ಪ್ರಜ್ವಲ್‌ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ


Team Udayavani, May 17, 2019, 2:23 PM IST

has-3

ಹಾಸನ: ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ನಾಮ ಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದ ನೀಡಿ ರುವ ಎಲ್ಲಾ ಅಂಶಗಳೂ ಸಮರ್ಪಕ ವಾಗಿವೆ. ಕೆಲವರು ದುರುದ್ದೇಶ ದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪ್ರಮಾಣಪತ್ರದಲ್ಲಿ ಲೋಪವಿದೆ ಎಂದು ಕೆಲವರು ದುರುದ್ದೇಶದಿಂದ ನಿರಂತರವಾಗಿ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು.

ಕುಟುಂಬದ ವಿರುದ್ಧ ಆರೋಪ: ನಮ್ಮ ಕುಟುಂಬ ದವರ ವಿರುದ್ಧ ಆರೋಪ ಮಾಡುತ್ತಿರುವವ ರೊಂದಿಗೆ ಕೆಲವು ಮಾಧ್ಯಮದವೂ ಶಾಮೀಲಾಗಿ ದ್ದಾರೆ. ಲೋಕಸಭಾ ಚುನಾವಣೆ ಆರಂಭವಾಗಿದಾಗಿ ನಿಂದ ಕೆಲವು ಮಾಧ್ಯಮಗಳು ಹೇಗೆ ನಡೆದು ಕೊಂಡಿವೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದ ಅವರು, ಈಗ ಏನೇನು ಆರೋಪ ಮಾಡು ತ್ತಿದ್ದಾರೋ ಅವುಗಳಿಗೆಲ್ಲ ಕಾನೂನು ಪ್ರಕಾರ ಏನು ಉತ್ತರ ಕೊಡಬೇಕೋ ಅದೆಲ್ಲಕ್ಕೂ ಜೆಡಿಎಸ್‌ನ ಚುನಾವಣಾ ಏಜೆಂಟರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ನಾಮಪತ್ರ ಪ್ರಶ್ನಿಸುವಂತಿಲ್ಲ: ಒಂದು ಬಾರಿ ಜಿಲ್ಲಾ ಚುನಾವಣಾಧಿಕಾರಿಯವರು ಅಭ್ಯರ್ಥಿಯ ನಾಮ ಪತ್ರವನ್ನು ಅಂಗೀಕರಿಸಿದ ನಂತರ ಅದರ ಬಗ್ಗೆ ಯಾರೂ ಪ್ರಶ್ನಿಸುವಂತಿಲ್ಲ. ಈ ಬಗ್ಗೆ ಚುನಾವಣಾ ಆಯೋಗವು 2014 ಚುನಾವಣಾ ಸಂದರ್ಭ ದಲ್ಲಿಯೇ ಸ್ಪಷ್ಟಪಡಿಸಿದೆ ಎಂದು ದಾಖಲೆಯ ಪ್ರತಿಯೊಂದನ್ನು ಪ್ರದರ್ಶಿಸಿದ ರೇವಣ್ಣ ಅವರು, ಜಿಲ್ಲಾ ಚುನಾವಣಾಧಿಕಾರಿಯವರು ಹಾಗೂ ರಾಜ್ಯ ಚುನಾವಣಾಧಿಕಾರಿಯವರು ತನಿಖೆ ಎಂದು ಹೇಳುತ್ತಿದ್ದಾರೋ, ಏನು ತನಿಖೆ ಮಾಡುತ್ತಾರೋ ನನಗೆ ಗೊತ್ತಿಲ್ಲ ಎಂದರು.

ಸಿಎಂ ಹುದ್ದೆ ಖಾಲಿ ಇಲ್ಲ: ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿ ಸುವ ಪರಿಸ್ಥಿತಿಯೂ ಇಲ್ಲ. ಅತಂತ್ರ ರಾಜಕೀಯ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ. ಹಾಗಾಗಿ ನಾನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಯಾಗುವ ಅವಶ್ಯಕತೆ ನಿರ್ಮಾಣವಾಗುವುದೂ ಇಲ್ಲ ಎಂದರು.

ಭಿನ್ನಾಭಿಪ್ರಾಯವಿಲ್ಲ: ರೇವಣ್ಣ ಮತ್ತು ಕುಮಾರ ಸ್ವಾಮಿ ನಡುವೆ ಭಿನ್ನಾಭಿಪ್ರಾಯ ಮೂಡಿಸಲೂ ಯಾರಿಂದಲೂ ಸಾಧ್ಯವಿಲ್ಲ. ಅಣ್ಣ – ತಮ್ಮ ಜಗಳ, ಹೊಡೆದಾಡುವರೆಂಬ ಕೆಲವರ ಭ್ರಮೆ ಅಷ್ಟೇ. ಕುಮಾರಸ್ವಾಮಿ ಅವರೇ ಮುಂದಿನ ನಾಲ್ಕು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುವರು. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.