ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ
Team Udayavani, Jun 27, 2019, 3:00 AM IST
ಅರಸೀಕೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರು ಹಾಗೂ ರೈತರಿಗೆ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸೂಚನೆ ನೀಡಿದರು. ನಗರದಲ್ಲಿನ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ತಾಪಂ ಅಧ್ಯಕ್ಷೆ ರೂಪಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರವಾದ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದು, ಅವುಗಳನ್ನು ಜನಪ್ರತಿನಿ ಧಿಗಳ ಮುಂದೆ ಅಧಿಕಾರಿಗಳು ಮಂಡಿಸುವುದಕ್ಕಿಂತ ಜನಪ್ರತಿನಿ ಧಿಗಳು ಒಳಗೊಂಡಂತೆ ರೈತರು, ಸಾರ್ವಜನಿಕರನ್ನು ಒಂದೆಡೆ ಸೇರಿಸಿ ಸರಕಾರದ ಹೊಸ ಯೋಜನೆಗಳ ಮಾಹಿತಿ ನೀಡುವ ಜೊತೆಗೆ ಸಂಭಂದ ಪಟ್ಟ ಯೋಜನೆಯ ಸದ್ಬಳಕೆ ಕುರಿತು ಅರ್ಹ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಡುವ ಕೆಲಸ ಅ ಧಿಕಾರಿಗಳಿಂದಾಗಬೇಕಾಗಿದೆ ಎಂದು ಸಲಹೆ ನೀಡಿದರು.
ತೋಟಗಾರಿಕಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಸಭೆ ಆರಂಭವಾಗುತ್ತಿದ್ದಂತೆ ತಾಪಂ ಅಧ್ಯಕ್ಷೆ ರೂಪಾ ಮಾತನಾಡಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸೇರಿದಂತೆ ಕೆಲವು ಇಲಾಖೆಯ ಅಧಿಕಾರಿಗಳು ಚುನಾಯಿತ ಜನಪ್ರತಿನಿ ಧಿಗಳಿಗೆ ಕನಿಷ್ಠ ಗೌರವ ನೀಡುವುದಿಲ್ಲ. ಯಾವುದೇ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲು ತಾವೇ ಕಚೇರಿಗೆ ಭೇಟಿ ನೀಡಿದ ವೇಳೆ ಕೆಲವು ಅಧಿ ಕಾರಿಗಳು ಕಂಡು ಕಾಣದಂತೆ ಮುಖ ತಿರುಗಿಸಿಕೊಂಡು ಹೋಗುತ್ತಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷರಾದ ತಮಗೇ ಗೌರವ ನೀಡದವರು ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರ ಕೆಲಸಗಳನ್ನು ಹೇಗೆ ಮಾಡಿಕೊಡುತ್ತಾರೆ ಎಂದು ಪ್ರಶ್ನಿಸಿದರು.
ಕ್ರಮಕ್ಕೆ ಶಿಫಾರಸು- ಎಚ್ಚರಿಕೆ: ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕರು, ಜನಪ್ರತಿನಿ ಧಿಗಳಿಗೆ ಗೌರವ ನೀಡದ ಅಧಿ ಕಾರಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತಕ್ರಮ ಕೈಗೊಳ್ಳು ವಂತೆ ನಾನೇ ಶಿಫಾರಸು ಮಾಡುತ್ತೇನೆ. ಮುಂದೆ ಈ ರೀತಿ ಯಾರಿಗೂ ಆಗದಂತೆ ಅ ಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ನಡೆದುಕೊಳ್ಳುವಂತೆ ತಾಕೀತು ಮಾಡಿದರು.
ತೋಟಗಾರಿಕಾ ಇಲಾಖೆ ಸೌಲಭ್ಯ ನೀಡಿ: ಸದಸ್ಯ ಭೋಜಾನಾಯ್ಕ ಮಾತನಾಡಿ ಕಳೆದ ಎರಡು ವರ್ಷಗಳಿಂದ ರೈತರಿಗೆ ತೋಟಗಾರಿಕೆ ಇಲಾಖೆ ಮೂಲಕ ನೀಡುವ ನೀರಿನ ಟ್ಯಾಂಕ್‌ನ್ನು ನೀಡುತ್ತಿಲ್ಲ. ಅರ್ಹ ಫಲಾನುಭವಿಗಳಿಗೆ ನೀಡಬೇಕಾದ ಕೃಷಿ ಪರಿಕರಗಳನ್ನು ಬೇರೆಯರಿಗೆ ಕೃಷಿ ಇಲಾಖೆ ಅಧಿಕಾರಿಗಳು ನೀಡುವ ಮೂಲಕ ವಂಚಿಸಿದ್ದಾರೆ. ಈ ಬಗ್ಗೆ ತಮ್ಮ ಬಳಿ ಸಾಕ್ಷ್ಯವಿದ್ದು, ವಂಚನೆಗೊಳಗಾದ ರೈತನಿಗೆ ಶಾಸಕರು ನ್ಯಾಯ ದೊರಕಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ನೀರಿನ ಟ್ಯಾಂಕರ್‌ಗೆ ಬೇಡಿಕೆ ಇದ್ದು, ರೈತರಿಂದ ಅರ್ಜಿಗಳು ಬಂದಿದೆ, ಸರ್ಕಾರ ಕಳೆದ ಎರಡು ವರ್ಷಗಳಿಂದ ನೀರಿನ ಟ್ಯಾಂಕ್ ನೀಡದ ಕಾರಣ ವಿತರಣೆಗೆ ಸಾಧ್ಯವಾಗಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ರೈತರಿಗೆ ಕೃಷಿ ಪರಿಕರ ನೀಡುವಲ್ಲಿ ಅಧಿಕಾರಿಗಳಿಂದ ವಂಚನೆ ನಡೆದಿದ್ದರೆ ಲಿಖೀತ ದೂರನ್ನು ಸದಸ್ಯರು ನೀಡಿದರೇ ಕ್ರಮಕೈಗೊಳ್ಳುವ ಭರವಸೆಯನ್ನು ಶಾಸಕರು ನೀಡಿದರು.
