆಯೋಜಿಸಿದರೆ ಇದಕ್ಕೆ ಸಹ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ಅರ್ಥಪೂರ್ಣ ಕಾರ್ಯಕ್ರಮ: ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ದೃಶ್ಯ ಮಾಧ್ಯಮಗಳ ಹಾವಳಿಯ್ಲಿ ದೇಶೀಯ ಜಾನಪದ ಕಲೆ, ನಾಟಕಗಳು ಹಾಗೂ ಗ್ರಾಮೀಣ ಕ್ರೀಡೆಗಳು ಪ್ರಾಮುಖ್ಯತೆ ಕಳೆದುಕೊಂಡಿವೆ. ಕಲೆ ಸಂಸ್ಕೃತಿಯನ್ನು ಯುವ ಜನರಿಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೌರಾಯುಕ್ತ ಕಾಂತರಾಜ್, ಕ್ಷೇತ್ರ ಸಮನ್ವಯ ಅಧಿಕಾರಿ ಗಂಗಾಧರ್, ಸೆಸ್ಕ್ ಎಇಇ ಮನೋಹರ್, ತಾಲೂಕು ನೌಕರರ ಸಂಘದ ಅಧ್ಯಕ್ಷ ಬಸವರಾಜು, ನಗರ ಬಿಜೆಪಿ ಅಧ್ಯಕ್ಷ ಮನೋಜ್‌ಕುಮಾರ್, ಕಾರ್ಯಕ್ರಮ ಆಯೋಜಕರಾದ ಮೋಹನ್‌ಕುಮಾರ್, ಕುಮಾರ್, ದಿವಾಕರ್, ಬಿ.ಪರಮೇಶ್, ಮಂಜುನಾಥ್, ಪ್ರಸಾದ್, ನಟರಾಜ್, ಸುಧಾ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ: ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಸಾರ್ವಜನಿಕರ ಮನಸೆಳೆಯಿತು. ತಾಲೂಕಿನ 15 ಶಾಲೆಗೂ ಹೆಚ್ಚಿನ ವಿದ್ಯಾರ್ಥಿಗಳು ಜಾನಪದ ನೃತ್ಯ ಪ್ರದರ್ಶನ, ವೀರಗಾಸೆ ಡೊಳ್ಳು ಕುಣಿತ, ಭರತನಾಟ್ಯ, ಯಕ್ಷಗಾನ ಕೋಲಾಟ ಮೊದಲಾದ ಕಲಾ ಪ್ರಕಾರಗಳ ನೃತ್ಯ ಪ್ರದರ್ಶನ ಮೂಲಕ ದೇಶೀಯ ಜಾನಪದ ಕಲೆ ಮತ್ತು ಸಾಹಿತ್ಯದ ಮಹತ್ವವನ್ನ ಸಾರುವಲ್ಲಿ ಯಶಸ್ವಿಯಾದರು.
ಜಾನಪದ ಕಲೆ ಮಹತ್ವದ ಅರಿವು: ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ಆಯೋಜಿಸಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಈ ಜಾನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಜಾನಪದ ಕಲೆಯ ಮಹತ್ವವನ್ನ ವಿದ್ಯಾಥಿರ್ಘಗತಿಳಿಸುವ ಕೆಲಸ ಮಾಡಿದ್ದು ಶ್ಲಾಘನೀಯ. ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಮತ್ತು ಕಾರ್ಯಕ್ರಮ ಆಯೋಜನೆ ಮಾಡಿದ ಎಲ್ಲರೂ ಅಭಿನಂದನಾ ರ್ಹರು ಎಂದು ಮೆಚ್ಚಿಗೆ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.