ವಾಣಿಜ್ಯ ಮಳಿಗೆ ಬಾಡಿಗೆ ವಸೂಲಿ ಮಾಡಿ: ಸದಸ್ಯೆ ಲಕ್ಷ್ಮೀ ಶ್ರೀಧರ್ ಮಾತನಾಡಿ, ಬಾಣಾವರ ಗ್ರಾಮದಲ್ಲಿ ತಾಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಅನೇಕ ವರ್ಷಗಳಿಂದ ಅಧಿಕಾರಿಗಳು ಬಾಡಿಗೆ ವಸೂಲಿ ಮಾಡುತ್ತಿಲ್ಲ. ಅಥವಾ ಬಾಡಿಗೆದಾರರನ್ನು ಖಾಲಿ ಮಾಡಿಸಿ ಬೇರೆಯವರಿಗೆ ಬಾಡಿಗೆ ನೀಡಿದರೇ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತದೆ. ಈ ಬಗ್ಗೆ ಶಾಸಕರು ಮತ್ತು ತಾಪಂ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಸರ್ಕಾರಕ್ಕೆ ಉಂಟಾಗುತ್ತಿರುವ ನಷ್ಟವನ್ನು ಬಾಡಿಗೆದಾರಿಂದ ತಕ್ಷಣ ವಸೂಲಿ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಖಂಡನೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಈ ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದ್ದು ಜನತೆ ಜನಪ್ರತಿನಿಧಿಗಳ ಮನೆಗೆ ಬರುತ್ತಿದ್ದಾರೆ ಎಂದು ಸದಸ್ಯ ವಿಜಯ್‌ಕುಮಾರ್ ಕೆಲವು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಮಿಕ ಇಲಾಖೆ ನಿರೀಕ್ಷಕರಾದ ಪ್ರಭಾಕರ್ ಪ್ರತಿಕ್ರಿಯಿಸಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರಿಗೆ ಇಲಾಖೆ ತೊಂದರೆ ನೀಡುತ್ತಿಲ್ಲಾ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಸಮಸ್ಯೆಉಂಟಾಗುತ್ತಿದ್ದು, ಈ ಸಂಬಂಧ ಗಮನ ಹರಿಸಿ ಕ್ರಮಕೈಗೊಳ್ಳುವ ಭರವಸೆಯನ್ನು ಸದಸ್ಯ ವಿಜಯ್‌ಕುಮಾರ್‌ಗೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷೆ ರೂಪಾ ವಹಿಸಿದ್ದರು. ಉಪಾಧ್ಯಕ್ಷೆ ಪ್ರೇಮಾ ಧರ್ಮೇಶ್ ಹಾಗೂ ತಾಪಂ ಇಒ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ತೆಂಗು ಬೆಳೆ ನಷ್ಟ- ಪರಿಹಾರ ನೀಡಿ: ತಾಲೂಕಿನಲ್ಲಿ ವಿವಿಧ ರೋಗ ಬಾಧೆಗಳಿಂದ ತೆಂಗಿನ ಮರ ಕಳೆದುಕೊಂಡ ಕೆಲವು ರೈತರಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ಹಣವನ್ನು ನೀಡುತ್ತಿಲ್ಲ. ನೂರು ಮರಗಳನ್ನು ಕಳೆದಕೊಂಡ ರೈತರಿಗೆ ಕೇವಲ 6 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಕೊಳಗುಂದ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಸಭೆಯ ಗಮನ ಸೆಳೆದರು.
ಇದಕ್ಕೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಪ್ರತಿಕ್ರಿಯಿಸಿ, ಮರ ಕಳೆದುಕೊಂಡ ರೈತರಿಗೆ ಮರ ಒಂದಕ್ಕೆ 400 ರೂ. ನಂತೆ ಪರಿಹಾರ ನೀಡಲು 32 ಕೋಟಿ ರೂ. ಅನುದಾನ ಬಂದಿದೆ. ಈ ಪೈಕಿ 28 ಕೋಟಿ ರೂ. ಪರಿಹಾರವನ್ನು ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಗಿದೆ. ಅಷ್ಟರಲ್ಲಿ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಕಾರಣ ಇನ್ನೂಳಿದ ಫಲಾನುಭವಿಗಳಿಗೆ ಪರಿಹಾರ ನೀಡಲಾಗಿಲ್ಲ, ಶೀಘ್ರದಲ್ಲೇ ರೈತರ ಖಾತೆಗೆ ಹಣ ತುಂಬುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.